ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯ ಆಯುಕ್ತ, ಆಯುಕ್ತ, ಹೆಚ್ಚುವರಿ ಆಯುಕ್ತರ ನೇಮಕ

ಬೆಂಗಳೂರು, ಸೆ.2: ರಾಜ್ಯ ಸರಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೊಳಪಡುವ ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ನಗರ ಪಾಲಿಕೆಗಳ ಮುಖ್ಯ ಆಯುಕ್ತರನ್ನಾಗಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಆಯುಕ್ತರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ-ಪಿ.ರಾಜೇಂದ್ರ ಚೋಳನ್, ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತ-ಡಿ.ಎಸ್.ರಮೇಶ್, ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ-ಪೊಮ್ಮಲ ಸುನಿಲ್ ಕುಮಾರ್, ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತ-ಕೆ.ಎನ್.ರಮೇಶ್, ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರನ್ನಾಗಿ ಡಾ.ರಾಜೇಂದ್ರ ಕೆ.ವಿ. ಅವರನ್ನು ವರ್ಗಾವಣೆ ಮಾಡಲಾಗಿದೆ.
ಹೆಚ್ಚುವರಿ ಆಯುಕ್ತರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಅಭಿವೃದ್ಧಿ)-ಲತಾ ಆರ್., ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಅಭಿವೃದ್ಧಿ)-ಪಾಂಡ್ವೆ ರಾಹುಲ್ ತುಕಾರಾಂ, ಬೆಂಗಳೂರು ಪೂರ್ವ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಅಭಿವೃದ್ಧಿ)-ಲೋಖಂಡೆ ಸ್ನೇಹಲ್ ಸುಧಾಕರ್, ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಅಭಿವೃದ್ಧಿ)-ದಿಗ್ವಿಜಯ್ ಬೊಡ್ಕೆ ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಅಭಿವೃದ್ಧಿ)ರನ್ನಾಗಿ ರಾಹುಲ್ ಶರಣಪ್ಪ ಸಂಕನೂರ್ ಅವರನ್ನು ವರ್ಗಾವಣೆ ಮಾಡಲಾಗಿದೆ..
ವಿಶೇಷ ಆಯುಕ್ತ: ವಿಶೇಷ ಆಯುಕ್ತ(ಆಡಳಿತ, ಕಂದಾಯ ಹಾಗೂ ಐಟಿ)-ಮುನೀಶ್ ಮೌದ್ಗಿಲ್, ವಿಶೇಷ ಆಯುಕ್ತ(ಆರೋಗ್ಯ ಮತ್ತು ಶಿಕ್ಷಣ)-ಸುರಳ್ಕರ್ ವಿಕಾಸ್ ಕಿಶೋರ್, ವಿಶೇಷ ಆಯುಕ್ತ(ಹಣಕಾಸು)-ಡಾ.ಹರೀಶ್ ಕುಮಾರ್ ಕೆ., ವಿಶೇಷ ಆಯುಕ್ತ(ಚುನಾವಣೆ, ವಿಪತ್ತು ನಿರ್ವಹಣೆ ಹಾಗೂ ಸಂಯೋಜನೆ)-ಪ್ರೀತಿ ಗೆಹ್ಲೋಟ್.
ಮರು ಸಂಯೋಜನೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬೆಂಗಳೂರು ಮೆಟ್ರೋಪಾಲಿಟಿನ್ ಟಾಸ್ಕ್ ಫೋರ್ಸ್(ಬಿಎಂಟಿಎಫ್)ನ ಎಡಿಜಿಪಿ ಡಿ.ರೂಪಾ ಅವರ ಹುದ್ದೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬಿಎಂಟಿಎಫ್‍ನ ಎಡಿಜಿಪಿಯಾಗಿ ಹಾಗೂ ಬಿಎಂಟಿಎಫ್ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಎಂ. ಅವರ ಹುದ್ದೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬಿಎಂಟಿಎಫ್‍ನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮರು ಸಂಯೋಜನೆ ಮಾಡಿ ಸರಕಾರ ಆದೇಶ ಹೊರಡಿಸಿದೆ.







