Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್‌ಐಟಿ ರಚನೆಗೆ ತಡೆ ನೀಡಿದ್ದ ಏಕಸದಸ್ಯ...

ಎಸ್‌ಐಟಿ ರಚನೆಗೆ ತಡೆ ನೀಡಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ; ಸರಕಾರಿ ಭೂಮಿ ಒತ್ತುವರಿ ಪ್ರಕರಣದಲ್ಲಿ ಎಚ್‌ಡಿಕೆಗೆ ಮತ್ತೆ ಸಂಕಷ್ಟ

ವಾರ್ತಾಭಾರತಿವಾರ್ತಾಭಾರತಿ8 Sept 2025 8:29 PM IST
share
ಎಸ್‌ಐಟಿ ರಚನೆಗೆ ತಡೆ ನೀಡಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ; ಸರಕಾರಿ ಭೂಮಿ ಒತ್ತುವರಿ ಪ್ರಕರಣದಲ್ಲಿ ಎಚ್‌ಡಿಕೆಗೆ ಮತ್ತೆ ಸಂಕಷ್ಟ

ಬೆಂಗಳೂರು : ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರಕಾರಿ ಭೂಮಿ ಒತ್ತುವರಿ ತೆರವುಗೊಳಿಸುವ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ಸೋಮವಾರ ತಡೆಯಾಜ್ಞೆ ನೀಡಿದೆ. ಇದರಿಂದ, ಎಸ್‌ಐಟಿಗೆ ತನಿಖೆ ಮುಂದುವರಿಸಲು ಹಾದಿ ಸುಗಮವಾಗಿದ್ದು, ಸರಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಹಿರಿಯ ಐಎಎಸ್‌ ಅಧಿಕಾರಿ ಅಮಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿ 2025ರ ಜನವರಿ 28ರಂದು ಹೊರಡಿಸಿದ್ದ ಆದೇಶಕ್ಕೆ ತಡೆ ‌ನೀಡಿದ್ದ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ತಡೆ ನೀಡಿತಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಇದಕ್ಕೂ ಮುನ್ನ ರಾಜ್ಯ ಸರಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಈ ಪ್ರಕರಣದಲ್ಲಿ ಪ್ರತಿವಾದಿಗಳ ವಿರುದ್ಧ 6 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪವಿದೆ. ಆದ್ದರಿಂದ, ಒತ್ತುವರಿ ತೆರವುಗೊಳಿಸಲು ಸರಕಾರ ಕ್ರಮ ಕೈಗೊಂಡಿದೆ. ಆ ಬಗ್ಗೆ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ, ದಾಖಲೆಗಳನ್ನು ಹಾಜರುಪಡಿಸುವಂತೆ ಎಸ್‌ಐಟಿ ನೋಟಿಸ್‌ ಜಾರಿಗೊಳಿಸಿದೆ. ಆದರೆ, ಎಸ್‌ಐಟಿ ರಚನೆಗೆ ಏಕಸದಸ್ಯ ಪೀಠ ತಡೆ ನೀಡಿದೆ. ಆದ್ದರಿಂದ, ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.

ಮನವಿ ಪರಿಗಣಿಸಿದ ಹೈಕೋರ್ಟ್, ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ನವೆಂಬರ್ 26ರವರೆಗೆ ಮಧ್ಯಂತರ ತಡೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?

ಎಚ್‌.ಡಿ. ಕುಮಾರಸ್ವಾಮಿ ಮತ್ತವರ ಸಂಬಂಧಿಕರು ಕೇತಗಾನಹಳ್ಳಿಯಲ್ಲಿ ಸರಕಾರಿ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಅರ್ಜಿಯ ಸಂಬಂಧ ಕರ್ನಾಟಕ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳುವಂತೆ 2020ರಲ್ಲಿ ಹೈಕೋರ್ಟ್‌ ಆದೇಶಿಸಿತ್ತು. ನ್ಯಾಯಾಲಯದ ಈ ಆದೇಶ ಜಾರಿಯಾಗಿಲ್ಲ ಎಂದು ಆಕ್ಷೇಪಿಸಿ ಸರಕಾರದ ವಿರುದ್ಧ ಸಮಾಜ ಪರಿವರ್ತನಾ ಸಮುದಾಯ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ, ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆನಂತರ ಜಮೀನಿನ ಸರ್ವೆ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್‌, ಎಚ್‌ಡಿಕೆ ಮತ್ತಿತರರಿಗೆ ನೋಟಿಸ್‌ ಜಾರಿಗೊಳಿಸಿದ್ದರು. ಅದನ್ನು ಹೈ‌ಕೋರ್ಟ್‌‌ನಲ್ಲಿ ಪ್ರಶ್ನಿಸಲಾಗಿತ್ತು.

ಆ ನಂತರ ಪ್ರಕರಣದ ಬಗ್ಗೆ ತನಿಖೆ ನಡೆಸಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲು ಹಿರಿಯ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ ಸರಕಾರ ಆದೇಶಿಸಿತ್ತು. ಎಸ್‌ಐಟಿ ರಚನೆ ಕಾನೂನಿಗೆ ಅನುಗುಣವಾಗಿಲ್ಲ. ಆದ್ದರಿಂದ, ಸರಕಾರದ ಆದೇಶ ರದ್ದುಗೊಳಿಸಬೇಕೆಂದು ಕೋರಿ ಕುಮಾರಸ್ವಾಮಿ ಮತ್ತಿತರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಮಧ್ಯಂತರ ತಡೆ ನೀಡಿದ್ದ ನ್ಯಾಯಾಲಯ:

ಎಚ್.ಡಿ.ಕುಮಾರಸ್ವಾಮಿ ಅವರ ಅರ್ಜಿಯನ್ನು ಜೂನ್ 19ರಂದು ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರಕಾರ ಎಸ್‌ಐಟಿ ರಚಿಸಿರುವ ಆದೇಶದ ನಂತರ ಔಪಚಾರಿಕವಾಗಿ ಯಾವುದೇ ರೀತಿಯ ಅಧಿಸೂಚನೆ ಪ್ರಕಟಿಸಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದ್ದರಿಂದ, ಎಸ್‌ಐಟಿ ರಚಿಸಿ 2025ರ ಜನವರಿ 28ರ ಆದೇಶ ಮತ್ತು ಆನಂತರ ಕುಮಾರಸ್ವಾಮಿ ಅವರಿಗೆ ಮೇ 29ರಂದು ಜಾರಿ ಮಾಡಿರುವ ಸಮನ್ಸ್‌ಗೆ ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗಿದೆ ಎಂದು ಆದೇಶಿಸಿತ್ತು. ಇದೇ ಆದೇಶ ತಮಗೂ ವಿಸ್ತರಿಸಬೇಕು ಎಂದು ಕೋರಿದ್ದ ಇತರ ಆರೋಪಿಗಳಾದ ಪ್ರಮೀಳಾ, ಡಿ.ಟಿ. ಸಂತೋಷ್‌ ಹಾಗೂ ಸುನಂದಾ ಅವರ ಮನವಿಯನ್ನು ಜುಲೈ 2ರಂದು ನ್ಯಾಯಾಲಯ ಪುರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X