Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇನ್ನು ಮುಂದೆ ಗ್ರಾಮ ಪಂಚಾಯತ್‌ಗಳಲ್ಲಿರುವ...

ಇನ್ನು ಮುಂದೆ ಗ್ರಾಮ ಪಂಚಾಯತ್‌ಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಹೆಚ್ಚುವರಿ ಸೇವೆಗಳು ಲಭ್ಯ

ವಾರ್ತಾಭಾರತಿವಾರ್ತಾಭಾರತಿ4 Oct 2023 11:18 AM IST
share
ಇನ್ನು ಮುಂದೆ ಗ್ರಾಮ ಪಂಚಾಯತ್‌ಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಹೆಚ್ಚುವರಿ ಸೇವೆಗಳು ಲಭ್ಯ

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳ ಜನತೆಗೆ ಹೆಚ್ಚಿನ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಾಡಕಚೇರಿಗಳಲ್ಲಿ, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸರ್ಕಾರಿ ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ.

ʼಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳ ಜೊತೆಗೆ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ ಆಧಾರ್ ಸೇವೆಗಳ ಸೌಲಭ್ಯವನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿ ರಾಜ್ಯದ ಜನ ಪಡೆಯಬಹುದಾಗಿದೆʼ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ʼʼಬಹುತೇಕ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವುದರಿಂದ ಬೇರೆ ಬೇರೆ ಇಲಾಖೆಗಳ ಸರ್ಕಾರಿ ಕಚೇರಿಗಳಿಗೆ ಹೋಗುವ ಅವಶ್ಯಕತೆ ಕಡಿಮೆಯಾಗಲಿದೆ. ಜನಪರವಾಗಿ ಜನರಿಗೆ ಸುಲಲಿತವಾಗಿ ಸೇವೆಗಳನ್ನು ಒದಗಿಸಲು ನಮ್ಮ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆʼʼ ಎಂದು ಅವರು ತಿಳಿಸಿದ್ದಾರೆ.

ಬಾಪೂಜಿ ಸೇವಾ ಕೇಂದ್ರಗಳಲ್ಲಿ ಲಭ್ಯವಿರುವ ಸೇವೆಗಳು

ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಪ್ರವರ್ಗ-ಎ), ಜಾತಿ ಪ್ರಮಾಣ ಪತ್ರ (ಅ.ಜಾ/ಅ.ಪಂ), ಹಿಂದುಳಿದ ವರ್ಗ ಪ್ರ.ಪತ್ರ (ಕೇ.ಸ), ವಾಸ ಸ್ಥಳ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಗೇಣಿರಹಿತ ದೃಢೀಕರಣ ಪತ್ರ, ವಿಧವೆ ದೃಢೀಕರಣ ಪತ್ರ, ಜೀವಂತ ದೃಢೀಕರಣ ಪತ್ರ, ವ್ಯವಸಾಯಗಾರರ ಕುಟುಂಬದ ದೃಡೀಕರಣ ಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಢೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ, ಮೃತರ ಕುಟುಂಬ ಸದಸ್ಯರ ದೃಢೀಕರಣ ಪತ್ರ, ನಿರುದ್ಯೋಗಿ ದೃಢೀಕರಣ ಪತ್ರ, ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ, ವ್ಯವಸಾಯಗಾರ ದೃಢೀಕರಣ ಪತ್ರ, ಸಣ್ಣ /ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ಥರಕ್ಕೆ ಸೇರಿಲ್ಲವೆಂದು ದೃಢೀಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ, ಬೋನಫೈಡ್ ದೃಢೀಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ (ಉದ್ಯೋಗದ ಸಲುವಾಗಿ ಮಾತ್ರ), ಆದಾಯ ದೃಢೀಕರಣ ಪತ್ರ (ಅನುಕಂಪದ ಆಧಾರದ ನೇಮಕಾತಿಗೆ), ಕುಟುಂಬ ವಂಶವೃಕ್ಷ ದೃಢೀಕರಣ ಪತ್ರ, ಹೈದ್ರಾಬಾದ್-ಕರ್ನಾಟಕ ವಿಭಾಗ/ವಲಯದ ವಾಸಸ್ಥಳ ದೃಢೀಕರಣ ಪತ್ರ, ಬೆಳೆ ದೃಢೀಕರಣ ಪತ್ರ, ಅಲ್ಪಸಂಖ್ಯಾತ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಆರ್ಯ ವೈಶ್ಯ), ಆದಾಯ ಹಾಗೂ ಆಸ್ತಿ ಪ್ರಮಾಣಪತ್ರ (EWS), ಜಾತಿ ಪ್ರಮಾಣಪತ್ರ (SC/ST-Migrant), ಅಂಗವಿಕಲ ಪೋಷಣಾ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ಕುಟುಂಬ ಕ್ಷೇಮ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ವಿನಿ, ಅಂತ್ಯ ಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ ಮಹಿಳೆಯ ವೇತನ, ರೈತರ ವಿಧವಾ ವೇತನ ಮತ್ತು ಎಂಡೋಸಲ್ಫಾನ್ ವಿಕ್ಟಿಮ್ ಪೆನ್ಷನ್ ಮುಂತಾದ ಸೇವೆಗಳು ಲಭ್ಯವಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X