Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಪಾಲರ ವಿಷಯದಲ್ಲಿ ಸಿದ್ದರಾಮಯ್ಯ...

ರಾಜ್ಯಪಾಲರ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೆ ಎರಡು ನಾಲಿಗೆ : ವಿಡಿಯೋ ತೋರಿಸಿ ಕುಟುಕಿದ ಎಚ್‌ಡಿಕೆ

ವಾರ್ತಾಭಾರತಿವಾರ್ತಾಭಾರತಿ28 Sept 2024 4:08 PM IST
share
ರಾಜ್ಯಪಾಲರ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೆ ಎರಡು ನಾಲಿಗೆ : ವಿಡಿಯೋ ತೋರಿಸಿ ಕುಟುಕಿದ ಎಚ್‌ಡಿಕೆ

ಬೆಂಗಳೂರು : "ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಬಗ್ಗೆ ಎರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ" ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು,"ಹಿಂದೆ ಐದು ವರ್ಷ ಅಧಿಕಾರದಲ್ಲಿ ಇದ್ದಾಗ, ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವೇಳೆ ರಾಜ್ಯಪಾಲರನ್ನು ವಾಚಾಮಗೋಚರ ಹೊಗಳಿದ್ದ ಸಿದ್ದರಾಮಯ್ಯ, ಅದೇ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ರಾಜ್ಯಪಾಲರನ್ನು ಹೀನಾಮಾನವಾಗಿ ತೆಗಳುತ್ತಿದ್ದಾರೆ. ಅವರ ಪಕ್ಷದ ಶಾಸಕರು, ಸಚಿವರು ಇದನ್ನೇ ಮಾಡುತ್ತಿದ್ದಾರೆ" ಎಂದು ದೂರಿದರು.

ಕಾಂಗ್ರೆಸ್ ನಾಯಕರದ್ದು ಹಂಸರಾಜ್ ಭಾರಧ್ವಾಜ್ ಅವರು ರಾಜ್ಯಪಾಲರು ಆಗಿದ್ದ ವೇಳೆ ಒಂದು ವರಸೆ, ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯಪಾಲರಾಗಿರುವ ವೇಳೆ ಇನ್ನೊಂದು ವರಸೆ. ಅದಕ್ಕೆ ಇಲ್ಲಿದೆ ನೋಡಿ ಸಾಕ್ಷಿ ಎಂದು ಈ ಹಿಂದೆ ಸಿದ್ದರಾಮಯ್ಯ ಅವರು ರಾಜ್ಯಪಾಲರ ಹೊಣೆಗಾರಿಕೆ ಬಗ್ಗೆ ನೀಡಿದ್ದ ಹೇಳಿಕೆಯನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರದರ್ಶಿಸಿದರು.

ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ರಾಜ್ಯಪಾಲರ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅತ್ಯಂತ ಕೀಳಾಗಿ ವರ್ತಿಸಿದ್ದಾರೆ. ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದಾರೆ. ಪ್ರತಿಕೃತಿ ದಹನ ಮಾಡಿದ್ದಾರೆ. ಈಗ ಅವರು ಯಾರಿಗೆ ಚಪ್ಪಲಿ ಹಾರ ಹಾಕುತ್ತಾರೆ? ಯಾರ ಪ್ರತಿಕೃತಿ ದಹನ ಮಾಡುತ್ತಾರೆ ಎಂದು ಪ್ರಶ್ನೆ ಮಾಡಿದರು.

ಸರಕಾರ ಮತ್ತು ಸಿಎಂ ತಪ್ಪು ಮಾಡಿದ್ದಾರೆ. ರಾಜ್ಯಪಾಲರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕ್ರಮ ಜರುಗಿಸಿದ್ದಾರೆ. ಸರಕಾರದಿಂದ ಸಮಜಾಯಿಷಿ ಕೇಳುವುದು ರಾಜ್ಯಪಾಲರ ಹಕ್ಕು ಎಂದು ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಪ್ರತಿಪಕ್ಷದನಾಯಕರಾಗಿದ್ದಾಗ ಹಾಗೆ ಹೇಳಿದ್ದ ಸಿದ್ದರಾಮಯ್ಯ ಅದನ್ನೀಗ ಮರೆತಿದ್ದಾರೆ. ನಾನು ತೋರಿಸುತ್ತಿರುವ ಹೇಳಿಕೆಯನ್ನು ಅವರು ಒಮ್ಮೆ ಕೇಳಿಸಿಕೊಳ್ಳಲಿ ಎಂದು ಕುಮಾರಸ್ವಾಮಿ ಅವರು ಸಲಹೆ ನೀಡಿದರು.

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಲವಾರು ಪ್ರಕರಣ ದಾಖಲಾಗಿವೆ. ಅವರೇನು ಸಾಚಾ ಅಲ್ಲ. ಮುಡಾ ಹಗರಣದಲ್ಲಿ ಇವರ ಪಾತ್ರವೇ ಇಲ್ಲದಿದ್ದರೆ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯಗಳನ್ನು ತರಾತುರಿಯಲ್ಲಿ ಏಕೆ ಮಾಡುತ್ತಿದ್ದರು? ನ್ಯಾಯಲಯ ಆದೇಶ ನೀಡಿದ 48 ಗಂಟೆಯಾದರೂ ಸಿಎಂ ವಿರುದ್ಧ ಎಫ್ಐಆರ್ ಯಾಕೆ ದಾಖಲು ಮಾಡಲಿಲ್ಲ? ಸರಕಾರ, ಆಡಳಿತ ವ್ಯವಸ್ಥೆ ಕೆಲಸ ಮಾಡುವುದು ಹೀಗೆಯೇ? ಎಂದು ಪ್ರಶ್ನಿಸಿದರು.

"ನನಗೆ ಲೋಕಾಯುಕ್ತರಿಂದ ಯಾವುದೇ ನೋಟಿಸ್ ಬಂದಿಲ್ಲ. ನಾನೇ ಸ್ವಯಂ ಪ್ರೇರಿತವಾಗಿ ಲೋಕಾಯುಕ್ತ ಕಚೇರಿಗೆ ಹೋಗಿದ್ದೆ. ಇದು ಬಿಟ್ಟರೆ ಅವರು ಒಂದು ಹೆಜ್ಜೆ ಏನು ಮಾಡಲು ಆಗಲ್ಲ. ನಾನು ಆರ್ಕವತಿಯಲ್ಲಿ ರೀಡೂ ಮಾಡಿದಂತೆ ಮಾಡಿಲ್ಲ. ಸರಕಾರಿ ಜಮೀನು ಕಬಳಿಸಿಲ್ಲ. ಮಾಡುವ ಅಕ್ರಮ ಎಲ್ಲಾ ಮಾಡಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಬಗ್ಗೆ ಮಾತನಾಡುತ್ತಾರೆ. ನಾಚಿಕೆ ಆಗಬೇಕು ಇವರಿಗೆ" ಎಂದು ಅವರು ಕಿಡಿಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X