Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ...

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಮರುಪರಿಶೀಲನೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ19 Aug 2026 11:44 PM IST
share
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಮರುಪರಿಶೀಲನೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಅರ್ಜಿ ಮರುಪರಿಶೀಲನೆಗಾಗಿ ಸೇವಾ ಸಿಂಧು ಕೇಂದ್ರಗಳು ಹಾಗೂ ಮನೆ-ಮನೆ ಸಮೀಕ್ಷೆಯ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಮರುಪರಿಶೀಲನೆ ಪ್ರಕ್ರಿಯೆಯಲ್ಲಿ ಫಲಾನುಭವಿಗಳ ಬಯೊಮೆಟ್ರಿಕ್/ಫೇಸ್ ಆಥೆಂಟಿಕೇಶನ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಇದೇ ಉದ್ದೇಶಕ್ಕಾಗಿ ಇ-ಡಿಸಿಎಸ್ ಮೂಲಕ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದ್ದು, ಅಂತಿಮ ಪರಿಶೀಲನಾ ಹಂತದಲ್ಲಿದೆ. ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರಕಾರ ಇದುವರೆಗೂ 76,951ಕೋಟಿ ರೂ. ಪಾವತಿ ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು 1,24,48,938 ಫಲಾನುಭವಿಗಳಿದ್ದಾರೆ. ಪ್ರತಿ ಮನೆಯ ಯಜಮಾನಿಗೆ ಇದುವರೆಗೂ 32 ಕಂತುಗಳಲ್ಲಿ ತಲಾ 2000 ರೂ.ಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಯೋಜನೆ ಆರಂಭವಾದಾಗಿನಿಂದ ಪ್ರಸಕ್ತ ಸಾಲಿನ ಜೂನ್ ಅಂತ್ಯದವರೆಗೆ ಒಟ್ಟು 3,13,297 ಫಲಾನುಭವಿಗಳು ಮರಣ ಹೊಂದಿದ್ದಾರೆ. ಈ ಪೈಕಿ 1,10,562 ಫಲಾನುಭವಿಗಳ ಖಾತೆಗೆ ಮರಣಾ ನಂತರವೂ 117.31 ಕೋಟಿ ರೂ. ಹಣ ಜಮೆಯಾಗಿದ್ದು, ಈ ಪೈಕಿ ಈವರೆಗೆ 40.07 ಕೋಟಿ ರೂ. ಹಣ ಮಾತ್ರ ಸರಕಾರದ ಲೆಕ್ಕಶೀರ್ಷಿಕೆಗೆ ಮರುಜಮೆಯಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ.


ಯೋಜನೆ ದುರುಪಯೋಗ ತಡೆಯಲು ಮರುಪರಿಶೀಲನೆ:

‘ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿತರಾದವರಲ್ಲಿ 3,13,297 ಫಲಾನುಭವಿಗಳು ಮೃತಪಟ್ಟಿದ್ದಾರೆ. ಅವರ ಖಾತೆಗೆ 117.31 ಕೋಟಿ ರೂ. ಹಣ ಜಮೆಯಾಗಿದೆ. ಹಣ ದುರುಪಯೋಗ ಆಗುತ್ತಿರುವುದು ಸರಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮರುಪರಿಶೀಲನೆ ಕೈಗೊಳ್ಳಲಾಗಿದೆ. ಮರಣ ಹೊಂದಿದ ಫಲಾನುಭವಿಯ ಪರ್ಯಾಯವಾಗಿ ಕುಟುಂಬದ ಇತರ ಸದಸ್ಯರನ್ನು ಫಲಾನುಭವಿಯಾಗಿ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು(24,705) ಫಲಾನುಭವಿಗಳು ಮೃತಪಟ್ಟಿದ್ದರೆ, ಕೊಡಗು ಜಿಲ್ಲೆಯಲ್ಲಿ ಅತಿಕಡಿಮೆ (2991)ಫಲಾನುಭವಿಗಳು ಮೃತಪಟ್ಟಿದ್ದಾರೆ. ಮೃತರ ಖಾತೆಗೆ ಜಮೆಯಾಗಿದ್ದ ಹಣ ವಾಪಸ್ ಪಡೆಯುವ ಪ್ರಕ್ರಿಯೆ ಜಿಲ್ಲಾವಾರು ನಡೆಯುತ್ತಿದೆ.

- ದಿನೇಶ್ ಗೂಳಿಗೌಡ, ವಿಧಾನ ಪರಿಷತ್ ಸದಸ್ಯ


Tags

Gruha LakshmiD.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X