ಗೃಹಜ್ಯೋತಿ: 82 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ
ಬೆಂಗಳೂರು, ಜೂ. 30: 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ‘ಗೃಹಜ್ಯೋತಿ’ ಯೋಜನೆಗೆ ಕೆಲ ದಿನಗಳಲ್ಲಿ 86.24 ಲಕ್ಷಕ್ಕೂ ಅಧಿಕ ಮಂದಿ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆಂದು ಇಂಧನ ಇಲಾಖೆ ತಿಳಿಸಿದೆ.
ಜೂ.30ರ ಶುಕ್ರವಾರ ಸಂಜೆ 6ಗಂಟೆಯ ವರೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 35.37 ಲಕ್ಷಕ್ಕೂ ಅಧಿಕ ಮಂದಿ ಗ್ರಾಹಕರು, ಸೆಸ್ಕ್ ವ್ಯಾಪ್ತಿಯಲ್ಲಿ 13.38 ಲಕ್ಷಕ್ಕೂ ಅಧಿಕ ಮಂದಿ, ಜೆಸ್ಕಾಂ ವ್ಯಾಪ್ತಿಯಲ್ಲಿ 9ಲಕ್ಷ ಗ್ರಾಹಕರು, ಹೆಸ್ಕಾಂ ವ್ಯಾಪ್ತಿಯಲ್ಲಿ 17.86 ಲಕ್ಷ ಗ್ರಾಹಕರು, ಮೆಸ್ಕಾಂ ವ್ಯಾಪ್ತಿಯಲ್ಲಿ 10.12ಲಕ್ಷಕ್ಕೂ ಅಧಿಕ ಮಂದಿ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದು, ಒಟ್ಟಾರೆ ಈವರೆಗೂ 86,24,688 ಮಂದಿ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.
Next Story