Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನಸೌಧದ ಬದಲು ಜೂ.27ರಂದು ಬಿಡದಿ ಅಥವಾ...

ವಿಧಾನಸೌಧದ ಬದಲು ಜೂ.27ರಂದು ಬಿಡದಿ ಅಥವಾ ಭೈರಮಂಗಲದಲ್ಲಿ ಸಭೆ ಆಯೋಜಿಸಿದರೆ ಚರ್ಚೆಗೆ ಸಿದ್ಧ: ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ22 Jun 2026 10:04 PM IST
share
ವಿಧಾನಸೌಧದ ಬದಲು ಜೂ.27ರಂದು ಬಿಡದಿ ಅಥವಾ ಭೈರಮಂಗಲದಲ್ಲಿ ಸಭೆ ಆಯೋಜಿಸಿದರೆ ಚರ್ಚೆಗೆ ಸಿದ್ಧ: ಎಚ್.ಡಿ. ಕುಮಾರಸ್ವಾಮಿ
ಬಿಡದಿ ಟೌನ್‍ಶಿಪ್ ಯೋಜನೆ ಕುರಿತು ಬಹಿರಂಗ ಚರ್ಚೆಗೆ ಸಿಎಂ ಆಹ್ವಾನಕ್ಕೆ ಕೇಂದ್ರ ಸಚಿವ ಪ್ರತಿಕ್ರಿಯೆ

ಬೆಂಗಳೂರು: ಬಿಡದಿ ಟೌನ್‍ಶಿಪ್ ಯೋಜನೆ ಕುರಿತು ಬಹಿರಂಗವಾಗಿ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಆಹ್ವಾನವನ್ನು ಸ್ವೀಕರಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ‘ವಿಧಾನಸೌಧದ ಬದಲಿಗೆ ಬಿಡದಿ ಅಥವಾ ಭೈರಮಂಗಲ ಗ್ರಾಮದಲ್ಲಿ ಜೂ.27ರಂದು ಸಭೆ ಆಯೋಜಿಸಿದರೆ ಚರ್ಚೆಗೆ ನಾನು ಸಿದ್ಧ’ ಎಂದು ತಿಳಿಸಿದ್ದಾರೆ.

ಸೋಮವಾರ ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, ‘ಬಿಡದಿ ಟೌನ್‍ಶಿಪ್ ಕುರಿತು ಚರ್ಚೆಗೆ ಆಹ್ವಾನಿಸಿರುವ ಪತ್ರ ಸಿಕ್ಕಿದೆ. ಬಿಡದಿ ಸಮಗ್ರ ಉಪನಗರ ಯೋಜನೆ ಅನುಷ್ಠಾನದಿಂದ ಬಿಡದಿ ಹೋಬಳಿಯ ಎಂಟು ಗ್ರಾಮಗಳು ಮತ್ತು ಹಾರೋಹಳ್ಳಿ ತಾಲೂಕಿನ ಒಂದು ಗ್ರಾಮದ ರೈತರು, ಗ್ರಾಮಸ್ಥರು ಮತ್ತು ಪಾಲುದಾರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೆ, ಈ ಭಾಗದಲ್ಲಿರುವ ಅಪಾರ ಪರಿಸರ ಸಂಪತ್ತಿಗೆ ಹಾನಿಯಾಗುತ್ತದೆ’ ಎಂದು ಉಲ್ಲೇಖಿಸಿದ್ದಾರೆ.

‘ಈ ಹಿನ್ನೆಲೆಯಲ್ಲಿ ತಾವು ಪ್ರಸ್ತಾಪಿಸಿರುವ ಸಭೆಯನ್ನು ರಾಮನಗರ ಜಿಲ್ಲೆಯ ಬಿಡದಿ ಅಥವಾ ಯೋಜನೆ ವ್ಯಾಪ್ತಿಯ ಪ್ರದೇಶವಾದ ಭೈರಮಂಗಲ ಗ್ರಾಮದ ಸೂಕ್ತ ಸ್ಥಳದಲ್ಲಿ ಸಾರ್ವಜನಿಕ ಸಭೆ ಕರೆಯುವುದು ಸಮಂಜಸವೆನಿಸುತ್ತದೆ. ಈ ಮೇಲೆ ಸೂಚಿಸಿದ ಸ್ಥಳಗಳಲ್ಲಿ ಬಿಡದಿ ಸಮಗ್ರ ಉಪನಗರ ಯೋಜನೆಯಿಂದ ಭಾದಿತರಾಗಿರುವ ರೈತರು, ಗ್ರಾಮಸ್ಥರು, ಕೃಷಿ ಕಾರ್ಮಿಕರು, ಹೈನುಗಾರಿಕೆ ಉದ್ಯಮದಲ್ಲಿರುವ ರೈತ ಮಹಿಳೆಯರು, ಸಣ್ಣ ವ್ಯಾಪರಸ್ಥರು, ಉಧ್ಯಮಿಗಳು ಹಾಗೂ ಭಾದಿತ ಇತರೆ ಪಾಲುದಾರರನ್ನು ಭಾಗವಹಿಸಲು ಅವಕಾಶ ನೀಡಿದಲ್ಲಿ ಈ ಸಭೆಯಲ್ಲಿ ಮುಕ್ತ ಮನಸ್ಸಿನ ಚರ್ಚೆ ನಡೆಸಿ, ಭಾದಿತ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶವಾಗುತ್ತದೆ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

‘ಈ ಯೋಜನೆಯ ರಚನೆ-ಅನುಷ್ಠಾನದಲ್ಲಿ ನನಗೆ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ ಎನ್ನುವುದನ್ನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ. ವಿಧಾನಸೌಧದಲ್ಲಿ ನಡೆಸಲು ಉದ್ದೇಶಿಸಿರುವ ಸಭೆಯಲ್ಲಿ ಭಾದಿತ ರೈತ ವರ್ಗ, ಗ್ರಾಮಸ್ಥರು ಮತ್ತು ಪಾಲುದಾರರನ್ನು ಆಹ್ವಾನಿಸದೆ ಅವರನ್ನು ಹೊರಗಿಟ್ಟು ಸಭೆ ನಡೆಸುವುದರಿಂದ ಸಭೆ ಫಲಪ್ರದವಾಗುವುದಿಲ್ಲ. ಆದುದರಿಂದ ತಾವು ನಿಗದಿಪಡಿಸಿರುವ ಜೂ.26ರಂದು ನನಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇವೆ. ಹೀಗಾಗಿ ಉದ್ದೇಶಿತ ಸಭೆಯನ್ನು ಜೂ.27ರಂದು ಬಿಡದಿ ಅಥವಾ ಭೈರಮಂಗಲದ ಸೂಕ್ತ ಸ್ಥಳದಲ್ಲಿ ಆಯೋಜಿಸಿದರೆ ಚರ್ಚೆಗೆ ನಾನು ಸಿದ್ಧ’ ಎಂದು ಕುಮಾರಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.

Tags

HD KumaraswamyDK ShivakumarBidadi Township Project
share
ವಾರ್ತಾಭಾರತಿ
ವಾರ್ತಾಭಾರತಿ
Next Story
X