Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ...

ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ : ಎಂ.ಬಿ.ಪಾಟೀಲ್‌ರಿಗೆ ಕೇಂದ್ರ ಸಚಿವ ಎಚ್‌ಡಿಕೆ ಭರವಸೆ

ವಾರ್ತಾಭಾರತಿವಾರ್ತಾಭಾರತಿ10 Sept 2024 7:46 PM IST
share
ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ : ಎಂ.ಬಿ.ಪಾಟೀಲ್‌ರಿಗೆ ಕೇಂದ್ರ ಸಚಿವ ಎಚ್‌ಡಿಕೆ ಭರವಸೆ

ಹೊಸದಿಲ್ಲಿ: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿಯನ್ನು ಮಂಗಳವಾರ ಹೊಸದಿಲ್ಲಿಯಲ್ಲಿ ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ಹೊಸದಿಲ್ಲಿಯ ಉದ್ಯೋಗ ಭವನದಲ್ಲಿರುವ ಭಾರಿ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂ.ಬಿ.ಪಾಟೀಲ್, ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕುಮಾರಸ್ವಾಮಿ, ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು.

ಪ್ರಮುಖವಾಗಿ ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಎಂ.ಬಿ.ಪಾಟೀಲ್ ಅವರಿಂದ ಕುಮಾರಸ್ವಾಮಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಎಂ.ಬಿ.ಪಾಟೀಲ್, ಕೇಂದ್ರ ಸರಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಚ್.ಎಂ.ಟಿ ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಎಂ.ಬಿ.ಪಾಟೀಲ್ ಜತೆ ಚರ್ಚೆ ನಡೆಸಿದ ಕುಮಾರಸ್ವಾಮಿ, ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ ಎಂದು ತಿಳಿಸಿದರು.

ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಈ ದಿಸೆಯಲ್ಲಿ ಎಂ.ಬಿ.ಪಾಟೀಲ್ ಜತೆ ನಡೆಸಿದ ಮಾತುಕತೆ ಉತ್ತಮ ರೀತಿಯಲ್ಲಿ ಇತ್ತು ಎಂದು ಕುಮಾರಸ್ವಾಮಿ ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ನಿಯೋಗದಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X