Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಿಒಪಿ ಗಣೇಶ ಮೂರ್ತಿಗಳ ನಿಷೇಧವನ್ನು...

ಪಿಒಪಿ ಗಣೇಶ ಮೂರ್ತಿಗಳ ನಿಷೇಧವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿರೀಕ್ಷೆ ಇದೆ : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ15 Aug 2025 8:29 PM IST
share
ಪಿಒಪಿ ಗಣೇಶ ಮೂರ್ತಿಗಳ ನಿಷೇಧವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿರೀಕ್ಷೆ ಇದೆ : ಹೈಕೋರ್ಟ್

ಬೆಂಗಳೂರು : ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣಪತಿ ಮೂರ್ತಿಗಳ ತಯಾರಿಕೆ, ವಿತರಣೆ ಮತ್ತು ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಸರಕಾರದ ಆದೇಶವನ್ನು ಸಂಬಂಧಪಟ್ಟ ಪ್ರಾಧಿಕಾರಗಳು ಕಾನೂನಿನ ಅನುಸಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲಿವೆ ಎಂದು ನಿರೀಕ್ಷೆ ಹೊಂದಿರುವುದಾಗಿ ಹೈಕೋರ್ಟ್ ಹೇಳಿದೆ.

ಪಿಒಪಿ ಮೂರ್ತಿಗಳನ್ನು ನಿಷೇಧಿಸಿ 2023ರ ಸೆಪ್ಟೆಂಬರ್ 15ರಂದು ಸrkaರ ಹೊರಡಿಸಿರುವ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಗರಾಭಿವೃದ್ಧಿ ಇಲಾಖೆ ಹಾಗೂ ಇತರ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸಲ್ಲಿಸಿದ್ದ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಪಿಒಪಿ ಮೂರ್ತಿಗಳ ತಯಾರಿಕೆ, ವಿತರಣೆ, ಮಾರಾಟ ಇನ್ನಿತರ ವಿಷಯದ ಕುರಿತು ಯಾವುದೇ ನಿರ್ದಿಷ್ಟ ನಿರ್ದೇಶನವನ್ನು ನೀಡಲು ನಿರಾಕರಿಸಿದ ನ್ಯಾಯಪೀಠ, 2023ರಲ್ಲಿ ಹೊರಡಿಸಲಾದ ಸರಕಾರಿ ಅಧಿಸೂಚನೆ ಜಾರಿಯಲ್ಲಿರುವುದರಿಂದ ಮತ್ತದೇ ಆದೇಶ ಹೊರಡಿಸುವ ಅಗತ್ಯವಿಲ್ಲ. ನಿಸ್ಸಂಶಯವಾಗಿ ಇದೊಂದು ಗಂಭೀರ‌ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ 2023ರ ಸರಕಾರಿ ಆದೇಶವನ್ನು ಸಂಬಂಧಪಟ್ಟ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಜಾರಿಗೆ ತರಲಿವೆ ಎಂಬ ನಿರೀಕ್ಷೆ ಇದೆ ಎಂದು ತಿಳಿಸಿ, ಅರ್ಜಿ ಇತ್ಯರ್ಥಪಡಿಸಿತು.

ಇದಕ್ಕೂ ಮುನ್ನ ಕೆಎಸ್‌ಪಿಸಿಬಿ ಪರ ವಕೀಲರು ವಾದ ಮಂಡಿಸಿ, 2023ರ ಸರಕಾರಿ ಆದೇಶವನ್ನು ಸಮರ್ಪಕವಾಗಿ ಪಾಲನೆಯಾಗಿಲ್ಲ. ಮಾರುಕಟ್ಟೆಯಲ್ಲಿ ಪಿಒಪಿಯಿಂದ ತಯಾರಿಸಿರುವ ಗೌರಿ ಹಾಗೂ ಗಣೇಶ ಮೂರ್ತಿಗಳು ಕಾಣಿಸಿಕೊಳ್ಳುತ್ತಿವೆ. ಕುಂಬಳಗೋಡು ಹೋಬಳಿಯ ಹುಳಿಮಾವು ಗ್ರಾಮದಲ್ಲಿ ಇಬ್ಬರು ವ್ಯಕ್ತಿಗಳು ಪಿಒಪಿ ಮೂರ್ತಿ ತಯಾರಿಸುತ್ತಿರುವ ವಿಚಾರ ತಿಳಿದುಬಂದಿದೆ. ಪಿಒಪಿ ಮೂರ್ತಿಗಳು ನೀರಿನಲ್ಲಿ ಮುಳುಗಿದಾಗ ನೀರಿನಲ್ಲಿರುವ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತದೆ. ಜಲ ಮೂಲಗಳು ಮತ್ತು ಪರಿಸರದ ಮೇಲೂ ಗಂಭೀರ ಪರಿಣಾಮ ಉಂಟಾಗಲಿದೆ. ಇದು ಸಂವಿಧಾನ ಪರಿಚ್ಛೇದ 21ರ (ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಉಲ್ಲಂಘನೆಯಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಸರಕಾರದ ಪರ ವಕೀಲರು, ಪಿಒಪಿ ಮೂರ್ತಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಕೆಲ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಕಾನೂನಿನ ಅನುಸಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X