Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇರಳದಲ್ಲಿ ನಕ್ಸಲರು, ಪೊಲೀಸರ ಮಧ್ಯೆ...

ಕೇರಳದಲ್ಲಿ ನಕ್ಸಲರು, ಪೊಲೀಸರ ಮಧ್ಯೆ ಗುಂಡಿನ ಚಕಮಕಿ: ಶೃಂಗೇರಿ ಮೂಲದ ಮಹಿಳೆಯ ಬಂಧನ

ವಾರ್ತಾಭಾರತಿವಾರ್ತಾಭಾರತಿ9 Nov 2023 11:58 PM IST
share
ಕೇರಳದಲ್ಲಿ ನಕ್ಸಲರು, ಪೊಲೀಸರ ಮಧ್ಯೆ ಗುಂಡಿನ ಚಕಮಕಿ: ಶೃಂಗೇರಿ ಮೂಲದ ಮಹಿಳೆಯ ಬಂಧನ

ಚಿಕ್ಕಮಗಳೂರು: ಕೇರಳದ ವಯನಾಡು ಜಿಲ್ಲೆಯಲ್ಲಿ ನಕ್ಸಲ್ ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಚಿಕ್ಕಮಗಳೂರು ಮೂಲದ ಮಹಿಳೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆಂದು ತಿಳಿದು ಬಂದಿದ್ದು, ಬಂಧಿತ ಮಹಿಳೆಯು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡು ಕುಡಿಗೆ ಗ್ರಾಮದ ಶ್ರೀಮತಿ ಅಲಿಯಾಸ್ ಉನ್ನಿಮಾಯ ಎಂದು ತಿಳಿದು ಬಂದಿದೆ.

ಕರ್ನಾಟಕ ಹಾಗೂ ಕೇರಳ ಗಡಿಯಲ್ಲಿರುವ ಕೇರಳ ರಾಜ್ಯದ ತಳಪುಝ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದಕ್ಕೆ ಕಳೆದ ಮಂಗಳವಾರ ರಾತ್ರಿ ಐವರು ನಕ್ಸಲರ ತಂಡ ಊಟಕ್ಕೆಂದು ತೆರಳಿದ್ದ ಖಚಿತ ಮಾಹಿತಿ ಪಡೆದ ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಶರಣಾಗುವಂತೆ ಸೂಚಿಸಿದಾಗ ನಕ್ಸಲರು ಹಾಗೂ ಪೊಲೀಸರ ಮಧ್ಯೆ ಕೆಲ ಹೊತ್ತು ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಮೂವರು ನಕ್ಸಲರು ಪರಾರಿಯಾಗಿದ್ದರೆ, ಕೇರಳದ ನಕ್ಸಲ್ ಮುಖಂಡ ಕೇರಳ ಮೂಲದವರೇ ಆದ ಚಂದ್ರು ಅಲಿಯಾಸ್ ತಿರುವೆಂದಿಗಮ್ ಹಾಗೂ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಶ್ರೀಮತಿಯನ್ನು ಪೊಲೀಸರು ವಶಕ್ಕೆ ಪಡೆದರು. ಇವರಿಬ್ಬರೂ ಕೇರಳ ಹಾಗೂ ಕರ್ನಾಟಕದ ಪೊಲೀಸರಿಗೆ ಹಲವು ಪ್ರಕರಣದಲ್ಲಿ ಬೇಕಾಗಿದ್ದರೆಂದು ತಿಳಿದು ಬಂದಿದೆ.

ಶೃಂಗೇರಿ ತಾಲೂಕಿನ ಬೇಗಾರ್ ಗ್ರಾಪಂ ಕೆ.ಮಸಿಗೆ ಗ್ರಾಮದ ಬೆಳಗೋಡು ಕುಡಿಗೆ ಗ್ರಾಮದ ಶ್ರೀಮತಿ 2007ರಲ್ಲಿ ಮನೆಯಿಂದ ನಾಪತ್ತೆಯಾಗಿ ನಕ್ಸಲ್ ಗುಂಪಿಗೆ ಸೇರಿದ್ದರು. 2009ರ ತನಿಕೋಡು ಚೆಕ್‌ಪೋಸ್ಟ್ ಬಳಿ ಅರಣ್ಯ ಇಲಾಖೆ ತಪಾಸಣಾ ಕೊಠಡಿ ಧ್ವಂಸ ಪ್ರಕರಣ ಹಾಗೂ ಲೋಕಸಭೆ ಚುನಾವಣೆ ಸಂದರ್ಭ ಮಾತೊಳ್ಳಿಯಲ್ಲಿ ಪೊಲೀಸರೊಂದಿಗೆ ನಡೆಸಿದ ಗುಂಡಿನ ಚಕಮಕಿಯಲ್ಲಿ ಭಾಗಿಯಾಗಿರುವುದೂ ಸೇರಿದಂತೆ ಕರ್ನಾಟಕ ಹಾಗೂ ಕೇರಳ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 15ಕ್ಕೂ ಹೆಚ್ಚು ಪ್ರಕರಣಗಳು ಶ್ರೀಮತಿ ಮೇಲೆ ದಾಖಲಾಗಿವೆ ಎಂದು ತಿಳಿದು ಬಂದಿದೆ. ಕೇರಳ ಪೊಲೀಸರು ಶೃಂಗೇರಿ ಮೂಲದ ಶ್ರೀಮತಿಯನ್ನು ಬಂಧಿಸಿರುವುದನ್ನು ಜಿಲ್ಲೆಯ ಪೊಲೀಸ್ ಮೂಲಗಳು ಖಚಿತ ಪಡಿಸಿವೆ.

Tags

Sringeri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X