Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲುಷಿತ ನೀರು ಸೇವನೆಯಿಂದ ಮರಣ ಹೊಂದಿದರೆ...

ಕಲುಷಿತ ನೀರು ಸೇವನೆಯಿಂದ ಮರಣ ಹೊಂದಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ23 Aug 2023 10:06 AM IST
share
ಕಲುಷಿತ ನೀರು ಸೇವನೆಯಿಂದ ಮರಣ ಹೊಂದಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಆ.22: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಮಂಗಳವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚಿಸಲು ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸೂಚಿಸಿದರು.

ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರ ದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ನಾಲ್ಕು ಇಲಾಖೆಗಳ ನಡುವೆ ಸಮನ್ವಯ: ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು. ಹಾಸ್ಟೆಲ್‍ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಪೈಪ್ ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು. ನೈರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

39 ತಾಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸಭೆಯ ಗಮನಕ್ಕೆ ತಂದರು.

ಸ್ವಚ್ಛತೆಯ ಬಗ್ಗೆ ಜಾಗೃತಿ: ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಿ ಎಂದು ಸೂಚಿಸಿದ ಮುಖ್ಯಮಂತ್ರಿ, ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X