Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಪುಟದಿಂದ ಡಿ.ಸುಧಾಕರ್ ವಜಾಗೊಳಿಸಲು...

ಸಂಪುಟದಿಂದ ಡಿ.ಸುಧಾಕರ್ ವಜಾಗೊಳಿಸಲು ಎಚ್.ಡಿ.ಕುಮಾರಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Sept 2023 6:47 PM IST
share
ಸಂಪುಟದಿಂದ ಡಿ.ಸುಧಾಕರ್ ವಜಾಗೊಳಿಸಲು ಎಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು, ಸೆ.12: ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರಕಾರದಲ್ಲಿ ಏನಾಗುತ್ತಿದೆ? ಸಚಿವರೆ ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು ಎಂದರು.

ಸಿದ್ದರಾಮಯ್ಯನವರೆ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತಾ ಇರ್ತೀರಲ್ಲ, ಅಲ್ಲವೇ? ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್ ಐ ಆರ್ ದಾಖಲಿಸಿದ ಪೆÇಲೀಸ್ ಅಧಿಕಾರಿಗಳ ಮೇಲೆಯೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಿರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಫ್ ಐ ಆರ್ ದಾಖಲಿಸಿದ ಅಧಿಕಾರಿಯನ್ನು ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಇದಾ ದಲಿತರ ರಕ್ಷಣೆ? ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಈ ಭೂಮಿ ಪ್ರಕರಣ ಮುಗಿದೆ ಹೋಗಿತ್ತು. ಈಗ ಕಾನೂನುಬದ್ದವಾಗಿ ಜೀವ ಕೊಟ್ಟಿದ್ದಾರೆ. ಎಲ್ಲದಕ್ಕೂ ತನಿಖೆ ಅಂತ ಹೇಳ್ತೀರಲ್ಲಾ, ಇದಕ್ಕೆ ಯಾವ ತನಿಖೆ ಮಾಡುತ್ತೀರಾ? ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲಾ ಉದ್ದುದ್ದ ಬಾಷಣ ಮಾಡಿದ್ದರಲ್ಲ ನೀವು. ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೆನಾ ನಿಮಗೆ ಮತ ಹಾಕಿದ್ದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನಾವು ಟೀಕೆ ಮಾಡಿದರೆ ಅಸೂಯೆ ಅಂತಾರೆ. ಇಂತಹ ಕೆಲಸ ಮಾಡಿದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ? ಹೀಗೆನಾ ನೀವು ದಲಿತರನ್ನು ಉದ್ದಾರ ಮಾಡುವುದು ಎಂದ ಅವರು, ಇದು ದಲಿತ ವಿರೋಧಿ, ಜನವಿರೋಧಿ ಸರಕಾರ ಎಂದು ಕಿಡಿಕಾರಿದರು.

ದಲಿತ ಸಂಘಟನೆಗಳಿಗೂ ನಾನು ಮನವಿ ಮಾಡುತ್ತೇನೆ. ಅವರೂ ಇದನ್ನು ಗಮನಿಸಲಿ. ಅವರು ಈ ಅನ್ಯಾಯವನ್ನು ನೋಡಿಕೊಂಡು ಸುಮ್ಮನೆ ಇರಬಾರದು. ಈ ಮಂತ್ರಿಯ ವಿರುದ್ಧ ಹೋರಾಟ ನಡೆಸಬೇಕು ಎಂದು ಕುಮಾರಸ್ವಾಮಿ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X