Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೃಹಲಕ್ಷ್ಮೀ ಯೋಜನೆ: ಸಮಸ್ಯೆಗಳನ್ನು...

ಗೃಹಲಕ್ಷ್ಮೀ ಯೋಜನೆ: ಸಮಸ್ಯೆಗಳನ್ನು ಪರಿಹರಿಸಲು ಡಿ.27 ರಿಂದ 29ರ ವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌

ವಾರ್ತಾಭಾರತಿವಾರ್ತಾಭಾರತಿ21 Dec 2023 1:44 PM IST
share
ಗೃಹಲಕ್ಷ್ಮೀ ಯೋಜನೆ: ಸಮಸ್ಯೆಗಳನ್ನು ಪರಿಹರಿಸಲು ಡಿ.27 ರಿಂದ 29ರ ವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿ.27 ರಿಂದ 29ರ ವರೆಗೆ ಕ್ಯಾಂಪ್‌ಗಳನ್ನು ಆಯೋಜಿಸಲು ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 19 ರಂದು ಚಾಲನೆ ನೀಡಲಾಗಿದೆ. ಇದುವರೆಗೂ, 1.17 ಕೋಟಿ ಮಹಿಳಾ ಕುಟುಂಬ ಮುಖ್ಯಸ್ಥರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ.

ಈ ಪ್ರಕ್ರಿಯೆಯಲ್ಲಿ ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಯಾಗದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿದ್ದರಿಂದ ನೇರ ನಗದು ಹಣ ವರ್ಗಾವಣೆಗೆ ತೊಂದರೆ ಯಾಗಿದೆ.

ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು ಅಗತ್ಯವಿರುತ್ತದೆ. ಆದ್ದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಕ್ಯಾಂಪ್‌ ಏರ್ಪಡಿಸಲು ರಾಜ್ಯ ಸರಕಾರ ಸೂಚಿಸಿದೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆ ನೀಡಲಾಗಿದೆ.

1. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸತಕ್ಕದ್ದು.

2. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸತಕ್ಕದ್ದು.

3. ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು Electronic Delivery of Citizen Services (EDCS) ತಂಡಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.

4. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.

5. ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸತಕ್ಕದ್ದು.

►ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು.

►ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.

► ಇ-ಕೆವೈಸಿ ಅಪ್‌ಡೇಟ್ ಮಾಡುವುದು.

►ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು.

►ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು.

6. ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ಡಿ.22 ರಂದು ಕ್ಯಾಂಪ್ ಆಯೋಜಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸುವುದು.

7. ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಿ.27 ರಿಂದ 29ರ ವರೆಗೆ ಪ್ರತಿದಿನ ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವುದು.

8. ಕ್ಯಾಂಪ್ ಆಯೋಜಿಸುವ ಕುರಿತು ಫಲಾನುಭವಿಗಳಿಗೆ EDCS ರವರು SMS ಮೂಲಕ ಮಾಹಿತಿ ನೀಡುವುದು.

9. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕ್ಷೇತ್ರಮಟ್ಟದ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ, ಅವರನ್ನು ಕ್ಯಾಂಪ್‌ಗಳಿಗೆ ಕರೆತರುವ ಜವಾಬ್ದಾರಿ ನಿರ್ವಹಿಸುವುದು.

10. ಕ್ಯಾಂಪ್ ಆಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪತ್ರಿಕೆ ಮತ್ತು ಇತರೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡತಕ್ಕದ್ದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X