Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಗೃಹ ಆರೋಗ್ಯʼ ಯೋಜನೆಯಡಿ 14...

ʼಗೃಹ ಆರೋಗ್ಯʼ ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯಾದ್ಯಂತ ʼಗೃಹ ಆರೋಗ್ಯʼ ಯೋಜನೆ ವಿಸ್ತರಣೆಯ ಕಾರ್ಯಾಗಾರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ2 Jun 2025 5:43 PM IST
share
ʼಗೃಹ ಆರೋಗ್ಯʼ ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡಿವೆ. ಖಾಸಗಿ ಆರೋಗ್ಯ ವಯಲದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಅಸಾಂಕ್ರಾಮಿಕ ರೋಗಗಳನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಈ ಕಾರ್ಯವನ್ನ ಸರ್ಕಾರವೇ ಮಾಡಬೇಕು, ಹೊರತಾಗಿ ಬೇರೆ ಯಾರು ಆಸಕ್ತಿ ತೋರುವುದಿಲ್ಲ. ಹೀಗಾಗಿ ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆರೋಗ್ಯ ಇಲಾಖೆಯಿಂದ ಅಸಾಂಕ್ರಾಮಿಕ ರೋಗಗಳನ್ನ ತಡೆಗಟ್ಟುವತ್ತ ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಎಲ್ಲ ಮನೆಗಳಲ್ಲಿ 30 ವರ್ಷ ಮೇಲ್ಪಟ್ಟವರನ್ನು ತಪಾಸಣೆಗೆ ಒಳಪಡಿಸಿ, ಸೂಕ್ತ ಔಷಧಗಳನ್ನು ಅವರ ಬಳಿಗೆ ತಲುಪಿಸುವ ಕಾರ್ಯ ಪ್ರಾರಂಭಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಗೃಹ ಆರೋಗ್ಯ ಯೋಜನೆಯನ್ನು ಮೊದಲು ಕೋಲಾರ ಜಿಲ್ಲೆಯಲ್ಲಿ ಮಾತ್ರ ಪ್ರಾರಂಭಿಸಿದಾಗ ಹಲವು ಸಂಗತಿಗಳು ಬೆಳಕಿಗೆ ಬಂದವು. ಅವೆಲ್ಲವನ್ನು ತುಲನೆ ಮಾಡಿ ಯೋಜನೆಯಲ್ಲಿ ಒಂದಿಷ್ಟು ಬದಲಾವಣೆಗಳನ್ನ ತರಲಾಗಿದೆ. ಆಶಾ ಕಾರ್ಯಕರ್ತರಯರಿಂದ ಹಿಡಿದು ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಿ, ಸ್ಪಷ್ಟ ಮಾಹಿತಿಯುಳ್ಳ ಕೈಪಿಡಿ ನೀಡಿದ್ದೇವೆ. ತಪಾಸಣೆ ಬಳಿಕ ರೋಗಿಗಳ ಮೇಲ್ವಿಚಾರಣೆ ಕೂಡ ನಡೆಯಬೇಕು. ಆ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಯಾರು ಏನು ಮಾಡಬೇಕು ಎಂಬ ಸ್ಪಷ್ಟ ಚಿತ್ರಣವನ್ನು ಆರೋಗ್ಯ ಸಿಬ್ಬಂದಿಗಳಿಗೆ ನೀಡಲಾಗಿದೆ ಎಂದರು.

ಯೋಜನೆಯಲ್ಲಿ 30 ವರ್ಷ ಮೇಲ್ಪಟ್ಟ ವಯಸ್ಸಿನ ವ್ಯಕ್ತಿಗಳಿಗೆ ಉಚಿತವಾಗಿ ಪ್ರಮುಖ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ, ಮತ್ತು ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ರೋಗಗಳ ತಪಾಸಣೆ ಮತ್ತು ನಿರ್ವಹಣೆಯನ್ನು ನಡೆಸಲಾಗುವುದು. ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳ ಮೂಲಕ ತಪಾಸಣಾ ಕಾರ್ಯಕ್ಕೆ ನೆರವಾಗುವರು. ಸಮುದಾಯ ಆರೋಗ್ಯ ಅಧಿಕಾರಿಗಳು ತಪಾಸಣೆ ನಡೆಸಿ NCD ಪೊರ್ಟಲ್ ನಲ್ಲಿ ಡೇಟಾ ನಮೂದಿಸಲಿದ್ದು, ರಕ್ತದೊತ್ತಡ, ಡಯಾಬಿಟಿಸ್ ಹೊಂದಿದವರಿಗೆ ಸ್ಥಳದಲ್ಲೇ ಔಷಧಿಗಳನ್ನು ಉಚಿತವಾಗಿ ಒದಗಿಸುವ ವ್ಯವಸ್ಥೆಯನ್ನು ಗೃಹ ಆರೋಗ್ಯ ಯೋಜನೆಯಲ್ಲಿ ಕಲ್ಪಿಸಲಾಗಿದೆ. ಪ್ರತಿ ಜಿಲ್ಲೆಗಳ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ ಗೃಹ ಆರೋಗ್ಯ ತರಬೇತಿ ಕಾರ್ಯಾಗಾರಗಳನ್ನ ಹಮ್ಮಿಕೊಳ್ಳಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

14 ಅಸಾಂಕ್ರಾಮಿಕ ರೋಗಗಳ ಉಚಿತ ತಪಾಸಣೆ ಮತ್ತು ಔಷಧ ವಿತರಣೆ :

► ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್, ಡಯಾಬೆಟಿಕ್ ಫೂಟ್ ಮತ್ತು ರೆಟಿನೋಪತಿ, ಮಾನಸಿಕ ಆರೋಗ್ಯ ಅಸ್ವಸ್ಥತೆಗಳು, ನರವೈಜ್ಞಾನಿಕ ಅಸ್ವಸ್ಥತೆಗಳು, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ದೀರ್ಘಕಾಲದ ಮೂತ್ರಪಿಂಡದ ಕಾಯಿಲೆ, ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ ಅಲೋಹಾಲ್ ರಹಿತ ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ ಮತ್ತು ರಕ್ತಹೀನತೆಯ (19-29 ವರ್ಷ ವಯಸ್ಸಿನವರಿಗೆ) ಆರೋಗ್ಯ ತಪಾಸಣೆಯನ್ನು ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ (AAM) ಉಚಿತವಾಗಿ ನಡೆಸಲಾಗುವುದು.

► ರೋಗನಿರ್ಣಯವಾದ ನಂತರ, ವ್ಯಕ್ತಿಗಳು ಹತ್ತಿರದ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತೆರಳಿ ಆರೋಗ್ಯ ತಪಾಸಣೆ, ನಿರ್ವಹಣೆ ಮತ್ತು ಉಚಿತವಾಗಿ ಅಸಾಂಕ್ರಾಮಿಕ ರೋಗಗಳ ಶಿಷ್ಟಾಚಾರದ ಔಷಧಿಗಳನ್ನು ಪಡೆಯಬಹುದು.‌

ಗೃಹ ಆರೋಗ್ಯ ಯೋಜನೆಯ ಉದ್ದೇಶಗಳು :

► ಅಸಾಂಕ್ರಾಮಿಕ ರೋಗಗಳನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಮತ್ತು ಜಾಗೃತಿ ಹೆಚ್ಚಿಸುವುದು.

► ಸಕಾಲದಲ್ಲಿ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಗಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು.

► ವಿಕೇಂದ್ರೀಕೃತ ಆರೋಗ್ಯ ಸೇವೆಗಳ ಮೂಲಕ ನಿರಂತರ ಆರೈಕೆಯನ್ನು ಖಚಿತಪಡಿಸುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X