Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ...

ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ ಶಿಫಾರಸು ಪತ್ರ ಕೊಟ್ಟ ಸಿಎಂ ಸಿದ್ದರಾಮಯ್ಯ: ಎಚ್.ಡಿ ಕುಮಾರಸ್ವಾಮಿ ಆರೋಪ

ವಾರ್ತಾಭಾರತಿವಾರ್ತಾಭಾರತಿ28 Jun 2023 12:02 PM IST
share
ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ ಶಿಫಾರಸು ಪತ್ರ ಕೊಟ್ಟ ಸಿಎಂ ಸಿದ್ದರಾಮಯ್ಯ: ಎಚ್.ಡಿ ಕುಮಾರಸ್ವಾಮಿ ಆರೋಪ

ಬೆಂಗಳೂರು: ''ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ. ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ CM of Karnataka ವೋ ಅಥವಾ Corruption of Karnataka ವೋ??'' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ಪಂಚಗ್ಯಾರಂಟಿಗಳ ಕಾಂಗ್ರೆಸ್ ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್'' ಎಂದು ಕಿಡಿಕಾರಿದ್ದಾರೆ.

''ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ. 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ'' ಎಂದು ಹೇಳಿದ್ಧಾರೆ.

''ಈ ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ'' ವಾಗ್ದಶಳಿ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X