ಶೀಘ್ರದಲ್ಲಿಯೇ ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಲಿದೆ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ರಾಜ್ಯದಲ್ಲಿ ಆಗುತ್ತಿರುವ ಎಲ್ಲ ಬೆಳವಣಿಗೆಗಳನ್ನು ಕಾಂಗ್ರೆಸ್ ಹೈಕಮಾಂಡ್‍ನ ಗಮನಕ್ಕೆ ಬಂದಿದ್ದು, ಶೀಘ್ರದಲ್ಲಿಯೇ ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಲಿದೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಲಾಬಿಗಳು ಇಲ್ಲ. ಮಾಧ್ಯಮಗಳಲ್ಲಿ ಮಾತ್ರ ಅವೆಲ್ಲ ಇರುವುದು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪರಿಹಾರ ಹುಡುಕಲಿದ್ದಾರೆ ಎಂದು ತಿಳಿಸಿದರು.
ಸ್ವಾಮೀಜಿಗಳ ಸಹಿತ ಅನೇಕರು ಡಿ.ಕೆ ಶಿವಕುಮಾರ್ ಇಲ್ಲವೇ ಸಿದ್ದರಾಮಯ್ಯ ಪರ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನರೇಂದ್ರ ಮೋದಿ ಜೊತೆಗೆ ನಿಂತವರು, ಬಿಜೆಪಿಗೆ ಬೆಂಬಲ ನೀಡಿದವರು ಕಾಂಗ್ರೆಸ್ ಪಕ್ಷಕ್ಕೆ ಉಪದೇಶ ನೀಡುತ್ತಿರುವುದು ಸ್ವಾಗತಾರ್ಹ ಎಂದು ಉಲ್ಲೇಖಿಸಿದರು.
Next Story





