Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅತಿವೃಷ್ಟಿಯಿಂದ ಹಾನಿ | ತಕ್ಷಣವೇ ಪರಿಹಾರ...

ಅತಿವೃಷ್ಟಿಯಿಂದ ಹಾನಿ | ತಕ್ಷಣವೇ ಪರಿಹಾರ ಒದಗಿಸಲು ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Aug 2024 8:34 PM IST
share
ಅತಿವೃಷ್ಟಿಯಿಂದ ಹಾನಿ | ತಕ್ಷಣವೇ ಪರಿಹಾರ ಒದಗಿಸಲು ಸಿಎಂ ಸೂಚನೆ

ಬೆಂಗಳೂರು : ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೂನ್‍ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6 ಮಂದಿ ಸಾವಿಗೀಡಾಗಿದ್ದು, ಎಲ್ಲ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ ಎಂದು ಹೇಳಿದರು.

12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. ಸಾವಿಗೀಡಾದ ಒಂದು ಜಾನುವಾರಿಗೆ 37,500 ರೂಪಾಯಿ ಪರಿಹಾರ ನೀಡಲಾಗುತ್ತಿದೆ. ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 48 ಮನೆಗಳು ಪೂರ್ಣ ಹಾನಿಗೀಡಾಗಿದ್ದು, 950 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಈ ಹಿಂದೆ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಹಾನಿಗೆ ನೀಡಲಾದ ಪರಿಹಾರ ದುರುಪಯೋಗವಾದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ದುರುಪಯೋಗ ತಪ್ಪಿಸಲು ಪೂರ್ಣ ಮನೆ ಹಾನಿಗೀಡಾದವರಿಗೆ 1.20 ಲಕ್ಷ ರೂ. ನಗದು ಪರಿಹಾರ ನೀಡಲಾಗುತ್ತಿದ್ದು, ಇದರೊಂದಿಗೆ ಮನೆಯನ್ನೂ ನಿರ್ಮಿಸಿ ಕೊಡಲಾಗುತ್ತಿದೆ ಎಂದರು.

ಎನ್‍ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಭಾಗಶಃ ಹಾನಿಗೀಡಾದ ಮನೆಗಳಿಗೆ 6500ರೂ.ಪರಿಹಾರವನ್ನು ನೀಡಬೇಕಾಗಿದೆ. ಆದರೆ ರಾಜ್ಯ ಸರಕಾರ 50ಸಾವಿರ ರೂ.ಪರಿಹಾರ ನೀಡುತ್ತಿದೆ. ಮಳೆಯಿಂದ ಹಾನಿಗೀಡಾದವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 43,500ರೂ.ಹೆಚ್ಚುವರಿಯಾಗಿ ರಾಜ್ಯ ಸರಕಾರ ನೀಡುತ್ತಿದೆ. ಈ ಹಿಂದೆ ಪರಿಹಾರದ ವಿಯಯದಲ್ಲಿ ವಿವಿಧ ಮಾನದಂಡಗಳನ್ನು ಅನುಸರಿಸಲಾಗುತ್ತಿತ್ತು. ಈಗ ಏಕರೂಪದಲ್ಲಿ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ 17 ಜನರಿಗೆ ಪರಿಹಾರ ಒದಗಿಸಲಾಗಿದ್ದು, ಮನೆ ಹಾನಿಗೀಡಾದ ಎಲ್ಲರಿಗೂ ಆದಷ್ಟು ಬೇಗನೆ ಪರಿಹಾರ ಒದಗಿಸಲಿದ್ದೇವೆ ಎಂದರು.

ಜಿಲ್ಲೆಯಲ್ಲಿ 41706 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳಿಗೆ ಹಾನಿ, 372 ಹೆಕ್ಟೇರ್ ತೋಟಗಾರಿಕಾ ಬೆಳೆ ಗಳಿಗೆ ಹಾನಿ ಸಂಭವಿಸಿದೆ. ಬೆಳೆ ಹಾನಿ ಬಗ್ಗೆ ಸಮರ್ಪಕವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚಿಸಲಾಗಿದೆ. ಮಳೆಯಿಂದಾಗಿ 2962 ವಿದ್ಯುತ್ ಕಂಬಗಳು ಹಾನಿಗೀಡಾಗಿದ್ದು, ಆದಷ್ಟು ಬೇಗನೆ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳನ್ನು ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳು, ಸೇತುವೆಗಳ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಳೆಯಿಂದಾಗಿ ಮುಳುಗಡೆಯಾಗುವ ಸಣ್ಣ ಸೇತುವೆಗಳನ್ನು ಎತ್ತರಿಸುವ ಬಗ್ಗೆ ತಾಂತ್ರಿಕ ವರದಿಯನ್ನು ಪಡೆಯಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಕೊರತೆಯಿರುವುದಿಲ್ಲ. ತುರ್ತು ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ 48 ಕೋಟಿ ರೂ. ಅನುದಾನ ಲಭ್ಯವಿದ್ದು, ತಹಶೀಲ್ದಾರ್ ಖಾತೆಗಳಲ್ಲೂ ಅನುದಾನ ಲಭ್ಯವಿದೆ. ಅಗತ್ಯ ಬಿದ್ದರೆ ಇನ್ನಷ್ಟು ಪರಿಹಾರವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X