ಶೀಘ್ರದಲ್ಲಿಯೇ ಬೆಂಗಳೂರಲ್ಲಿ ಟೋಯಿಂಗ್ ಮತ್ತೆ ಆರಂಭ : ಗೃಹ ಸಚಿವ ಜಿ.ಪರಮೇಶ್ವರ್

ಡಾ.ಜಿ.ಪರಮೇಶ್ವರ್
ಬೆಂಗಳೂರು : ನಿಲುಗಡೆ ನಿಷೇಧಿತ ಸ್ಥಳಗಳಲ್ಲಿ ನಿಲ್ಲಿಸುವ ವಾಹನಗಳನ್ನು ಕೊಂಡೊಯ್ಯುವ ಟೋಯಿಂಗ್ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಪೊಲೀಸ್ ಇಲಾಖೆ ವತಿಯಿಂದ ಶೀಘ್ರದಲ್ಲಿಯೇ ಆರಂಭಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕೆಲ ರಸ್ತೆಗಳಲ್ಲಿ ನಿಷೇಧವಿದ್ದರೂ ವಾಹನಗಳನ್ನು ನಿಲ್ಲಿಸುತ್ತಿರುವ ಕಾರಣ ಸಂಚಾರ ದಟ್ಟಣೆ ಆಗುತ್ತಿದೆ. ಈ ಬಗ್ಗೆ ಜನಜಾಗೃತಿ ಮೂಡಿಸಿದರೂ ಸಮಸ್ಯೆ ಜೀವಂತವಾಗಿ ಉಳಿದಿದೆ. ಹೀಗಾಗಿ, ಬೆಂಗಳೂರು ನಗರ ಪೊಲೀಸ್ ಇಲಾಖೆ ವತಿಯಿಂದ ಶೀಘ್ರದಲ್ಲಿಯೇ ಟೋಯಿಂಗ್ ಆರಂಭಿಸುತ್ತೇವೆ ಎಂದರು.
ಟೋಯಿಂಗ್ ಸಂಬಂಧ ಈ ಹಿಂದೆ ಗುತ್ತಿಗೆ ನೀಡಲಾಗಿತ್ತು. ಈ ಬಾರಿ ಬೆಂಗಳೂರು ನಗರ ಪೊಲೀಸರೇ ಟೋಯಿಂಗ್ ಮಾಡುತ್ತಾರೆ. ಯಾವುದೇ ಕಂಪೆನಿಗೆ ಗುತ್ತಿಗೆ ನೀಡುವುದಿಲ್ಲ ಎಂದ ಅವರು, ಜನ ಓಡಾಡಲು ರಸ್ತೆ ಮಾಡಿದ್ದಾರೆ ಹೊರತು ಪಾರ್ಕಿಂಗ್ ಮಾಡಲು ಅಲ್ಲ ಎಂದು ನುಡಿದರು.
Next Story





