Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಳೆದೆರಡು ತಿಂಗಳಿಂದ ಬರದಿರುವ...

ಕಳೆದೆರಡು ತಿಂಗಳಿಂದ ಬರದಿರುವ ಗೃಹಲಕ್ಷ್ಮಿ ಯೋಜನೆ ಹಣ ಒಂದೇ ಬಾರಿ ಬ್ಯಾಂಕ್ ಖಾತೆಗೆ ಪಾವತಿಯಾಗಲಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

"ಗೃಹಲಕ್ಷ್ಮಿ ಯೋಜನೆ ಎಂದಿಗೂ ಸ್ಥಗಿತ ಆಗುವುದಿಲ್ಲ"

ವಾರ್ತಾಭಾರತಿವಾರ್ತಾಭಾರತಿ16 Sept 2024 7:31 PM IST
share
ಕಳೆದೆರಡು ತಿಂಗಳಿಂದ ಬರದಿರುವ ಗೃಹಲಕ್ಷ್ಮಿ ಯೋಜನೆ ಹಣ ಒಂದೇ ಬಾರಿ ಬ್ಯಾಂಕ್ ಖಾತೆಗೆ ಪಾವತಿಯಾಗಲಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಸ್ಥಗಿತ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೆ ಹಲವು ಬಾರಿ ಗೃಹಲಕ್ಷ್ಮೀ ಯೋಜನೆ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಕಳೆದೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಪಾವತಿಯಾಗಲಿದೆ ಎಂದು ತಿಳಿಸಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.

ಮಹಿಳೆಯರ ರಕ್ಷಣೆಗೆ ಸಮಿತಿ ರಚನೆಯಾಗಲಿ: ಚಿತ್ರರಂಗದ ಕಲಾವಿದೆಯರ ಜೊತೆ ಮಹಿಳಾ ಆಯೋಗ ಸಭೆ ಆಯೋಜಿಸಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಖಂಡಿತಾ ಸಮಿತಿ ರಚನೆ ಆಗಬೇಕು. ನಾನು ಕೂಡ ಸಮಿತಿ ರಚನೆ ಆಗಲಿ ಅಂತ ಹೇಳುತ್ತೇನೆ. ಮುಖ್ಯಮಂತ್ರಿ ಈಗಾಗಲೇ ಮಾಹಿತಿ ಪಡೆದಿದ್ದಾರೆ. ಚಿತ್ರರಂಗ ಅಷ್ಟೇ ಅಲ್ಲ, ಯಾವ ಕ್ಷೇತ್ರದಲ್ಲೂ ಮಹಿಳೆಯರಿಗೆ ದೌರ್ಜನ್ಯ ಆಗಬಾರದು. ಈ ಬಗ್ಗೆ ನನ್ನ ಬಳಿ ಯಾವ ನಟಿಯರೂ ಬಂದು ಮಾತನಾಡಿಲ್ಲ ಎಂದು ಹೇಳಿದರು.

ಅಂಗನವಾಡಿಗಳಲ್ಲಿ ಮುಂದಿನ ತಿಂಗಳಿಂದ ಗಟ್ಟಿ ಬೆಲ್ಲ ವಿತರಣೆ: ಪಾಲಕರು ನಿರಾಕರಿಸಿದ ಕಾರಣ ಸಾವಯವ(ಆಗ್ರ್ಯಾನಿಕ್) ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೆ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು. ಒಂದೂವರೆ ವರ್ಷದ ಹಿಂದಿನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಸಾವಯವ ಬೆಲ್ಲ ನೀಡಲಾಗುತ್ತಿತ್ತು. ಆದರೆ, ಪಾಲಕರು ವಿರೋಧಿಸಿದ ಕಾರಣ, ಅ.1ರಿಂದಲೇ ಗಟ್ಟಿ ಬೆಲ್ಲ ನೀಡುವುದಾಗಿ ಅವರು ತಿಳಿಸಿದರು.

ಕರ್ನಾಟಕದಲ್ಲಿರುವ 139 ಎಂಎಸ್‍ಪಿಟಿಸಿಗಳನ್ನು ಉನ್ನತೀಕರಿಸಲು ಹೊರಟ್ಟಿದ್ದೇವೆ. ಉತ್ತಮ ಲ್ಯಾಬ್ ಸೌಲಭ್ಯಗಳನ್ನು ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಚೆನ್ನೈ ಮೂಲದ ಸಂಸ್ಥೆಯಿಂದ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಕೆಯಾಗುತ್ತಿದೆ. 15 ವರ್ಷಗಳಿಂದಲೂ ಇದು ನಡೆದುಕೊಂಡು ಬರುತ್ತಿದೆ. ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೆ ಪೌಡರ್ ತಯಾರಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ 200 ಕೋಟಿ ರೂ.ವೆಚ್ಚ ಮಾಡಲಾಗುತ್ತದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X