Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಗೃಹಲಕ್ಷ್ಮಿʼ ಯೋಜನೆಯ ಫಲಾನುಭವಿಗಳು...

ʼಗೃಹಲಕ್ಷ್ಮಿʼ ಯೋಜನೆಯ ಫಲಾನುಭವಿಗಳು ಸಹಾಯಧನವನ್ನು ಹಕ್ಕು ಎಂದು ಪ್ರತಿಪಾದಿಸಲಾಗದು; ಹೈಕೋರ್ಟ್‌ಗೆ ರಾಜ್ಯ ಸರ್ಕಾರ

ವಾರ್ತಾಭಾರತಿವಾರ್ತಾಭಾರತಿ5 Nov 2026 11:05 PM IST
share
ʼಗೃಹಲಕ್ಷ್ಮಿʼ ಯೋಜನೆಯ ಫಲಾನುಭವಿಗಳು ಸಹಾಯಧನವನ್ನು ಹಕ್ಕು ಎಂದು ಪ್ರತಿಪಾದಿಸಲಾಗದು; ಹೈಕೋರ್ಟ್‌ಗೆ ರಾಜ್ಯ ಸರ್ಕಾರ

ಬೆಂಗಳೂರು: 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳು ಮಾಸಿಕ 2 ಸಾವಿರ ರೂ. ಆರ್ಥಿಕ ನೆರವನ್ನು ತಮ್ಮ ಹಕ್ಕು ಎಂದು ಪ್ರತಿಪಾದಿಸುವಂತಿಲ್ಲ, ಯೋಜನೆಯ ಅನುಷ್ಠಾನವು ಆಡಳಿತಾತ್ಮಕ ಅನಿವಾರ್ಯತೆಗಳು ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಒಳಪಟ್ಟಿರುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಯಡಿ 1.26 ಕೋಟಿ ಮಹಿಳಾ ಫಲಾನುಭವಿಗಳಿಗೆ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳ ತಲಾ 2 ಸಾವಿರ ರೂ. ಸಹಾಯಧನದ ಒಟ್ಟು 5 ಸಾವಿರ ಕೋಟಿ ರೂ. ಹಿಂಬಾಕಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಆರ್. ಗಂಗಾ ಹಾಗೂ ಜಿ.ಡಿ. ಪವಿತ್ರಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ತಾರಾನಾಥ್ ಪೂಜಾರಿ ಅವರು ಅರ್ಜಿಗೆ ಆಕ್ಷೇಪಣಾ ಹೇಳಿಕೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

ಯೋಜನೆಯ ಅನುಷ್ಠಾನವು ಆಡಳಿತಾತ್ಮಕ ಅನಿವಾರ್ಯತೆಗಳು ಮತ್ತು ರಾಜ್ಯದ ಆರ್ಥಿಕ ಸಂಕಷ್ಟಗಳಿಗೆ ಒಳಪಟ್ಟಿರುತ್ತದೆ. ಮಹಿಳೆಯರನ್ನು ಸಬಲಗೊಳಿಸುವ ಉದ್ದೇಶದಿಂದ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಆರ್ಥಿಕ ನೆರವು ನೀಡಲು 'ಗೃಹಲಕ್ಷ್ಮಿ' ಯೋಜನೆಯನ್ನು ಪರಿಚಯಿಸಲಾಗಿದೆಯಾದರೂ, ಅದರ ಅನುಷ್ಠಾನವು ಆಡಳಿತಾತ್ಮಕ ಅಗತ್ಯಗಳನ್ನು ಅವಲಂಬಿಸಿದೆ. ಕಲ್ಯಾಣ ಯೋಜನೆಯ ಅಸ್ತಿತ್ವವಷ್ಟೇ ಫಲಾನುಭವಿಗಳಿಗೆ ನ್ಯಾಯಾಂಗ ಮಧ್ಯಪ್ರವೇಶದ ಮೂಲಕ ಆರ್ಥಿಕ ನೆರವು ಪಡೆಯುವ ನಿರಾಕರಿಸಲಾಗದ ಹಕ್ಕನ್ನು ನೀಡುವುದಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.

ರಾಜ್ಯವು ನೈಜ ಆರ್ಥಿಕ ಸಂಕಷ್ಟಗಳಿಂದಾಗಿ ನೆರವು ಬಿಡುಗಡೆ ಮಾಡಲು ಸಾಧ್ಯವಾಗದಿರುವ ಸಂದರ್ಭದಲ್ಲಿ, 'ನ್ಯಾಯಸಮ್ಮತ ನಿರೀಕ್ಷೆಯ ಸಿದ್ಧಾಂತ' ಆಧರಿಸಿ ಆರ್ಥಿಕ ನೆರವು ಪಡೆಯುವ ಹಕ್ಕನ್ನು ನೀಡುವುದಿಲ್ಲ. ಅದರ ಆಧಾರದಲ್ಲಿ ಹಣ ಬಿಡುಗಡೆಗೆ ಒತ್ತಾಯಿಸುವಂತಿಲ್ಲ. ಆದ್ದರಿಂದ, ಫಲಾನುಭವಿಗಳು ಇದನ್ನು ತಮ್ಮ ಹಕ್ಕು ಎಂದು ಪರಿಗಣಿಸಿ ನ್ಯಾಯಾಂಗ ಮಧ್ಯಪ್ರವೇಶದ ಮೂಲಕ ಯೋಜನೆ ಜಾರಿಗೊಳಿಸುವಂತೆ ಕೋರುವಂತಿಲ್ಲ ಎಂದು ಸರ್ಕಾರ ಆಕ್ಷೇಪಣೆಯಲ್ಲಿ ತಿಳಿಸಿದೆ.

2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಸಹಾಯಧನವನ್ನು ಆರ್ಥಿಕ ಸಂಕಷ್ಟದ ಕಾರಣದಿಂದ ಬಿಡುಗಡೆ ಮಾಡಿಲ್ಲ ಎಂಬ ಸರ್ಕಾರದ ಒಪ್ಪಿಗೆಯ ಹಿನ್ನೆಲೆಯಲ್ಲಿ ಈ ಆಕ್ಷೇಪಣೆ ಸಲ್ಲಿಸಲಾಗಿದೆ. ಈ ಎರಡು ತಿಂಗಳ ಸಹಾಯಧನ ಬಿಡುಗಡೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಹಣಕಾಸು ಇಲಾಖೆಗೆ ಸಲ್ಲಿಸಲಾಗಿತ್ತು. ಆದರೆ, ಅಗತ್ಯ ಅನುದಾನ ಬಿಡುಗಡೆಯಾಗಿರಲಿಲ್ಲ. ಆದ್ದರಿಂದ, ಕಾನೂನಿನ ದೃಷ್ಟಿಯಿಂದ ಅಥವಾ ವಾಸ್ತವಾಂಶಗಳ ಆಧಾರದ ಮೇಲೆ ಅರ್ಜಿ ವಿಚಾರಣೆಗೆ ಯೋಗ್ಯವಲ್ಲ ಎಂದು ಆಕ್ಷೇಪಣೆಯಲ್ಲಿ ತಿಳಿಸಿರುವ ಸರ್ಕಾರ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸುವಂತೆ ಕೋರಿದೆ.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಸರ್ಕಾರದ ಆಕ್ಷೇಪಣೆಗೆ ಪ್ರತ್ಯುತ್ತರ ಸಲ್ಲಿಸಲು ಅರ್ಜಿದಾರರ ಪರ ವಕೀಲರಿಗೆ 2 ವಾರ ಕಾಲಾವಕಾಶ ನೀಡಿ, ಅರ್ಜಿ ವಿಚಾರಣೆ ಮುಂದೂಡಿತು.

Tags

Gruhalakshmi SchemeHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X