Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಹಣ : ಸಚಿವೆ...

ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಹಣ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ14 Feb 2025 6:48 PM IST
share
ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಹಣ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣವನ್ನು ಎಲ್ಲ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು, ‘ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ. ಯೋಜನೆಗೆ ಹಣ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಿಲ್ಲ. ಈ ಸಂಬಂಧ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದು ಶೀಘ್ರದಲ್ಲೆ ಹಣ ಜಮಾ ಮಾಡಲು ಸೂಚನೆ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

ಶೀಘ್ರವೇ ಜನಸೇವೆಗೆ: ‘ದೇವರ ದಯೆಯಿಂದ ಸಂಪೂರ್ಣ ಗುಣಮುಖ ಆಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವೆ. ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ’ ಎಂದು ಅವರು ತಿಳಿಸಿದರು.

ನಾನು 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿರುವೆ. ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ ಎಂದ ಅವರು, ಆರು ತಿಂಗಳ ಹಿಂದೆಯೇ ಮೈಕ್ರೋ ಫೈನಾನ್ಸ್ ಸಮಸ್ಯೆ ಬಗ್ಗೆ ತಿಳಿದಿತ್ತು. ನಾನು ತಕ್ಷಣವೇ ಜಿಲ್ಲಾಧಿಕಾರಿ, ನಗರ ಪೋಲೀಸ್ ಆಯುಕ್ತರ ಗಮನಕ್ಕೆ ತಂದಿದ್ದೆ, ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಯವರನ್ನು ಕರೆಸಿ ಮಹಿಳೆಯರಿಗೆ ತೊಂದರೆ ನೀಡಬಾರದು ಎಂದು ಹೇಳಿದ್ದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X