Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಸ್ತೆ ಗುಂಡಿ ಮುಚ್ಚುವ ಬದಲು ಕಿರಣ್...

ರಸ್ತೆ ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್‌ರನ್ನು ಟೀಕಿಸುವುದು ನಿರರ್ಥಕ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ19 Oct 2025 8:06 PM IST
share
ರಸ್ತೆ ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್‌ರನ್ನು ಟೀಕಿಸುವುದು ನಿರರ್ಥಕ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಅ.19: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ, ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೆ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರವಿವಾರ ನಗರದ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋದ 33ನೆ ಸಂಸ್ಥಾಪನಾ ದಿನಾಚರಣೆ ಹಾಗೂ 3ನೆ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಕಿರಣ್ ಮುಜುಂದಾರ್ ಶಾ ಅವರು ಹೇಳಿದ್ದು ಒಂದೆಡೆ ಇರಲಿ, ದಿನನಿತ್ಯವೂ ಮಾಧ್ಯಮಗಳು ತೋರಿಸುತ್ತಿರುವುದು ಸುಳ್ಳೇ? ವಾಸ್ತವಾಂಶವನ್ನು ಮಾಧ್ಯಮಗಳೆ ತೋರಿಸುತ್ತಿವೆ. ಗುಂಡಿಗಳನ್ನು ಮುಚ್ಚಿ ಸಮಸ್ಯೆ ಬಗೆಹರಿಸುವುದು ಬಿಟ್ಟು ಶಾ ಅವರನ್ನು ಟೀಕಿಸುವುದರಲ್ಲಿ ಈ ಸರಕಾರ ಮತ್ತು ಕಾಂಗ್ರೆಸ್ ನಾಯಕರು ಮಗ್ನರಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು.

ರಾಜ್ಯ ಕಾಂಗ್ರೆಸ್ ಸರಕಾರವು ಜನರ ಕೆಲಸ ಮಾಡುವುದು ಬಿಟ್ಟು, ಕ್ಷುಲ್ಲಕ ವಿಚಾರಗಳ ಮೇಲೆ ಗಮನವಿಟ್ಟು ಸಮಯ ಪೋಲು ಮಾಡುತ್ತಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸರಕಾರವನ್ನು ಎಚ್ಚರಿಸಿದ ಕಿರಣ್ ಮುಜುಂದಾರ್ ಶಾ ಅವರ ಟ್ವೀಟ್ ಗೆ ಈ ಸರಕಾರ ಪ್ರತಿ ಟೀಕೆ ಮಾಡುತ್ತಿರುವುದು ಸರಿಯಲ್ಲ. ಒಂದು ಸರಕಾರದ ವರ್ತನೆ ಇರಬೇಕಾದದ್ದು ಹೀಗಲ್ಲ ಎಂದು ಅವರು ಹೇಳಿದರು.

ರಸ್ತೆಗುಂಡಿಗಳಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಜನರಿಗೆ ಬಹಳ ತೊಂದರೆ ಆಗಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಕಾಲದ ಎರಡೂ ಅವಧಿಯಲ್ಲೂ ಗುಂಡಿಗಳ ಬಗ್ಗೆ ಯಾವ ಉದ್ಯಮಿಗಳೂ ಟೀಕೆ ಮಾಡಲಿಲ್ಲ. 2006-07ರಲ್ಲಿ 59 ರಸ್ತೆಗಳ ಅಗಲೀಕರಣಕ್ಕೆ ಮಂಜೂರಾತಿ ನೀಡಿ ಐದಾರು ತಿಂಗಳಲ್ಲೆ ಮುಗಿಸಲಾಗಿತ್ತು. ಇವರಿಗೆ ಕೆಲಸ ಮಾಡಲು ಏನು ಅಡ್ಡಿ ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಈಗಲೂ ಇವರು ಮಾಡುತ್ತಿರುವ ಕೆಲಸಗಳು ನನ್ನ ಅವಧಿಯಲ್ಲಿ ನಾನು ಮಂಜೂರಾತಿ ನೀಡಿದ್ದು. ಈ ಸರಕಾರ ಜನರ ಕೆಲಸ ಮಾಡುವುದು ಬಿಟ್ಟು ವಿನಾಕಾರಣ ಕಾಲಹರಣ ಮಾಡುತ್ತಿದೆ. ಬೇರೆ ರಾಜ್ಯಗಳಲ್ಲಿ ಉದ್ಯಮಿಗಳಿಗೆ ಕೊಡುವ ಸವಲತ್ತು, ರಿಯಾಯ್ತಿಗಳ ಬಗ್ಗೆ ಹೇಳಿದರೆ ಅಲ್ಲಿಗೆ ಹೋಗಲಿ, ಇಲ್ಲಿಗ್ಯಾಕೆ ಬಂದ್ರು ಅಂತಾರೆ. ಹೀಗೆ ಹೇಳಿದರೆ ಯಾವ ಉದ್ಯಮ ರಾಜ್ಯಕ್ಕೆ ಬರುತ್ತದೆ ಎಂದು ಅವರು ಕಿಡಿಕಾರಿದರು.

ಈಗ ದಿನವೂ ಆರೆಸ್ಸೆಸ್, ಆರೆಸ್ಸೆಸ್ ಎಂದು ಜಪ ಮಾಡುತ್ತಿದೆ ಕಾಂಗ್ರೆಸ್ ಸರಕಾರ. ಇದು ಆರೆಸ್ಸೆಸ್ ಬಗ್ಗೆ ಚರ್ಚೆ ಮಾಡುವ ಸಂದರ್ಭವೇ? ರಾಜ್ಯದಲ್ಲಿ ಎಷ್ಟೊಂದು ಸಮಸ್ಯೆಗಳಿವೆ, ಅವುಗಳನ್ನು ನಿವಾರಿಸುವುದು ಬಿಟ್ಟು ಒಂದು ಸಂಘಟನೆ ವಿರುದ್ಧ ಚರ್ಚಿಸುತ್ತಿದ್ದರೆ ಉಪಯೋಗ ಏನು? ಇಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಚನ್ನಪಟ್ಟಣದಲ್ಲಿ ಖವ್ವಾಲಿ ಕಾರ್ಯಕ್ರನದಲ್ಲಿ ಪೊಲೀಸರ ಮೇಲೆ ಹಣ ಎರಚಿದ ಘಟನೆ ನಡೆದಿದೆ. ಚನ್ನಪಟ್ಟಣದಲ್ಲಿ ಪೊಲೀಸರ ಮುಂದೆ ಡಾನ್ಸ್ ಮಾಡುತ್ತಾರೆ, ಪೊಲೀಸರ ಮೇಲೆ ಹಣ ಎರಚುತ್ತಾರೆ, ಹಣ ಎರಚಿಕೊಂಡವರ, ಎರಚಿದವರ ಮೇಲೆ ಕ್ರಮ ಇಲ್ಲ. ಆದರೆ ಆರೆಸ್ಸೆಸ್ ಪಥ ಸಂಚಲನದಲ್ಲಿ ಗಣವೇಷಧಾರಿ ಆಗಿದ್ದ ಪಿಡಿಓ ಮೇಲೆ ಕ್ರಮ ಕೈಗೊಳ್ಳುತ್ತಾರೆ. ಕಲಬುರಗಿಯಲ್ಲಿ ಕ್ರಮ ವಹಿಸಿದ ಮೇಲೆ ಚನ್ನಪಟ್ಟಣದಲ್ಲಿ ಕ್ರಮ ಯಾಕಿಲ್ಲ? ಎಂದು ಸರಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಹಾಸನಾಂಬೆ ದರ್ಶನ ವೇಳೆ ಜಿಲ್ಲಾಡಳಿತದಿಂದ ಶಿಷ್ಟಾಚಾರ ಪಾಲನೆ ಮಾಡದೆ ತಮಗೆ ಅಪಮಾನ ಮಾಡಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಶಿಷ್ಟಾಚಾರಕ್ಕೆ ಆದ್ಯತೆ ಕೊಡಲ್ಲ, ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅಧಿಕಾರಿಗಳಿಗೇಕೆ ತೊಂದರೆ ಕೊಡಬೇಕು? ದೇವಿಯ ದರ್ಶನ ಮುಖ್ಯ, ನನಗೆ ದರ್ಶನ ಆಗಿದೆ. ಸಾರ್ವಜನಿಕರು ಯಾವುದೇ ತೊಂದರೆಗೆ ಒಳಗಾಗದೆ ನೆಮ್ಮದಿಯಾಗಿ ತಾಯಿಯ ದರ್ಶನ ಮಾಡುತ್ತಿದ್ದಾರೆ. ಉತ್ತಮವಾಗಿ ವ್ಯವಸ್ಥೆ ಮಾಡಲಾಗಿದೆ. ಅದು ಮುಖ್ಯವೆ ಹೊರತು ಶಿಷ್ಟಾಚಾರರವಲ್ಲ ಎಂದರು.

ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾಗ ಅಧಿಕಾರಿಗಳು ಹೊರಗೆ ಮಲಗುತ್ತಿದ್ದರು. ನನ್ನಿಂದ ಅವರಿಗೆ ತೊಂದರೆ ಆಗಿದೆ. ಹೀಗಾಗಿ ನಾನು ಶಿಷ್ಟಾಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಾರೆ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡುವ ಉದ್ದೇಶದಿಂದ, ಪಕ್ಷದ ಕೋರ್ ಕಮಿಟಿಯನ್ನು ಪುನರ್ ರಚನೆ ಮಾಡಲಾಗುತ್ತಿದ್ದು, ಎರಡು ಮೂರು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X