Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಜಾಮೀನು ರದ್ದು ಕೋರಿದ್ದ ಸಿಐಡಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ24 Aug 2026 9:27 PM IST
share
ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಜಾಮೀನು ರದ್ದು ಕೋರಿದ್ದ ಸಿಐಡಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ರೌಡಿಶೀಟರ್​ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೆ.ಆರ್‌. ಪುರ ಶಾಸಕ ಬೈರತಿ ಬಸವರಾಜ್‌‌ಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಬೈರತಿ ಬಸವರಾಜ್‌ಗೆ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2026ರ ಮಾರ್ಚ್‌ 12ರಂದು ಹೊರಡಿಸಿರುವ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ (ಸಿಐಡಿ) ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು‌. ಸರ್ಕಾರದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ವಿಸ್ತೃತ ತೀರ್ಪು ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಕರಣದ ಹಿನ್ನೆಲೆ:

ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲುಶಿವನ ಕೊಲೆ ಆರೋಪದಲ್ಲಿ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಮೃತನ ತಾಯಿ ವಿಜಯಲಕ್ಷ್ಮೀ ಆರೋಪಿಸಿದ್ದರು. ಆನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು.

ಇದರ ಬೆನ್ನಿಗೇ ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್‌ ಹಾಗೂ ಇತರರ ವಿರುದ್ಧ 'ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ' (ಕೊಕಾ) ಅನ್ವಯಿಸಲು ಅನುಮತಿ ಕೋರಿತ್ತು. ಇದಕ್ಕೆ ಸರ್ಕಾರ 2025ರ ಆಗಸ್ಟ್‌ 2ರಂದು ಅನುಮತಿ ನೀಡಿತ್ತು. ಆನಂತರ, ಕೊಕಾ‌ ಅನ್ವಯಿಸಿದ್ದ ಸರ್ಕಾರದ ಆದೇಶ ರದ್ದುಪಡಿಸಿದ್ದ ಹೈಕೋರ್ಟ್, ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಆನಂತರ, 2026ರ ಫೆಬ್ರವರಿ 12ರಂದು ಸಿಐಡಿ ಅಧಿಕಾರಿಗಳು ಬಸವರಾಜ್‌ ಅವರನ್ನು ಬಂಧಿಸಿದ್ದರು.

ವಿಚಾರಣಾ ನ್ಯಾಯಾಲಯ ಮಾರ್ಚ್ 12ರಂದು ಬೈರತಿ ಬಸವರಾಜ್‌ಗೆ ಜಾಮೀನು ಮಂಜೂರು ಮಾಡಿತ್ತು. ಪ್ರಕರಣ ಸಂಬಂಧ ಅರ್ಜಿದಾರರನ್ನು ಈಗಾಗಲೇ ಪೊಲೀಸ್ ವಶದಲ್ಲಿಟ್ಟುಕೊಂಡು ನಡೆಸಿರುವ ವಿಚಾರಣೆ ಪೂರ್ಣಗೊಂಡಿದ್ದು, ಮತ್ತೆ ಪೊಲೀಸ್ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಬೇಕಾದ ಅಗತ್ಯವಿಲ್ಲ ಎಂಬ ಅಂಶ ಸಿಐಡಿ ತನಿಖಾಧಿಕಾರಿಗಳು ಸಲ್ಲಿಸಿರುವ ರಿಮ್ಯಾಂಡ್ ಅರ್ಜಿಯಿಂದ ತಿಳಿಯಲಿದೆ. ಆದ್ದರಿಂದ, ಅರ್ಜಿದಾರರಿಗೆ ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ವಿಚಾರಣಾ ನ್ಯಾಯಾಲಯ ಆದೇಶದಲ್ಲಿ ತಿಳಿಸಿತ್ತು. ಈ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಹೈಕೋರ್ಟ್‌ ವಜಾಗೊಳಿಸಿದೆ.

Tags

Karnataka high courtCIDByrathi BasavarajBiklushiva Murder Case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X