Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶನಿವಾರ ಮಧ್ಯಾಹ್ನವರೆಗೂ ಸಿಎಂಗಾಗಿ...

ಶನಿವಾರ ಮಧ್ಯಾಹ್ನವರೆಗೂ ಸಿಎಂಗಾಗಿ ಕಾಯುವೆ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 Jun 2026 4:37 PM IST
share
ಶನಿವಾರ ಮಧ್ಯಾಹ್ನವರೆಗೂ ಸಿಎಂಗಾಗಿ ಕಾಯುವೆ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಬಿಡದಿಯ ರೈತರ ಹಿತಾಸಕ್ತಿಯ ಬಗ್ಗೆ ಚರ್ಚಿಸಲು ನಾನು ನಾಳೆ(ಶನಿವಾರ) ಮಧ್ಯಾಹ್ನವರೆಗೂ ಭೈರಮಂಗಲದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗಾಗಿ ಕಾಯುತ್ತೇನೆ. ಒಂದು ವೇಳೆ ಅವರು ಸ್ಥಳಕ್ಕೆ ಆಗಮಿಸಿದರೆ ಸಮಸ್ಯೆಯ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಮಧ್ಯಾಹ್ನದವರೆಗೂ ನಾನು ಭೈರಮಂಗಲದಲ್ಲಿ ಮುಖ್ಯಮಂತ್ರಿಗಳಿಗಾಗಿ ಕಾಯುತ್ತೇನೆ. ಅವರು ಬಂದರೆ ಸಂತೋಷ. ಚರ್ಚೆಗೆ ಬನ್ನಿ ಎಂದು ಪತ್ರ ಬರೆದಿದ್ದೇನೆ. ಅವರು ಇನ್ನೂ ಉತ್ತರ ಕೊಟ್ಟಿಲ್ಲ. ನಾವೇನು ಗಲಾಟೆ ಮಾಡಿಸಲು ಹೋಗುತ್ತಿಲ್ಲ. ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಕೊಡುತ್ತಿದ್ದೇವೆ ಅಷ್ಟೇ. ನಾನು ಕೊಟ್ಟ ಸಮಯಕ್ಕೆ ಹೋಗುತ್ತಿದ್ದೇನೆ. ಅವರು ಬಂದರೆ ಒಳ್ಳೆಯದು ಎಂದರು.

ಸಿಎಂ ವಿಧಾನಸೌಧಕ್ಕೆ ಬರುವಂತೆ ಪತ್ರ ಬರೆದಿದ್ದರು. ವಿಧಾನಸೌಧ ಬೇಡ, ಭೈರಮಂಗಲದಲ್ಲಿ ನೊಂದ ರೈತರ ಸಮ್ಮುಖದಲ್ಲಿಯೇ ಚರ್ಚೆ ನಡೆಯುವುದು ಸೂಕ್ತ ಎಂದು ಪತ್ರದಲ್ಲಿ ತಿಳಿಸಿದ್ದೆ. ಅಲ್ಲದೆ, ಜೂನ್ 27ರಂದು, ಅಂದರೆ ಶನಿವಾರ ಬಿಡದಿಯ ಭೈರಮಂಗಲದಲ್ಲಿ ಬಹಿರಂಗ ಚರ್ಚೆಗೆ ಬರುತ್ತೇನೆ ಎಂದು ಹೇಳಿದ್ದೆ. ಅದರಂತೆ ಭೈರಮಂಗಲಕ್ಕೆ ತೆರಳಿ ಮುಖ್ಯಮಂತ್ರಿಗಳಾಗಿ ಕಾಯುತ್ತೇನೆ. ಅವರು ಬಂದರೆ ಚರ್ಚೆ ನಡೆಸುವೆ ಎಂದು ಅವರು ತಿಳಿಸಿದರು.

ನಾನೂ ಕೂಡ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅನೇಕ ಸಂದರ್ಭಗಳಲ್ಲಿ ರೈತರ ಬಳಿಯೇ ಹೋಗಿದ್ದೇನೆ. ಇದೇ ಬಿಡದಿ ಯೋಜನೆ ಪ್ರಶ್ನೆ ಬಂದಾಗ ರೈತರನ್ನು ಕೃಷ್ಣಾ ಕಚೇರಿಗೆ ಕರೆಸಿಕೊಂಡು ಅವರ ಸಮ್ಮುಖದಲ್ಲಿಯೇ ಸಭೆ ಮಾಡಿದ್ದೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರೇ ಬಿಡದಿ ಉಪನಗರ ಯೋಜನೆಯನ್ನು ವಿರೋಧಿಸಿದ್ದರು. ರೈತರು ಬೇಡ ಎಂದರೂ ಕಾಂಗ್ರೆಸ್ ನಾಯಕರಿಗೆ ಯೋಜನೆ ಬೇಕಾಗಿದೆ ಎಂದು ಅವರು ತಿಳಿಸಿದರು.

ರೈತರಿಗೆ ಬೆಂಬಲ ಕೊಡಲು ಭೈರಮಂಗಲಕ್ಕೆ ಹೋಗುತ್ತಿದ್ದೇನೆ. ಕಾನೂನು ಮೀರಿ ರೈತರೇನು ಹೋರಾಟ ಮಾಡುತ್ತಿಲ್ಲ. ನಾನೂ ಕೂಡ ಕಾನೂನು ಪ್ರಕಾರವೇ ಹೋರಾಟದಲ್ಲಿ ಭಾಗಿಯಾಗುತ್ತೇನೆ. ಶನಿವಾರ ಮಧ್ಯಾಹ್ನದವರಿಗೂ ನಾನು ಭೈರಮಂಗಲದಲ್ಲಿಯೇ ಇದ್ದು ರೈತರ ಮನವಿಗಳನ್ನು ಆಲಿಸುತ್ತೇನೆ. ಮುಖ್ಯಮಂತ್ರಿಗಳು ಚರ್ಚೆಗೆ ಬಂದರೆ ಎಲ್ಲವೂ ಸುಗಮವಾಗಿ ಆಗುತ್ತದೆ. ಸರಕಾರದವರೇ ಭೈರಮಂಗಲದಲ್ಲಿ 144 ಸೆಕ್ಷನ್ ಹಾಕಲು ಹೊರಟಿದ್ದಾರೆ. ನಾವೇನೂ ಗಲಾಟೆ ಮಾಡಲು ಹೋಗುತ್ತಿಲ್ಲ ಎಂದು ಅವರು ಹೇಳಿದರು.

ನನ್ನ ಬಳಿ ಅಂಬೇಡ್ಕರ್ ವಾಚ್!

ತಮ್ಮ ಬಳಿ ದುಬಾರಿ ಮೌಲ್ಯದ ವಾಚ್ ಇದೆ ಎಂಬ ಆರೋಪ ಸಂಬಂಧ ಉತ್ತರ ನೀಡಿದ ಎಚ್.ಡಿ.ಕುಮಾರಸ್ವಾಮಿ ಅವರು, ಅದೇನೋ ನನ್ನ ಬಳಿ ದುಬಾರಿ ವಾಚ್ ಇದೆ ಎಂದು ಹೇಳಿದ್ದಾರೆ ಒಬ್ಬರು. ನೋಡಿ, ನಾನು ಕಟ್ಟಿರುವುದು ಡಾ.ಅಂಬೇಡ್ಕರ್ ಅವರ ಚಿತ್ರ ಇರುವ ಸಾಧಾರಣ ವಾಚ್. ಇದು ಎಚ್‍ಎಂಟಿ ಸಂಸ್ಥೆ ತಯಾರು ಮಾಡಿರುವ ಗಡಿಯಾರ ಎಂದು ಮಾಧ್ಯಮಗಳಿಗೆ ತೋರಿಸಿದರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X