Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಎಚ್‌.ಡಿ.ರೇವಣ್ಣ ನಿರಾಳ; ಆರೋಪಮುಕ್ತಗೊಳಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ29 Dec 2025 8:42 PM IST
share
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಎಚ್‌.ಡಿ.ರೇವಣ್ಣ ನಿರಾಳ; ಆರೋಪಮುಕ್ತಗೊಳಿಸಿದ ನ್ಯಾಯಾಲಯ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (ಐಪಿಸಿ ಸೆಕ್ಷನ್ 354ಎ) ಪ್ರಕರಣದಿಂದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಆರೋಪಮುಕ್ತಗೊಳಿಸಿ ಬೆಂಗಳೂರಿನ ಎಸಿಜೆಎಂ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಇದರಿಂದ, ಎಚ್‌.ಡಿ. ರೇವಣ್ಣ ನಿರಾಳರಾಗಿದ್ದಾರೆ.

ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣದ ಕಾಗ್ನೈಜೆನ್ಸ್ ತೆಗೆದುಕೊಳ್ಳಲು (ವಿಚಾರಣೆಗೆ ಪರಿಗಣಿಸಲು) ನಿರಾಕರಿಸಿರುವ ನಗರದ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಎಸಿಜೆಎಂ) ಕೆ.ಎನ್‌. ಶಿವಕುಮಾರ್ ಅವರು, ಎಚ್.ಡಿ. ರೇವಣ್ಣ ಅವರ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಆದೇಶಿಸಿದ್ದಾರೆ.

ಪ್ರಕರಣದ ಮೊದಲ ಆರೋಪಿಯಾಗಿರುವ ಎಚ್.ಡಿ. ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ‌ಮಾಡಲಾಗಿದೆ. ಆದರೆ, ಈ ಅಪರಾಧಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿದ್ದು, ಈ ವಿಳಂಬವನ್ನು ಮನ್ನಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಪ್ರಕರಣದ ಕಾಗ್ನೈಜೆನ್ಸ್ ತೆಗೆದುಕೊಳ್ಳಲು ನಿರಾಕರಿಸಿ, ಎಚ್‌.ಡಿ. ರೇವಣ್ಣ ವಿರುದ್ಧದ ಆರೋಪಗಳನ್ನು ಕೈಬಿಟ್ಟಿದೆ.

ವಿಚಾರಣಾ ಕೋರ್ಟ್‌ಗೆ ಪ್ರಕರಣ ಮರಳಿಸಿದ್ದ ಹೈಕೋರ್ಟ್:

ಮನೆ ಕೆಲಸದ ಮಹಿಳೆಯ ಘನತೆಗೆ ಧಕ್ಕೆಯುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡಿದ್ದ ವಿಚಾರಣಾ‌ ನ್ಯಾಯಾಲಯದ ಕ್ರಮವನ್ನು 2025ರ ನವೆಂಬರ್ 19ರಂದು ರದ್ದುಪಡಿಸಿದ್ದ ಹೈಕೋರ್ಟ್, ಲೈಂಗಿಕ ದೌರ್ಜನ್ಯ ಆರೋಪವನ್ನು ಪರಿಗಣಿಸಲು ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಮರಳಿಸಿತ್ತು.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಎಚ್‌. ಡಿ. ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ರ (ಮಹಿಳೆಯ ಘನತೆಗೆ ಚ್ಯುತಿ) ಅಡಿ ಕಾಗ್ನೈಜೆನ್ಸ್ ತೆಗೆದಕೊಂಡು 42ನೇ ಎಸಿಜೆಎಂ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಿತ್ತು. ಆದರೆ, ಐಪಿಸಿ 354ಎ (ಲೈಂಗಿಕ ದೌರ್ಜನ್ಯ) ಅಡಿ ಸೂಕ್ತ ಆದೇಶ ಹೊರಡಿಸಲು ಪರಿಗಣಿಸುವಂತೆ ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿತ್ತು. ಇದೀಗ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ಕಾಗ್ನೈಜೆನ್ಸ್ ತೆಗೆದುಕೊಳ್ಳಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದೆ.

ಪ್ರಕರಣದ ಹಿನ್ನೆಲೆ:

ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ. ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಏಪ್ರಿಲ್‌ 28ರಂದು ಪ್ರಕರಣ ದಾಖಲಾಗಿತ್ತು.

ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್‌ 354ಎ, 354ಡಿ, 506, 509ರ ಅಡಿ ಪ್ರಕರಣ ದಾಖಲಿಸಲಾಗಿದ್ದು ರೇವಣ್ಣ ಅವರನ್ನು ಮೊದಲನೇ ಆರೋಪಿ ಹಾಗೂ ಪ್ರಜ್ವಲ್‌ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X