Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುನಾವಣಾ ಆಯೋಗ ದೇಶಕ್ಕೆ ಸ್ಪಷ್ಟನೆ ನೀಡಲಿ...

ಚುನಾವಣಾ ಆಯೋಗ ದೇಶಕ್ಕೆ ಸ್ಪಷ್ಟನೆ ನೀಡಲಿ : ಎಚ್.ಡಿ.ಕುಮಾರಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 Sept 2026 8:29 PM IST
share
ಚುನಾವಣಾ ಆಯೋಗ ದೇಶಕ್ಕೆ ಸ್ಪಷ್ಟನೆ ನೀಡಲಿ : ಎಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು : ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಮತ್ತು ಸದಸ್ಯರ ನಡುವೆ ಭಿನ್ನಾಭಿಪ್ರಾಯ ಯಾವ ಕಾರಣಕ್ಕೆ ಬಂದಿದೆ. ಇದರ ಹಿಂದಿನ ಸತ್ಯಾಸತ್ಯತೆ ಏನು ಎಂಬುದನ್ನು ಚುನಾವಣಾ ಆಯೋಗವೇ ದೇಶದ ಜನತೆಯ ಮುಂದೆ ಹೇಳಬೇಕು ಮತ್ತು ತನ್ನ ಸಂಸ್ಥೆಯ ಗೌರವವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಚುನಾವಣಾ ಆಯೋಗದೊಳಗೆ ಏನೆಲ್ಲಾ ನಡೆಯುತ್ತಿದೆಯೆಂಬ ಬಗ್ಗೆ ವಿವರಿಸುವುದು ಚುನಾವಣಾ ಆಯೋಗದ ಹೊಣೆಗಾರಿಕೆಯಾಗಿದೆ ಎಂದವರು ಹೇಳಿದರು.

ಕೇಂದ್ರೀಯ ಚುನಾವಣಾ ಆಯೋಗದ ಆಯುಕ್ತರ ನಡುವೆ ಭಿನ್ನಾಭಿಪ್ರಾಯಗಳಿವೆಯೆಂಬ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿಗಳು ಹಾಗೂ ಆಯೋಗದೊಳಗಿನ ವಾಸ್ತವ ಪರಿಸ್ಥಿತಿಯ ಬಗ್ಗೆ ಆಯೋಗದ ಸದಸ್ಯರು ವಿವರಣೆ ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿ ಚುನಾವಣಾ ಆಯೋಗದ ಸದಸ್ಯರ ನಡುವೆ ಭಿನಾಭಿಪ್ರಾಯಗಳಿವೆಯೆಂಬ ವರದಿಗಳ ಕುರಿತಾಗಿ ವಿವರವಾದ ಸ್ಪಷ್ಟನೆಯನ್ನು ನೀಡಬೇಕೆಂದು ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್‌ವಿಲಾಸ್), ಉಪೇಂದ್ರ ಕುಶವಾಹಾ ನೇತೃತ್ವದ ರಾಷ್ಟ್ರೀಯ ಲೋಕತಾಂತ್ರಿಕ ಮೋರ್ಚಾ ಹಾಗೂ ತೆಲುಗುದೇಶಂ ಪಕ್ಷದ ನಾಯಕರು ಆಗ್ರಹಿಸಿರುವ ಬೆನ್ನಲ್ಲೇ ಜೆಡಿಎಸ್ ಪಕ್ಷದ ಅಧ್ಯಕ್ಷರೂ ಆಗಿರುವ ಕುಮಾರಸ್ವಾಮಿ ಈ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ.

ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ‘ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಮತ್ತು ಇಬ್ಬರು ಸದಸ್ಯರ ನಡುವೆ ಇರುವ ಅಭಿಪ್ರಾಯ ಭೇದದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಇಟ್ಟುಕೊಂಡು ಅದನ್ನೇ ದೊಡ್ಡ ಅಪರಾಧದಂತೆ ಬಿಂಬಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಆದರೆ, ಇವರು(ಕಾಂಗ್ರೆಸ್) ಅಧಿಕಾರದಲ್ಲಿದ್ದಾಗ ಏನೇನು ಮಾಡಿದ್ದಾರೆ ಎಂದು ನಾನು ಚರ್ಚೆ ಮಾಡುವುದಿಲ್ಲ’ ಎಂದು ವ್ಯಂಗ್ಯವಾಡಿದರು.

‘ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಯಾವ ಪುರುಷಾರ್ಥಕ್ಕಾಗಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಮಾಡುತ್ತಿದೆ. ಚುನಾವಣಾ ಆಯೋಗವು ಒಂದು ಜವಾಬ್ದಾರಿಯುತ ಸಂಸ್ಥೆ. 78 ವರ್ಷಗಳಿಂದ ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದುಕೊಂಡು ಬಂದಿದ್ದರೆ ಅದು ಆಯೋಗದ ಜವಾಬ್ದಾರಿಯಿಂದ ಮಾತ್ರ ಸಾಧ್ಯವಾಗಿದೆ’ ಎಂದು ಎಚ್.ಡಿ. ಕುಮಾರಸ್ವಾಮಿ ಸಮರ್ಥನೆ ನೀಡಿದ್ದಾರೆ.

Tags

HD KumaraswamyElection Commission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X