Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ 164 ತಾಲೂಕುಗಳಲ್ಲಿ ಅಂತರ್ಜಲ...

ರಾಜ್ಯದ 164 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಏರಿಕೆ: ಸಚಿವ ಬೋಸರಾಜು

ʼʼಬರ ಪರಿಸ್ಥಿತಿ ನಿರ್ವಹಣೆಗೆ ಸಣ್ಣ ನೀರಾವರಿ ಇಲಾಖೆ ಸಜ್ಜುʼʼ

ವಾರ್ತಾಭಾರತಿವಾರ್ತಾಭಾರತಿ31 Aug 2023 4:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಜ್ಯದ 164 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಏರಿಕೆ: ಸಚಿವ ಬೋಸರಾಜು

ಬೆಂಗಳೂರು, ಆ.31: ಬರ ಪರಿಸ್ಥಿತಿಯನ್ನು ಸಮಪರ್ಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆ.ಸಿ.ವ್ಯಾಲಿ ಮತ್ತು ಎಚ್.ಎನ್. ವ್ಯಾಲಿಯಂತಹ ಯೋಜನೆಗಳಿಂದ ರಾಜ್ಯದ ಬಯಲು ಸೀಮೆಯ 164 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.

ಗುರುವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಪ್ರಕಟವಾಗಿರುವ ಕೇಂದ್ರ ಸರಕಾರದ 6ನೆ ನೀರಾವರಿ ಗಣತಿಯ ಕುರಿತು 2017-18 ರಿಂದ 2021-22ರ ವರೆಗೆ ಸಮೀಕ್ಷೆ ನಡೆಸಲಾಗಿದೆ. 2017, 2018ರಲ್ಲಿ ಮಳೆ ಕಡಿಮೆಯಾಗಿ ಬರದ ಪರಿಸ್ಥಿತಿ ಇತ್ತು. ನಂತರದ ವರ್ಷಗಳಲ್ಲಿ ರಾಜ್ಯಾದ್ಯಂತ ಕೆರೆಗಳನ್ನು ತುಂಬುವ ಏತ ನೀರಾವರಿಯ ಯೋಜನೆಗಳಿಂದಾಗಿ ಅಂತರ್ಜಲ ಮಟ್ಟದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದರು.

ಅಂತರ್ಜಲ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ 700 ಕೆರೆಗಳನ್ನು ನದಿಗಳಿಂದ, ಕಾಲುವೆಗಳಿಂದ ಹಾಗೂ ಬೆಂಗಳೂರು ನಗರದಲ್ಲಿ ಲಭ್ಯವಿರುವ ಎರಡನೆ ಹಂತದ ಸಂಸ್ಕರಿಸಿದ ನೀರನ್ನು ಬಳಸಿ ತುಂಬಿಸಲು ಕ್ರಮವಹಿಸಲಾಗಿದೆ. ಇವುಗಳಲ್ಲಿ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಏತ ನೀರಾವರಿ ಯೋಜನೆಗಳು ಪ್ರಮಖವಾದವು. ಇದಲ್ಲದೇ ರಾಜ್ಯಾದ್ಯಂತ ಕೈಗೊಂಡಿರುವ ಹಲವಾರು ಯೋಜನೆಗಳ ಹಿನ್ನಲೆಯಲ್ಲಿ ರಾಜ್ಯದ 164 ತಾಲೂಕುಗಳಲ್ಲಿ ಅಂತರ್ಜಲ ಪ್ರಮಾಣ ಏರಿಕೆಯಾಗಿದೆ. ಮಲೆನಾಡಿನ ತಾಲೂಕುಗಳಿಗೆ ಹೋಲಿಸಿದಲ್ಲಿ ಬಯಲು ಸೀಮೆಯ ತಾಲೂಕುಗಳಲ್ಲಿ ಅಂತರ್ಜಲ ಹೆಚ್ಚಾಗಿದೆ ಎಂದು ಅವರು ಹೇಳಿದರು.

2022-23ನೆ ಉಲ್ಲೇಖಿತ ವರ್ಷವನ್ನಾಧರಿಸಿ ಕೇಂದ್ರ ಸರಕಾರದ 7ನೆ ಸಣ್ಣ ನೀರಾವರಿ ಗಣತಿ ಕಾರ್ಯವು ಸದ್ಯದಲ್ಲೆ ಪ್ರಾರಂಭವಾಗಲಿದೆ. 2017-18 ಸಾಲಿನ ನಂತರದ ಸಣ್ಣ ನೀರಾವರಿ ಯೋಜನೆಗಳ ಸಾಧನೆ 7 ನೇ ನೀರಾವರಿ ಗಣತಿಯಲ್ಲಿ ಪರಿಗಣಿಸಲ್ಪಡುತ್ತವೆ. ಹಾಗೂ ರಾಜ್ಯದ ಉತ್ತಮ ಸಾಧನೆ ಇಲ್ಲಿ ಪ್ರತಿಫಲವಾಗುವ ನಿರೀಕ್ಷೆಯಿದೆ ಎಂದು ಬೋಸರಾಜು ಹೇಳಿದರು.

ಬರ ಪರಿಸ್ಥಿತಿ ನಿರ್ವಹಣೆಗಾಗಿ ಇಲಾಖೆ ಸಜ್ಜು: ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 3673 ಕೆರೆಗಳಿವೆ. ಏತ ನೀರಾವರಿ ಯೋಜನೆಗಳ ಮೂಲಕ ಇವುಗಳನ್ನು ತುಂಬಿಸುವ ಕಾರ್ಯ ನಡೆಯುತ್ತದೆ. ಈ ಬಾರಿ ಕಡಿಮೆ ಮಳೆಯಾಗಿರುವ ಹಿನ್ನಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೆರೆಗಳಲ್ಲಿ ನೀರು ತುಂಬಿಲ್ಲ. ಅಂಕಿ ಅಂಶಗಳನ್ನು ಪರಿಗಣಿಸಿದಲ್ಲಿ ಶೇ.30ಕ್ಕೂ ಕಡಿಮೆ ನೀರು ಶೇಖರಣೆ ಇರುವ ಕೆರೆಗಳ ಸಂಖ್ಯೆ 334. ಇದರ ಶೇಕಡವಾರು ಗಮನಿಸಿದಲ್ಲಿ ಇದು ಕೇವಲ ಶೇ.9., ಆ.24ರಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ವಿಸ್ತ್ರತ ಸಭೆಯನ್ನು ನಡೆಸಿ ವಸ್ತುಸ್ಥಿತಿಯ ಮಾಹಿತಿಯನ್ನು ಪಡೆದುಕೊಂಡಿದ್ದೇನೆ ಎಂದು ಅವರು ಹೇಳಿದರು.

ಕೆರೆಗಳಲ್ಲಿ ನೀರನ್ನು ಸಂಗ್ರಹಿಸಿ ಇಟ್ಟುಕೊಂಡು ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಣ್ಣ ನೀರಾವರಿ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಯ ವ್ಯಾಪ್ತಿಯಲ್ಲಿನ ಕೆರೆಗಳ ತೂಬುಗಳಿಂದ ಕೃಷಿ ಚಟುವಟಿಕೆಗಳಿಗೆ ನೀರನ್ನ ಹರಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಬರ್ಂಧಿಸಲಾಗಿದೆ. ಇದೇ ಸಮಯದಲ್ಲಿ ಕುಡಿಯುವ ನೀರಿನ ಅವಶ್ಯಕತೆಗೆ ಹೆಚ್ಚಿನ ಒತ್ತು ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

ಪಿಎಂಕೆಎಸ್‍ವೈ ಮತ್ತು ಅಟಲ್ ಭೂಜಲ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರಕ್ಕೆ ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಪಿಎಂಕೆಎಸ್‍ವೈ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರ ಶೇ.60 ರಷ್ಟು ರಾಜ್ಯ ಸರಕಾರ ಶೇ.40ರಷ್ಟು ಅನುದಾನ ನೀಡುವ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರ 439 ಕೋಟಿ ರೂ.ಗಳ 138 ಕಾಮಗಾರಿಗಳಿಗೆ ಒಪ್ಪಿಗೆ ನೀಡಿದ್ದು, ಇನ್ನೂ 1892 ಕೋಟಿ ರೂಪಾಯಿಗಳ ವೆಚ್ಚದ 851 ಕಾಮಗಾರಿಗಳ ಪ್ರಸ್ತಾವನೆಗೆ ಒಪ್ಪಿಗೆ ನೀಡುವ ಕಾರ್ಯ ಇನ್ನೂ ಬಾಕಿಯಿದೆ ಎಂದು ಬೋಸರಾಜು ಹೇಳಿದರು.

ಕೇಂದ್ರ ಸರಕಾರ ಶೇ.100ರಷ್ಟು ಅನುದಾನ ನೀಡುವ ಅಟಲ್ ಭೂಜಲ ಯೋಜನೆಯ ಅಡಿಯಲ್ಲಿ 2020 ರಿಂದ 5 ವರ್ಷಗಳ ಬಳಕೆಗಾಗಿ 1007 ಕೋಟಿ ರೂ.ಗಳನ್ನು ನೀಡಿದೆ. ಸಣ್ಣ ನೀರಾವರಿ, ಕೃಷಿ, ತೋಟಗಾರಿಕೆ ಮತ್ತು ಜಲಾನಯನ ಇಲಾಖೆಯಗಳು ಸಮನ್ವಯದಿಂದ 14 ಜಿಲ್ಲೆಗಳ 41 ತಾಲೂಕುಗಳ 1199 ಗ್ರಾಮ ಪಂಚಾಯತಿಗಳಲ್ಲಿ ಅಂತರ್ಜಲ ಅಭಿವೃದ್ದಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 50 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X