ದೇವೇಗೌಡರು ಆರೋಗ್ಯವಾಗಿದ್ದಾರೆ, ಆತಂಕಪಡಬೇಕಿಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ಮೂರು ನಾಲ್ಕು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಮಾಹಿತಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ತಮ್ಮ ತಂದೆಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.
ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಯಾರೂ ಆತಂಕಪಡುವ ಅಗತ್ಯತೆ ಇಲ್ಲ. ತಂದೆಯವರಿಗೆ ಆರೋಗ್ಯದ ಸಮಸ್ಯೆ ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
Next Story





