Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಮೀಕ್ಷೆ ಮುಂದಕ್ಕೆ ಹಾಕಿ ಇಲ್ಲವೇ ಅವಧಿ...

ಸಮೀಕ್ಷೆ ಮುಂದಕ್ಕೆ ಹಾಕಿ ಇಲ್ಲವೇ ಅವಧಿ ವಿಸ್ತರಿಸಿ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ20 Sept 2025 9:02 PM IST
share
ಸಮೀಕ್ಷೆ ಮುಂದಕ್ಕೆ ಹಾಕಿ ಇಲ್ಲವೇ ಅವಧಿ ವಿಸ್ತರಿಸಿ : ಎಚ್.ಡಿ.ಕುಮಾರಸ್ವಾಮಿ
"15 ದಿನದಲ್ಲಿ ಆರೂವರೆ ಕೋಟಿ ಜನರ ಸಮೀಕ್ಷೆ ಹೇಗೆ ಸಾಧ್ಯ?"

ಬೆಂಗಳೂರು, ಸೆ. 20 : ಆತುರಾತುರವಾಗಿ ಸೆ.22ರಿಂದ ಆರಂಭಿಸಲು ಉದ್ದೇಶಿಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು. ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ಅವಧಿ ವಿಸ್ತರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಸಮೀಕ್ಷೆ ಬಗ್ಗೆ ನಮಗೇನೂ ತಕರಾರು ಇಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ 15 ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ?. ಈಗ ನಾಡಹಬ್ಬ, ನವರಾತ್ರಿ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ-ಸಿಬ್ಬಂದಿಗೆ ಹಬ್ಬ ಆಚರಣೆ, ಸಂಭ್ರಮ ಇರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳಿರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ?. ಹೀಗಾಗಿ ಇದು ಸಮೀಕ್ಷೆಗೆ ಸಕಾಲವಲ್ಲ. ಮುಂದಕ್ಕೆ ಹಾಕಿ ಅಥವಾ ಸಮಯ ವಿಸ್ತರಿಸಿ. ಜನರಿಗೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು. ಇಲ್ಲವಾದರೆ ಇದಕ್ಕೂ ಹಿಂದಿನ ಎರಡು ಸಮೀಕ್ಷಾ ವರದಿಗಳ ಗತಿಯೇ ಆಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನರ ತೆರಿಗೆ ಹಣ ಪೋಲಾಗಬೇಕೆ?. ಇನ್ನೂ ಎಷ್ಟು ಕೋಟಿ ಖರ್ಚಾಗಬೇಕು?. ಕೊನೆಯ ಪಕ್ಷ 3 ತಿಂಗಳ ಕಾಲಾವಕಾಶ ಬೇಕೇಬೇಕು. ಹಂತ-ಹಂತವಾಗಿ ಸಮೀಕ್ಷೆ ನಡೆಸಿ. ಅದಕ್ಕೇನು ಸಮಸ್ಯೆ? ಆತುರಾತುರ ಸಮೀಕ್ಷೆ ಯಾರ ಆನಂದಕ್ಕೆ? ಎಲ್ಲರನ್ನೂ ಒಳಗೊಳ್ಳುವ, ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಆದರ್ಶ ಸಮೀಕ್ಷೆ ಅಗತ್ಯ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X