Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಡದಿ ಟೌನ್‍ಶಿಪ್ | ಸಿಎಂ ಜತೆ ಚರ್ಚೆಗೆ...

ಬಿಡದಿ ಟೌನ್‍ಶಿಪ್ | ಸಿಎಂ ಜತೆ ಚರ್ಚೆಗೆ ನಾನು ಈಗಲೂ ಸಿದ್ಧ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 Jun 2026 6:38 PM IST
share
ಬಿಡದಿ ಟೌನ್‍ಶಿಪ್ | ಸಿಎಂ ಜತೆ ಚರ್ಚೆಗೆ ನಾನು ಈಗಲೂ ಸಿದ್ಧ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ರೈತರ ಸಮ್ಮುಖದಲ್ಲಿ ಕೂತು ಬಿಡದಿ ಟೌನ್‍ಶಿಪ್ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಲು ನಾನು ಈಗಲೂ ತಯಾರಿದ್ದೇನೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಂದರೆ ನಾನು ಬರುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ಇಲ್ಲಿನ ಜೆ.ಪಿ.ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾನು ಬಿಡದಿ ರೈತರ ಕಷ್ಟದ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದೆ. ಅದಕ್ಕೆ ಅವರು ಈವರೆಗೂ ಉತ್ತರ ನೀಡಿಲ್ಲ. ರೈತರ ನಡುವೆ ಕೂತು ಚರ್ಚೆ ಮಾಡೋಣ ಬನ್ನಿ ಎಂದು ಕರೆದರೆ ಅವರು ಬರಲೇ ಇಲ್ಲ ಎಂದು ದೂರಿದರು.

ರೈತರ ನಡುವೆ ಚರ್ಚೆ ಆಗಬೇಕು: ನಾನು ಈಗಲೂ ಚರ್ಚೆಗೆ ಸಿದ್ಧನಿದ್ದೇನೆ, ಬಿಡದಿ ಸಮಸ್ಯೆಯ ಬಗ್ಗೆ ಅಲ್ಲಿಗೆ ಹೋಗಿ ರೈತರ ನಡುವೆ ಕೂತು ಚರ್ಚಿಸಬೇಕು. ಅದನ್ನು ಮಾಡುವುದು ಬಿಟ್ಟು ಬಿಡದಿ ಭಾಗಕ್ಕೆ ಸಂಬಂಧ ಇಲ್ಲದವರನ್ನು ಹೊರಗಿನಿಂದ ಕರೆದುಕೊಂಡು ಬಂದು ಪ್ರತಿಭಟನೆ ಮಾಡಿಸುತ್ತಿದ್ದಾರೆ. ರೈತರ ಸಮ್ಮುಖದಲ್ಲಿ ನಾನು ಈಗಲೂ ಚರ್ಚೆಗೆ ಸಿದ್ಧನಿದ್ದೇನೆ ಎಂದು ಅವರು ತಿಳಿಸಿದರು.

ಬಿಡದಿ ವಿಚಾರದಲ್ಲಿ ರೈತರ ಹಿತಕ್ಕಿಂತ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಶಿವಕುಮಾರ್‌ ಗೆ ಹೆಚ್ಚು ಆಸಕ್ತಿ ಇದೆ ಎನ್ನುವುದು ಎಲ್ಲರಿಗೂ ಗೊತ್ತು. ನಾಲ್ಕು ಗೋಡೆಗಳ ನಡುವೆ ಕೂತು ಭೂಮಿ ಕಳೆದುಕೊಳ್ಳುತ್ತಿರುವ ರೈತರನ್ನು ಹೊರಗಿಟ್ಟು ಸಭೆ ನಡೆಸುವ ಅಗತ್ಯ ಇಲ್ಲ. ಅಂತಹ ಸಭೆಗಳಿಂದ ಯಾವುದೇ ಉಪಯೋಗ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಬಿಡದಿ ಯೋಜನೆ ವಿರೋಧಿಸಿ ಜೆಡಿಎಸ್ ಕಾನೂನು ಹೋರಾಟ ನಡೆಸುವುದು ಶತಸಿದ್ಧ. ನಮ್ಮ ಪಕ್ಷ ರೈತರ ಜೊತೆ ನಿಲ್ಲುತ್ತದೆ. 475 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಅಂತಿಮವಾಗಿ ಕೋರ್ಟ್‍ನಲ್ಲೇ ತೀರ್ಮಾನ ಆಗಬೇಕಾಗಿದೆ. ಸರಕಾರ ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ. ಪ್ರತಿಷ್ಟೆ ಮಾಡಿಕೊಂಡು ಹೊರಟಿದ್ದಾರೆ. ಸಾವಿರಾರು ಕೋಟಿ ರೂ.ಅಕ್ರಮಕ್ಕೆ ಬಾಗಿಲು ತೆರದಿದ್ದಾರೆ. ಯೋಜನೆ ಹೆಸರಿನಲ್ಲಿ ಲೂಟಿ ಹೊಡೆಯಲು ಹೊರಟಿದ್ದಾರೆ ಎಂದು ಅವರು ಆರೋಪಿಸಿದರು.

ನಾನೂ ಸಿಎಂ ಕುರ್ಚಿ ನೋಡಿದ್ದೇನೆ. ಅಕ್ಬರ್-ಬೀರಬಲ್ ಕತೆ ಬೇಡ, ರಾಜ್ಯದ ಜನರ ಕತೆ ಏನು ಎಂಬುದನ್ನು ಇವರು ಕೇಳಿಕೊಳ್ಳಬೇಕು. ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬಗ್ಗೆ, ಅವರ ಕಷ್ಟಗಳ ಪರಿಹಾರದ ಬಗ್ಗೆ ಮಾತನಾಡಬೇಕು ಎಂದ ಅವರು, ಅಭಿವೃದ್ದಿ ಹೆಸರಲ್ಲಿ ಕಾನೂನು ಬಾಹಿರ ಮಾಡಬೇಡಿ. ಅವರು ಮಾಡುವ ಜನವಿರೋಧಿ ಕೆಲಸಕ್ಕೆ ಜಾತಿ ಹೆಸರಲ್ಲಿ ಬೆಂಬಲಿಸಬೇಕೇ? ಎಂದು ಅವರು ಪ್ರಶ್ನಿಸಿದರು.

ಮುಗಿದ ಅಧ್ಯಾಯ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣ ಮುಗಿದ ಅಧ್ಯಾಯ. ಈ ಬಗ್ಗೆ ಬಿಜೆಪಿ ಕಡೆಯಿಂದ ಸಲ್ಲಿಕೆಯಾಗಿರುವ ಸತ್ಯಶೋಧನಾ ಸಮಿತಿ ವರದಿ ಬಗ್ಗೆ ಚರ್ಚಿಸಲು ನಾನು ಹೋಗುವುದಿಲ್ಲ. ಅಡ್ಡ ಮತದಾನದ ವಿಚಾರವಾಗಿ ಈಗಾಗಲೇ ನಾನು ಹೇಳಿದ್ದೇನೆ. ಈ ವಿಷಯವನ್ನು ಇಲ್ಲಿಗೆ ಬಿಟ್ಟುಬಿಡಿ. ಅಡ್ಡ ಮತದಾನಕ್ಕೆ ಮಹತ್ವ ಕೊಡುವುದು ಅಗತ್ಯವಿಲ್ಲ ಎಂದು ನುಡಿದರು.

ಉದ್ವೇಗ ಅಗತ್ಯವಿಲ್ಲ: ‘ಕೆಲವರಿಗೆ ಪ್ರಚೋದನಕಾರಿ ಹೇಳಿಕೆ ನೀಡುವುದು ಚಾಳಿ. ಅಂತಹವರ ಹೇಳಿಕೆಗಳಿಗೆ ಮಹತ್ವ ನೀಡುವುದು ಬೇಡ. ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಗಲಾಟೆ ಅಗತ್ಯವಿರಲಿಲ್ಲ. ನಮ್ಮ ಕಾರ್ಯಕರ್ತರು ಯಾರು ಇಂತಹ ಹೇಳಿಕೆಗಳಿಂದ ಉದ್ವೇಗಕ್ಕೆ ಒಳಗಾಗುವುದು ಬೇಡ. ಪ್ರಚೋದನೆ ಮಾಡಲೆಂದೇ ಒಂದು ಗುಂಪು ಕೆಲಸ ಮಾಡುತ್ತಿರುತ್ತದೆ. ಹೀಗಾಗಿ ಅಂತಹ ವ್ಯಕ್ತಿಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಚಪ್ಪಲಿ ಎಸೆಯುವುದು ನಮ್ಮ ಸಂಸ್ಕೃತಿ ಅಲ್ಲ’ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X