Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ಯಾರಂಟಿ ಯೋಜನೆಗಳನ್ನು...

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ : ಸಿಎಂ ಡಿ.ಕೆ.ಶಿವಕುಮಾರ್‌

ವಾರ್ತಾಭಾರತಿವಾರ್ತಾಭಾರತಿ14 Jun 2026 3:13 PM IST
share
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ : ಸಿಎಂ ಡಿ.ಕೆ.ಶಿವಕುಮಾರ್‌
"ವಿಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಕಿವಿಗೊಡಬೇಡಿ"

ಬೆಂಗಳೂರು : ಕಾಂಗ್ರೆಸ್ ಸರಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಸಂಬಂಧ ಸಾಮಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ʼಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ!ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡʼ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ದೃಢೀಕರಿಸಲು ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದು ಯೋಜನೆಗಳನ್ನು ನಿಲ್ಲಿಸುವ ಕ್ರಮವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡುವ ಕ್ರಮವಾಗಿದೆ. ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.

Tags

Guarantee schemesCM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X