Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು | ಮಳೆ ಪೀಡಿತ ಪ್ರದೇಶಗಳಲ್ಲಿ...

ಬೆಂಗಳೂರು | ಮಳೆ ಪೀಡಿತ ಪ್ರದೇಶಗಳಲ್ಲಿ ನನ್ನ ಭೇಟಿಗಿಂತ ಪರಿಹಾರ ಕಾರ್ಯ ಮುಖ್ಯ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ22 Oct 2024 2:20 PM IST
share
ಬೆಂಗಳೂರು | ಮಳೆ ಪೀಡಿತ ಪ್ರದೇಶಗಳಲ್ಲಿ ನನ್ನ ಭೇಟಿಗಿಂತ ಪರಿಹಾರ ಕಾರ್ಯ ಮುಖ್ಯ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದಾಗ, “ನಾನು ಭೇಟಿ ನೀಡುವುದಷ್ಟೇ ಮುಖ್ಯವಲ್ಲ. ಕೆಲಸಗಳು ಆಗಬೇಕು. ನಾನು ಭೇಟಿ ಮಾಡಿದರೆ ಪ್ರಚಾರ ಸಿಗುತ್ತದೆ. ನಮಗೆ ಪ್ರಚಾರ ಮುಖ್ಯವಲ್ಲ. ಇಂತಹ ಪರಿಸ್ಥಿತಿ ಎದುರಿಸುತ್ತಿರುವ ಸ್ಥಳಗಳನ್ನು ಗುರುತಿಸಿ ಶಾಶ್ವತ ಪರಿಹಾರ ನೀಡಲು ನಾವು ಸಮಿತಿ ರಚಿಸಲಾಗಿದೆ. ಆ ಸಮಿತಿ ವರದಿ ನೀಡಲಿದೆ” ಎಂದು ತಿಳಿಸಿದರು.

“ನಾನು ಕೂಡ ಸೋಮವಾರ ಸಂಜೆ ಮಳೆಯಲ್ಲಿ ಸಿಲುಕಿದ್ದೆ. ಚಳ್ಳಕೆರೆಯಿಂದ ಬರುವಾಗ ನೆಲಮಂಗಲದ ಬಳಿ ಸೇತುವೆ ಮೇಲೆ 2 ಅಡಿ ನೀರಿತ್ತು. ನಮ್ಮ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಶ್ರಮಿಸುತ್ತಿದ್ದು, ಕಳೆದ 48 ಗಂಟೆಗಳಿಂದ ಅವರು ಮಳೆ ಪೀಡಿತ ಪ್ರದೇಶಗಳಲ್ಲಿ ಇದ್ದಾರೆ. ಈ ಸಮಯದಲ್ಲಿ ಅವರನ್ನು ಮುಜುಗರಕ್ಕೀಡು ಮಾಡಲು ನನಗೆ ಇಷ್ಟವಿಲ್ಲ” ಎಂದು ತಿಳಿಸಿದರು.

“ಚೌಡೇಶ್ವರಿ ನಗರದಲ್ಲಿ 150 ಎಂಎಂ ಮಳೆಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಶೇ.300ರಷ್ಟು ಹೆಚ್ಚಿನ ಮಳೆಯಾಗಿದೆ. ಈ ವಿಚಾರವಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ. ಕೆಲವು ಪ್ರದೇಶದ ಜನರಿಗೆ ಸ್ಥಳಾಂತರ ಮಾಡಲು ಹೇಳಿದ್ದೇವೆ. ಕೇಂದ್ರಿಯ ವಿದ್ಯಾಲಯ ಹಾಗೂ ಟಾಟಾನಗರದಿಂದ ಸುಮಾರು 600 ಕುಟುಂಬಗಳನ್ನು ಸ್ಥಳಾಂತರಗೊಳಿಸಲು ಹೇಳಿದ್ದೇವೆ. 5 ಎಸ್‌ಡಿಆರ್‌ಎಫ್ ಹಾಗೂ ಎನ್‌ಡಿಆರ್‌ಎಫ್ ತಂಡಗಳ ನಿಯೋಜನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

“ಕೆಲವು ಅಪಾರ್ಟ್ಮೆಂಟ್‌ಗಳನ್ನು 8 ದಿನಗಳ ಕಾಲ ಮುಚ್ಚಲು ಸೂಚನೆ ನೀಡಲಾಗಿದೆ. 20-25 ಹೆಚ್‌ಪಿ ಯಂತ್ರಗಳನ್ನು ಹಾಕಿ ಚರಂಡಿ ಸ್ವಚ್ಛಗೊಳಿಸಲಾಗುತ್ತಿದೆ. 20 ಕಡೆಗಳಲ್ಲಿ ನೀರನ್ನು ತೆಗೆಯಲಾಗುತ್ತಿದೆ. ಪ್ರಕೃತಿಯನ್ನು ತಡೆದು ನಿಲ್ಲಿಸಲು ಆಗುವುದಿಲ್ಲ. ದುಬೈನಲ್ಲಿ ಪ್ರವಾಹ, ದೆಹಲಿಯಲ್ಲಿ ಮಾಲಿನ್ಯದ ವಿಚಾರ ನೀವು ನೋಡುತ್ತಿದ್ದೀರಿ. ನಮ್ಮ ತಂಡ ಹಗಲಿರುಳು ಶ್ರಮಿಸುತ್ತಿದೆ. ನಾನು ಕೂಡ ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಿದ್ದೇನೆ. ಪಶ್ಚಿಮ ಮತ್ತು ದಕ್ಷಿಣ ಭಾಗದಲ್ಲಿ ಹೆಚ್ಚು ಸಮಸ್ಯೆಯಾಗಿದೆ. ದಾಸರಹಳ್ಳಿಯಲ್ಲಿ ಟ್ಯಾಂಕ್ ಒಡೆದಿದೆ. ಮಹದೇವಪುರ ವಲಯದಲ್ಲಿ 5 ಬಡಾವಣೆಗಳು ಸಮಸ್ಯೆಗೆ ಸಿಲುಕಿವೆ. ಈ ಎಲ್ಲಾ ಸಮಸ್ಯೆಗಳನ್ನು ನಾವು ಬಗೆಹರಿಸುತ್ತೇವೆ” ಎಂದರು.

ಸಿಎಂ ಜತೆ ಚರ್ಚೆ ಮಾಡುತ್ತೇನೆ :

ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಗೆ ಬಂದರೆ ಸ್ವಾಗತ ಎಂದು ಸಿಎಂ ಹಾಗೂ ಮಾಜಿ ಸಂಸದ ಸುರೇಶ್ ಅವರು ಹೇಳಿರುವ ಬಗ್ಗೆ ಕೇಳಿದಾಗ, “ಈ ವಿಚಾರ ನನಗೆ ಗೊತ್ತಿಲ್ಲ. ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಓದಿದ್ದೇನೆ. ಚನ್ನಪಟ್ಟಣದಲ್ಲಿ ಇಂದು ಸಭೆ ನಡೆಸುತ್ತಿದ್ದಾರೆ ಎಂದು ನಮ್ಮ ಮುಖಂಡರು ಕರೆ ಮಾಡಿ ತಿಳಿಸಿದರು. ಬಿಜೆಪಿಯವರು ಕೂಡ ಯೋಗೇಶ್ವರ್ ಅವರ ಜತೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರು ಬಿಜೆಪಿ ಬಿಟ್ಟ ನಂತರ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ. ಈಗ ಅವರು ಬಿಜೆಪಿಯಲ್ಲೇ ಇದ್ದಾರೆ, ಬಿಜೆಪಿಯಲ್ಲಿರುವವರ ಬಗ್ಗೆ ನಾನೇಕೆ ಮಾತನಾಡಲಿ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X