Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಗ್ಯಾರಂಟಿ' ಯೋಜನೆಗಳ ಬಗ್ಗೆ ಎಚ್ ಡಿಕೆ...

‘ಗ್ಯಾರಂಟಿ' ಯೋಜನೆಗಳ ಬಗ್ಗೆ ಎಚ್ ಡಿಕೆ ತಮ್ಮ ಕ್ಷೇತ್ರದ ಮತದಾರರ ಬಳಿ ಕೇಳಿ ತಿಳಿದುಕೊಳ್ಳಲಿ: ಡಿಕೆಶಿ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ12 Nov 2023 11:31 PM IST
share
‘ಗ್ಯಾರಂಟಿ ಯೋಜನೆಗಳ ಬಗ್ಗೆ ಎಚ್ ಡಿಕೆ ತಮ್ಮ ಕ್ಷೇತ್ರದ ಮತದಾರರ ಬಳಿ ಕೇಳಿ ತಿಳಿದುಕೊಳ್ಳಲಿ: ಡಿಕೆಶಿ ತಿರುಗೇಟು

ಬೆಂಗಳೂರು, ನ. 12: ‘ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ‘ಗ್ಯಾರಂಟಿ ಯೋಜನೆ’ಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದ ಜನರಲ್ಲಿ ಕೇಳಿ ತಿಳಿದುಕೊಳ್ಳಲಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ರವಿವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ? ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ. ಕುಮಾರಸ್ವಾಮಿಗೆ ಬಡಜನರ ನೋವು ಗೊತ್ತಿದ್ದರೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ’ ಎಂದು ತಿಳಿಸಿದರು.

‘ಕುಮಾರಸ್ವಾಮಿ ಅವರೇನು ಫಲಾನುಭವಿಗಳಲ್ಲ, ಅದರ ಬಗ್ಗೆ ಅವರಿಗೆ ಚಿಂತೆನೆಯೇ ಇಲ್ಲ. ಪಾಪ ಅವರಿಗೆ ಅವರು ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು ಅವರು ಮತದಾರರಿಗೆ ಕೇಳಿ ತಿಳಿದುಕೊಳ್ಳಬೇಕು. ಚನ್ನಪಟ್ಟಣದ 25ಕ್ಕೂ ಹೆಚ್ಚು ಮತದಾರರ ಬಳಿ ನಾನೇ ಖುದ್ದಾಗಿ ಮಾತನಾಡಿದ್ದೇನೆ. ಕುಮಾರಸ್ವಾಮಿ ತಮ್ಮ ಕ್ಷೇತ್ರದ ಮತದಾರರ ಬಳಿ ಹೋಗಿ ಕೇಳಲಿ. ಉಚಿತ ವಿದ್ಯುತ್, ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳು ಅವರಿಗೆ ತಲುಪಿದೆಯೆ? ಇಲ್ಲವೇ? ಎಂದು ಪರೀಕ್ಷೆ ಮಾಡಲಿ’ ಎಂದು ಶಿವಕುಮಾರ್ ಸವಾಲು ಹಾಕಿದರು.

‘ಒಂದಷ್ಟು ತಾಂತ್ರಿಕ ದೋಷ ಹಾಗೂ ಇತರೇ ಕಾರಣಗಳಿಂದ ಶೇ.5ರಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿಲ್ಲ. ಈಗ ಒಂದೊಂದೇ ಸಮಸ್ಯೆಗಳನ್ನು ಬಗೆಹರಿಸಿ ತಲುಪಿಸಲಾಗುತ್ತಿದೆ ಎಂದು ವಿವರಣೆ ನೀಡಿದ ಅವರು, ‘ನಾನು ತೆಲಂಗಾಣದ 5 ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದೆ. ಆ ಐದೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಡಿ.9ರಂದು ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಸರಕಾರ ರಚಿಸಲಿದ್ದು, ಕರ್ನಾಟಕದ ಮಾದರಿಯಂತೆ 6 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಈ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಳ್ಮೆಯಿಂದ ಇರಬೇಕು: ‘ನಮ್ಮ ಸಚಿವರು ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಹೋಗಿ ಬರುತ್ತಿದ್ದಾರೆ. ತಾಳ್ಮೆಯಿಂದ ಇರಲು ಕುಮಾರಸ್ವಾಮಿ ಅವರಿಗೆ ಆಗುತ್ತಿಲ್ಲ. ಅವರಿಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಬ್ಬರಿಗೂ ಒಳ್ಳೆಯದಾಗಲಿ’ ಎಂದು ಶಿವಕುಮಾರ್ ಇದೇ ವೇಳೆ ಶುಭ ಕೋರಿದರು.

‘ಕುಮಾರಸ್ವಾಮಿ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿದ್ದಾರೆ. ನಾವೆಲ್ಲ ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡುತ್ತಿದ್ದೇವೆ. ಇಲ್ಲಿ ಬೇರೆ ಚರ್ಚೆಯೇ ಇಲ್ಲ’ ಎಂದು ಸಿಎಂ ಸಿದ್ದರಾಮಯ್ಯರ ಕುರಿತು ಎಚ್‍ಡಿಕೆ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X