ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ-ಮಂಡಳಿಗೆ 34 ಶಾಸಕರ ನೇಮಕ ವಿಚಾರ | ಸರಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು : ಸಂಪುಟ ದರ್ಜೆ ಸ್ಥಾನಮಾನ ಹಾಗೂ ಸೌಲಭ್ಯಗಳೊಂದಿಗೆ 34 ಮಂದಿ ಶಾಸಕರನ್ನು ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಹಾಗೂ ದಿಲ್ಲಿ ವಿಶೇಷ ಪ್ರತಿನಿಧಿ, ಸಿಎಂ ರಾಜಕೀಯ ಕಾರ್ಯದರ್ಶಿ ಸಹಿತ ಎಂಟು ಮಂದಿ ಶಾಸಕರಿಗೆ ವಿವಿಧ ಹುದ್ದೆಗಳಿಗೆ ನೇಮಕ ಕಾನೂನುಬಾಹಿರ ಎಂದು ಹೈಕೋರ್ಟ್‌ಗೆ ಪಿಎಎಲ್ ಸಲ್ಲಿಕೆಯಾಗಿದೆ.
ಬೆಂಗಳೂರು ನಿವಾಸಿ ಸೂರಿ ಪಾಯಲ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಎಂ.ಐ ಅರುಣ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಾಯಿ ದೀಪಕ್ ಸುಪ್ರೀಂಕೋರ್ಟ್ ಆವರಣದಿಂದ ಆನ್‌ಲೈನ್‌ನಲ್ಲಿ ವಾದ ಮಂಡಿಸುತ್ತಿದ್ದರು. ಅದಕ್ಕೆ ವಿಷಯ ಬಹಳ ಪ್ರಮುಖವಾಗಿದೆ. ಆನ್‌ಲೈನ್‌ನಲ್ಲಿ ವಾದ ಮಂಡನೆಗೆ ತಾಂತ್ರಿಕ ತೊಂದರೆ ಆಗುತ್ತಿದೆ. ಅದ್ದರಿಂದ ಖುದ್ದು ಹಾಜರಾಗಿ ವಾದ ಮಂಡಿಸುವಂತೆ ಸೂಚಿಸಿ ವಿಚಾರಣೆಯನ್ನು ಫೆ.21ಕ್ಕೆ ಮುಂದೂಡಿದರು.
Next Story





