Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ಸರಕಾರದ ನಿರ್ಣಯದಂತೆ...

ಕೇಂದ್ರ ಸರಕಾರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್: ಸಚಿವ ಡಾ.ಶರಣಪ್ರಕಾಶ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ23 July 2025 4:02 PM IST
share
ಕೇಂದ್ರ ಸರಕಾರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್: ಸಚಿವ ಡಾ.ಶರಣಪ್ರಕಾಶ ಪಾಟೀಲ್

ಬೆಂಗಳೂರು: ಕೇಂದ್ರ ಸರ್ಕಾರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಎಸ್ಟಿ ಮಂಡಳಿ ಮುಖ್ಯಸ್ಥರು ಹಣಕಾಸು ಸಚಿವರು. ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಅದರಂತೆ ಇಂಪ್ಲಿಮೆಂಟ್ ಮಾಡಲಾಗುತ್ತದೆ. ಜಿಎಸ್ ಟಿ ಎಲ್ಲವನ್ನು ಕೇಂದ್ರ ಸರಕಾರ ಸಂಗ್ರಹ ಮಾಡುತ್ತದೆ, ಬಳಿಕ ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ನಾವು ಹೇಗೆ ನೊಟೀಸ್ ಕೊಡಲು ಸಾಧ್ಯ? ಎಲ್ಲ ನಿರ್ಧಾರವನ್ನು ಕೇಂದ್ರ ಸರಕಾರವೇ ಮಾಡಿದೆ ಎಂದು ಅವರು ವಿವರಿಸಿದರು.

ಜಗದೀಪ್ ಧನ್ಕರ್ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ

ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಉಪರಾಷ್ಟ್ರಪತಿ ಅನಿರೀಕ್ಷಿತ ರಾಜೀನಾಮೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದೇ ಇದಕ್ಕೆ ಕಾರಣ. ಬಿಜೆಪಿಯಲ್ಲಿರುವ ಸರ್ವಾಧಿಕಾರ ಧೋರಣೆಯೇ ಜಗದೀಪ್ ಧನಕರ್ ಅವರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ ಎಂದು ಸಚಿವರು ಆರೋಪಿಸಿದರು.

ಇಡೀ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿದರೆ ಬಿಜೆಪಿಯಲ್ಲಿ ಏನೋ ಸರಿಯಲ್ಲಿ ಎಂಬುದು ಸ್ಪಷ್ಟವಾಗುತ್ತದೆ. ಇಡೀ ಪಕ್ಷ ಇಬ್ಬರ ಕೈಯಲ್ಲಿದೆ. ಸರ್ವಾಧಿಕಾರ ಹೆಚ್ಚಾಗಿರುವುದರಿಂದ ಬೇರೆ ಯಾವ ನಾಯಕರೂ ಮಾತನಾಡದೇ ಮುಗಮ್ಮಾಗಿದ್ದಾರೆ. ಜನರಿಗೆ ಇದು ಗೊತ್ತಾಗುವುದಿಲ್ಲ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಆದರೆ ಇಡೀ ಪ್ರಕರಣದಿಂದ ಬಿಜೆಪಿಯ ಬಣ್ಣ ಸಂಪೂರ್ಣ ಬಯಲಾಗಿದೆ ಎಂದು ಡಾ.ಪಾಟೀಲ್ ದೂರಿದರು.

ಬಿಜೆಪಿಯಲ್ಲಿ ಪ್ರಜಾಪ್ರಭುತ್ವ, ನೀತಿ-ನಿಯಮಗಳು ಇಲ್ಲ. ಕೇಂದ್ರ ಸರ್ಕಾರ ಕೂಡ ಸಂವಿಧಾನ ಪಾಲನೆ ಮಾಡುತ್ತಿಲ್ಲ. ಸರ್ಕಾರವನ್ನು ಮುನ್ನಡೆಸುತ್ತಿರುವವರು ಇದುವರೆಗೂ ಒಂದಾದರೂ ಸುದ್ದಿಗೋಷ್ಠಿ ಮಾಡಿದ್ದಾರಾ? ಏಕಪಕ್ಷೀಯ ನಿರ್ಧಾರಗಳೇ ಹೆಚ್ಚಾಗಿ ತೆಗೆದುಕೊಳ್ಳಲಾಗುತ್ತದೆ. ಇಂಥ ಅಪಸವ್ಯಗಳಿಂದಲೇ ಬಿಜೆಪಿಯಲ್ಲಿ ಅನಾರೋಗ್ಯ ಪರಿಸ್ಥಿತಿ ಇದೆ ಎಂದು ಸಚಿವರು ಟೀಕಿಸಿದರು.

ಗ್ಯಾರಂಟಿಗಳಿಂದ ಹೆಚ್ಚಾದ ತಲಾ ಆದಾಯ

ನಮ್ಮ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಳಿಂದ ಕರ್ನಾಟಕದಲ್ಲಿ ತಲಾ ಆದಾಯ ಹೆಚ್ಚಾಗಿದೆ. ನಾವೀಗ ದೇಶಕ್ಕೆ ನಂಬರ್ ಒನ್ ಸ್ಥಾನದಲ್ಲಿದ್ದೇವೆ ಎಂದು ಸಚಿವರು ತಿಳಿಸಿದರು.

50 ಸಾವಿರ ಕೋಟಿ ರೂ. ನೇರವಾಗಿ ಜನರಿಗೆ ತಲುಪುತ್ತಿದೆ. ಕರ್ನಾಟಕದಲ್ಲಿ ಜನಸ್ನೇಹಿ ಸರಕಾರವಿದೆ. ಜನೋಪಯೋಗಿ ಆರ್ಥಿಕ ನೀತಿಗಳಿಂದ ಸುಧಾರಣೆಯಾಗುತ್ತಿದೆ. ನಮ್ಮ ಕಾಂಗ್ರೆಸ್ ಅಧಿಕಾರದಲ್ಲಿ ಭೂ ಸುಧಾರಣಾ ಕಾಯಿದೆ ಸೇರಿದಂತೆ ಒಳ್ಳೊಳ್ಳೆ ಯೋಜನೆಗಳು ಅನುಷ್ಠಾನಕ್ಕೆ ಬಂದಿವೆ. ಇದು ತಲಾದಾಯ ಹೆಚ್ಚಳಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರಣವಾಗಿದೆ ಎಂದು ಡಾ.ಪಾಟೀಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X