Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ...

ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಎಫ್‌ಐಆರ್ ರದ್ದುಕೋರಿ ರಾಜೀವ್ ಗೌಡ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ20 Jan 2026 6:10 PM IST
share
ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಎಫ್‌ಐಆರ್ ರದ್ದುಕೋರಿ ರಾಜೀವ್ ಗೌಡ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಝೈದ್ ಖಾನ್ ಅಭಿನಯದ 'ಕಲ್ಟ್' ಚಿತ್ರದ ಬ್ಯಾನರ್‌ ಮತ್ತು ಕಟೌಟ್‌ಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ಪೌರಾಯುಕ್ತೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಕಾಂಗ್ರೆಸ್‌ ಮುಖಂಡ ಬಿ.ವಿ.ರಾಜೀವ್‌ ಗೌಡ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.

ಇದೇ ವೇಳೆ, ಅರ್ಜಿದಾರರ ನಡೆಯನ್ನು ಖಂಡಿಸಿರುವ ಹೈಕೋರ್ಟ್, ಮಹಿಳೆ ಎಂದರೆ ಗೌರವವೇ ಇಲ್ಲವೇ? ನಾಲಿಗೆ ಶುದ್ಧವಿರಬೇಕು ಎಂದು ಮೌಖಿಕವಾಗಿ ಕಿಡಿಕಾರಿದೆ.

ಅವಾಚ್ಯ ಶಬ್ದಗಳಿಂದ ನಿಂದಿಸಿದ ಮತ್ತು ಬೆದರಿಕೆಯೊಡ್ಡಿದ ಸಂಬಂಧ ಶಿಡ್ಲಘಟ್ಟ ನಗರ ಠಾಣೆಯಲ್ಲಿ ಪೌರಾಯುಕ್ತೆ ಜಿ. ಅಮೃತಾ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಕಾಂಗ್ರೆಸ್‌ ಮುಖಂಡ ಬಿ.ವಿ. ರಾಜೀವ್‌ ಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಾಜೀವ್‌ ಪರ ಹಿರಿಯ ವಕೀಲ ವಿವೇಕ್‌ ಸುಬ್ಬಾರೆಡ್ಡಿ ವಾದ ಮಂಡಿಸಿ, ಸ್ಥಳೀಯ ವ್ಯಕ್ತಿ 'ಕಲ್ಟ್‌' ಸಿನಿಮಾದಲ್ಲಿ ನಟಿಸಿದ್ದಾರೆ. ಕಲಾವಿದನಿಗೆ ಬೆಂಬಲಿಸಿ, ಬ್ಯಾನರ್‌ ಮತ್ತು ಕಟೌಟ್‌ ಹಾಕಲಾಗಿತ್ತು. ವಾಟ್ಸ್‌ಆ್ಯಪ್‌ ಮೂಲಕ ಪೌರಾಯುಕ್ತರು ಬ್ಯಾನರ್‌ ಹಾಕಲು ಅನುಮತಿಸಿದ್ದರು. ಅದಕ್ಕೆ ಕಟ್ಟಬೇಕಾದ ಶುಲ್ಕವನ್ನೂ ಪಾವತಿಸಿಸಲಾಗಿದೆ. ಆದರೆ, ಏಕಾಏಕಿ ಪೌರಾಯುಕ್ತರು ಜೆಡಿಎಸ್‌ ಪಕ್ಷದ ಬ್ಯಾನರ್‌ಗಳನ್ನು ಹಾಗೇ ಬಿಟ್ಟು, ನಮ್ಮ ಕಟೌಟ್‌ ಬ್ಯಾನರ್‌ ತೆರವು ಮಾಡಿದ್ದರು. ಇದರಿಂದ, ಬೇಸರಗೊಂಡು ಪೌರಾಯುಕ್ತರ ವಿರುದ್ಧ ಕೆಲವು ಪದಗಳನ್ನು ಅರ್ಜಿದಾರರು ಬಳಸಿದ್ದು, ಅದಕ್ಕೆ ಈಗಾಗಲೇ ಕ್ಷಮೆ ಕೋರಿದ್ದಾರೆ. ನ್ಯಾಯಾಲಯ ರಕ್ಷಣೆ ಒದಗಿಸಿದರೆ ಹೊರಗೆ ಬಂದ ತಕ್ಷಣ ಸಾರ್ವಜನಿಕವಾಗಿ ಕ್ಷಮೆ ಕೋರಲಾಗುವುದು ಎಂದರು.

ಆಗ ನ್ಯಾಯಪೀಠ, ಕಟೌಟ್‌ ಹಾಕಲು ನೀವೇನು ನಿರ್ಮಾಪಕರಾ? ನಟರಾ? ಅಧಿಕಾರಿ ಮಹಿಳೆ ಎಂಬ ಗೌರವವೂ ಇಲ್ಲದೆ ಮಾತನಾಡಿದ್ದೀರಲ್ಲಾ. ನಿಮ್ಮದೇ ಪಕ್ಷವೇ ಇದೆ. ಆದರೂ ಅಡಗಿ ಕುಳಿತಿರುವುದೇಕೆ? ಅರ್ಜಿದಾರರು ಈಗ ಎಲ್ಲಿದ್ದಾರೆ. ನಿರೀಕ್ಷಣಾ ಜಾಮೀನು ಪಡೆಯಿರಿ ಎಂದು ಹೇಳಿತಲ್ಲದೆ, ಆಡಿದ ಮಾತುಗಳನ್ನು ಹಿಂಪಡೆಯಲಾಗದು. ನಾಲಿಗೆ ಸರಿಯಾಗಿರಬೇಕು. ನಾಲಿಗೆಯೇ ಎಲ್ಲವನ್ನೂ ಯಾವಾಗಲೂ ನಾಶ ಮಾಡಿದೆ. ನೀವು ಕ್ಷಮೆ ಕೋರಬಹುದು ಆದರೆ, ಬಿರುಕು ಹಾಗೆ ಉಳಿಯಲಿದೆ ಎನ್ನುವುದು ನಿಮ್ಮ ಗಮನಕ್ಕೆ ಇರಬೇಕು ಎಂದು ಕುಟುಕಿತು.

ಅದಕ್ಕೆ ಅರ್ಜಿದಾರರ ಪರ ವಕೀಲರು, ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿಯು ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇದೆ. ರಕ್ಷಣೆ ಒದಗಿಸಿದರೆ ತನಿಖೆಗೂ ಸಹಕರಿಸುತ್ತೇವೆ. ಪೊಲೀಸರು ಬಂಧಿಸಲು ಕಾದು ಕುಳಿತಿದ್ದಾರೆ. ಆದ್ದರಿಂದ, ರಕ್ಷಣೆ ಒದಗಿಸಿದರೆ ಸಾರ್ವಜನಿಕವಾಗಿ ಕ್ಷಮೆ ಕೋರಿ, ತನಿಖೆಯಲ್ಲಿ ಭಾಗಿಯಾಗುವುದಾಗಿ ತಿಳಿಸಿದರು.

ವಾದ ಆಲಿಸಿ, ಆದೇಶ ಕಾಯ್ದಿರಿಸಿದ ನ್ಯಾಯಪೀಠ, ಬುಧವಾರ ತೀರ್ಪು ಪ್ರಕಟಿಸುವುದಾಗಿ ತಿಳಿಸಿತು.

ಪ್ರಕರಣವೇನು?

ಸಾರ್ವಜನಿಕರ ದೂರಿನ ಮೇರೆಗೆ 'ಕಲ್ಟ್' ಚಲನಚಿತ್ರದ ಬ್ಯಾನರ್‌ ಮತ್ತು ಕಟೌಟ್‌ ತೆಗೆಸಿದ್ದಕ್ಕೆ ರಾಜೀವ್‌ ಗೌಡ ಅವರು ಆರೋಗ್ಯಾಧಿಕಾರಿ ಮತ್ತು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ಪೌರಾಯುಕ್ತೆ ಅಮೃತಾ ಅವರು 2026ರ ಜನವರಿ 14ರಂದು ನೀಡಿದ ದೂರಿನ ಅನ್ವಯ ರಾಜೀವ್ ಗೌಡ ಅವರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ಗಳಾದ 132, 224, 352, 351(3) ಮತ್ತು 56ರ ಅಡಿ ಪ್ರಕರಣ ದಾಖಲಾಗಿದೆ. ಇದರಿಂದ, ಎಫ್‌ಐಆರ್ ರದ್ದು ಕೋರಿ ರಾಜೀವ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Tags

High CourtverdictRajiv GowdaFIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X