Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ...

ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟಿಸದಿದ್ದರೆ ಹಾಲಿ ರೋಸ್ಟರ್ ಪ್ರಕಾರವೇ ಚುನಾವಣೆ : ಹೈಕೋರ್ಟ್ ಮೌಖಿಕ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ30 Aug 2025 7:21 PM IST
share
ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟಿಸದಿದ್ದರೆ ಹಾಲಿ ರೋಸ್ಟರ್ ಪ್ರಕಾರವೇ ಚುನಾವಣೆ : ಹೈಕೋರ್ಟ್ ಮೌಖಿಕ ಎಚ್ಚರಿಕೆ

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮೀಸಲಾತಿಯನ್ನು ರಾಜ್ಯ ಸರಕಾರ ನಿರ್ದಿಷ್ಟ ದಿನಾಂಕದೊಳಗೆ ಪ್ರಕಟಿಸದಿದ್ದರೆ ಹಾಲಿ ಆವರ್ತನದ (ರೋಸ್ಟರ್‌) ಪ್ರಕಾರ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲಾಗುವುದು ಎಂದು ಮೌಖಿಕವಾಗಿ ಎಚ್ಚರಿಸಿರುವ ಹೈಕೋರ್ಟ್, ಸರಕಾರಕ್ಕೆ ಕೊನೆಯ ಬಾರಿಗೆ 11 ದಿನಗಳ ಕಾಲಾವಕಾಶ ನೀಡಿದೆ.

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯ ವಾರ್ಡ್‌ಗಳಿಗೆ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲು ನಿರ್ದೇಶಿಸುವಂತೆ ಹಾಗೂ ಶಿವಮೊಗ್ಗ, ತುಮಕೂರು, ದಾವಣಗೆರೆ, ಮೈಸೂರು ಮತ್ತು ಮಂಗಳೂರು ಮಹಾನಗರ ಪಾಲಿಕೆ, ಅತ್ತಿಬೆಲೆ, ಬೊಮ್ಮಸಂದ್ರ, ಕಮಲಾಪುರ ನಗರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್‌. ಫಣೀಂದ್ರ ವಾದ ಮಂಡಿಸಿ, ರಾಜ್ಯದ ಹಲವು ನಗರ ಸ್ಥಳೀಯ ಸಂಸ್ಥೆಗಳ ಅವಧಿಯು 2023ರಲ್ಲೇ ಮುಗಿದಿದ್ದು, ಸಾಕಷ್ಟು ಮನವಿಗಳನ್ನು ನೀಡಿದ ಹೊರತಾಗಿಯೂ ಸರಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಸಾಂವಿಧಾನಿಕ ಆದೇಶ ಮತ್ತು ಸುಪ್ರೀಂಕೋರ್ಟ್‌ ತೀರ್ಪಿನ ಉಲ್ಲಂಘನೆಯಾಗಿದೆ. ಇಷ್ಟು ಸಮಯದ ಒಳಗೆ ಮೀಸಲಾತಿ ನಿಗದಿಪಡಿಸಲಾಗುವುದು ಎಂದು ಸರಕಾರ ಹೇಳಬೇಕು. ಈ ವಿಚಾರದಲ್ಲಿ ಸರಕಾರ ಆಕ್ಷೇಪ ವ್ಯಕ್ತಪಡಿಸಲಾಗದು. ಶಿವಮೊಗ್ಗ, ಮೈಸೂರು ನಗರಸಭೆಗಳ ಅವಧಿಯು 2023ರ ನವೆಂಬರ್‌ನಲ್ಲೇ ಮುಗಿದಿದೆ. ಅಲ್ಲಿ ಚುನಾವಣೆ ನಡೆದಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಆಗ ನ್ಯಾಯಪೀಠ, ಚುನಾವಣೆ ನಡೆಯಬೇಕಲ್ಲವೇ? ನಿಮ್ಮದೇ ಸರಕಾರವಿದೆ, ಪುರಸಭೆ ಮತ್ತು ನಗರಸಭೆ ಚುನಾವಣೆಗಳಲ್ಲಿ ಗಾಳಿ ನಿಮ್ಮ ಪರವಾಗಿಯೇ ಇರುತ್ತದೆಲ್ಲವೇ? ಅವಧಿ ಮುಗಿಯುವುದರೊಳಗೆ ಮೀಸಲಾತಿ ಸೇರಿ ಎಲ್ಲವನ್ನೂ ಪೂರ್ಣಗೊಳಿಸಬೇಕು. ಅವಧಿ ಮುಗಿದು ಎರಡು ವರ್ಷಗಳಾದ ಮೇಲೆ ಏನಿದು? ಮೀಸಲಾತಿ ಅಧಿಸೂಚನೆಯನ್ನು ನಿರ್ದಿಷ್ಟ ದಿನಾಂಕದಲ್ಲಿ ಪ್ರಕಟಿಸಲು ಮುಂದಾಗದಿದ್ದರೆ ಹಾಲಿ ಇರುವ ರೋಸ್ಟರ್‌ ಪ್ರಕಾರವೇ ಚುನಾವಣೆ ನಡೆಸಲು ಆಯೋಗಕ್ಕೆ ನಿರ್ದೇಶಿಸಲಾಗುವುದು. ಚುನಾವಣೆ ವಿಳಂಬ ಸಾಂವಿಧಾನಿಕ ಆಡಳಿತ ಮುರಿದು ಬಿದ್ದಿರುವುದಕ್ಕೆ ಸಮನಾಗುತ್ತದೆ. ಇದಕ್ಕೆ ಸುಪ್ರೀಂಕೋರ್ಟ್‌ ಉಲ್ಲೇಖ ಬೇಕೆ? ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡಿತು.

ಅಂತಿಮವಾಗಿ ಸರಕಾರದ ವಕೀಲರ ಕೋರಿಕೆಯ ಮೇರೆಗೆ ಕೊನೆಯ ಬಾರಿಗೆ ಕಾಲಾವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್‌ 11ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X