ಗುಟ್ಕಾ, ಪಾನ್ ಮಸಾಲಾ ನಿಷೇಧ ಆದೇಶ ಹಿಂಪಡೆದ ರಾಜ್ಯ ಸರ್ಕಾರ ?

ಸಾಂದರ್ಭಿಕ ಚಿತ್ರ: Gemini AI
ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ಸಾಗಣೆ, ವಿತರಣೆ ಮತ್ತು ಮಾರಾಟದ ಮೇಲೆ ಒಂದು ವರ್ಷದ ಅವಧಿಗೆ ವಿಧಿಸಿದ್ದ ನಿಷೇಧ ಆದೇಶವನ್ನು ಕರ್ನಾಟಕ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಗಸ್ಟ್ 10ರಂದು ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮೇಲೆ ನಿಷೇಧ ಹೇರಿತ್ತು. ಈ ಆದೇಶದಡಿ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಸಂಬಂಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿತ್ತು.
ಆದರೆ, ನಿಷೇಧ ಆದೇಶ ಜಾರಿಯಾದ ಕೆಲವೇ ದಿನಗಳಲ್ಲಿ ಸರ್ಕಾರ ಅದನ್ನು ಹಿಂಪಡೆದಿದೆ ಎಂದು ವರದಿಯಾಗಿದೆ. ನಿಷೇಧ ಹಿಂಪಡೆಯುವ ಕುರಿತು ಸರ್ಕಾರದ ಅಧಿಕೃತ ಆದೇಶದ ವಿವರಗಳು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.
Next Story




