Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ ವಿಷಯದಲ್ಲಿ ನಮ್ಮಲ್ಲಿ ಒಗ್ಗಟ್ಟು...

ಕಾವೇರಿ ವಿಷಯದಲ್ಲಿ ನಮ್ಮಲ್ಲಿ ಒಗ್ಗಟ್ಟು ಬರದಿದ್ದರೆ ನ್ಯಾಯ ಸಿಗುವುದಿಲ್ಲ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ5 April 2025 7:58 PM IST
share
ಕಾವೇರಿ ವಿಷಯದಲ್ಲಿ ನಮ್ಮಲ್ಲಿ ಒಗ್ಗಟ್ಟು ಬರದಿದ್ದರೆ ನ್ಯಾಯ ಸಿಗುವುದಿಲ್ಲ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ನಮ್ಮಲ್ಲಿ ಒಗ್ಗಟ್ಟು ಬರದಿದ್ದರೆ ಕಾವೇರಿ ವಿಷಯದಲ್ಲಿ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶನಿವಾರ ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ‘ಕಾವೇರಿ ನದಿ ರಕ್ಷಣಾ ಸಮಿತಿ ಆಯೋಜಿಸಿದ್ದ ‘ಕಾವೇರಿ ನದಿ ನೀರಿನ ಹಂಚಿಕೆ’ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ನೀತಿ, ಧೋರಣೆ ಹೀಗೆ ಇರಬಾರದು. ನೆಲ ಜಲ ಭಾಷೆವಿಷಯ ಬಂದಾಗ ರಾಜಕೀಯ, ಭಿನ್ನಾಭಿಪ್ರಾಯ ಎಲ್ಲವನ್ನೂ ಬದಿಗೊತ್ತಬೇಕು. ಇಲ್ಲವಾದರೆ ನಮ್ಮ ರಾಜ್ಯಕ್ಕೆ ನ್ಯಾಯ ಸಿಗುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಸಂಸತ್‍ನಲ್ಲಿ ಕಾವೇರಿ ವಿಷಯ ಪ್ರಸ್ತಾಪ ಆದಾಗ ನಾನು ನೋಡುತ್ತಿದ್ದೇನೆ. ಆ ನದಿಯ ವಿಷಯ ಪ್ರಸ್ತಾಪವಾದರೆ ತಮಿಳುನಾಡಿನ ಎಲ್ಲಾ ಸಂಸದರು ರಾಜಕೀಯ ಭಿನ್ನಾಭಿಪ್ರಾಯ ಬದಿಗಿಟ್ಟು ಒಟ್ಟಾಗಿಬಿಡುತ್ತಾರೆ. ಆದರೆ, ನಮ್ಮಲ್ಲಿ ಏನಾಗುತ್ತಿದೆ? ಎಲ್ಲಕ್ಕೂ ರಾಜಕೀಯ ತರುತ್ತೇವೆ, ಜಾತಿ ತರುತ್ತೇವೆ. ಇದೇ ನಮಗೆ ಮುಳುವಾಗಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಕಾವೇರಿ ಬಗ್ಗೆ ಹಿಂದೆ ರಾಜ್ಯದಲ್ಲಿ ನಡೆದಿರುವ ಹೋರಾಟ, ತ್ಯಾಗವನ್ನು ಮರೆಯುತ್ತಿದ್ದೇವೆ. ಚನ್ನಬಸಪ್ಪ, ಎಚ್.ಎನ್.ನಂಜೇಗೌಡ, ದೇವೇಗೌಡರು ನಡೆಸಿದ ಹೋರಾಟಗಳನ್ನು ನಾವು ನೆನಪಿಸಿಕೊಳ್ಳಬೇಕು. ಇವರು ಮುಂಚೂಣಿಯಲ್ಲಿ ನಿಂತು ರಾಜ್ಯಕ್ಕೆ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

93 ವರ್ಷಗಳ ಇಳಿ ವಯಸ್ಸಿನಲ್ಲಿಯೂ ಎಚ್.ಡಿ.ದೇವೇಗೌಡರು ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಸದನದಲ್ಲಿ ವ್ಹೀಲ್‍ಚೇರ್ ಮೇಲೆ ಬಂದು ಹೋರಾಟ ಮಾಡುತ್ತಿದ್ದಾರೆ ಎಂಬುದನ್ನು ಯಾರು ಮರೆಯಬಾರದು ಎಂದು ಕುಮಾರಸ್ವಾಮಿ ತಿಳಿಸಿದರು.

ತಮಿಳುನಾಡಿನ ಡಿಎಂಕೆ ಜತೆ ನಮ್ಮ ಸಂಬಂಧ ರಾಜಕೀಯಕ್ಕೆ ಮಾತ್ರ ಸೀಮಿತ. ಡಿಎಂಕೆ ಜತೆ ಮೇಕೆದಾಟು ವಿಷಯ ಮಾತನಾಡುವುದಕ್ಕೆ ರಾಜಕೀಯ ಒಪ್ಪಂದ ಮಾಡಿಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಲ್ಲಿ ನೋಡಿದರೆ ಮೇಕೆದಾಟು ಪಾದಯಾತ್ರೆ ಮಾಡಿ ನಮ್ಮ ನೀರು ನಮ್ಮ ಹಕ್ಕು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನ ದಟ್ಟಣೆಯಿಂದ ಮುಂದೆ ಇಡೀ ಕನ್ನಂಬಾಡಿ ಕಟ್ಟೆಯ ನೀರೆಲ್ಲವನ್ನು ಕೊಟ್ಟರೂ ರಾಜಧಾನಿಗೆ ಕುಡಿಯುವ ನೀರು ಸಾಕಾಗದ ಪರಿಸ್ಥಿತಿ ಬರಬಹುದೇನೋ?, ಮುಂದೆ ಈ ರೀತಿಯ ನೀರಿನ ಸಂಕಷ್ಟ ಬರುತ್ತದೆ ಎನ್ನುವ ದೂರದೃಷ್ಟಿಯಿಂದ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ನಾವು ಮುಂದಾಗಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧರಾಮೇಶ್ವರ ಸ್ವಾಮೀಜಿ, ನಿಶ್ಚಲಾನಂದನಂದನಾಥ ಸ್ವಾಮೀಜಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡರು, ಸಂಸದ ಡಾ.ಸಿ.ಎನ್.ಮಂಜುನಾಥ್, ಮಾಜಿ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ ತಿಪ್ಪೇಸ್ವಾಮಿ, ಕಾವೇರಿ ನದಿ ರಕ್ಷಣಾ ಸಮಿತಿ ಅಧ್ಯಕ್ಷ ಎಚ್.ಕೆ.ರಾಮು, ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಮುಂತಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X