ಭಾರೀ ಮಳೆ | ಜೂ.15ರ ವರೆಗೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನಗಳವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂ.15ರವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಯಾದಗಿರಿ, ರಾಯಚೂರು, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ
ತುಮಕೂರು, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯು ಹೇಳಿದೆ.
Next Story




