Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಪತ್ತೆ ಪ್ರಕರಣದ ತನಿಖೆಗೆ ಆಧಾರ್‌...

ನಾಪತ್ತೆ ಪ್ರಕರಣದ ತನಿಖೆಗೆ ಆಧಾರ್‌ ಕಾರ್ಡ್‌ ಬಳಕೆ ವಿವರ ಒದಗಿಸಲು ಯುಐಡಿಎಐಗೆ ಹೈಕೋರ್ಟ್‌ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ26 Sept 2025 8:09 PM IST
share
ನಾಪತ್ತೆ ಪ್ರಕರಣದ ತನಿಖೆಗೆ ಆಧಾರ್‌ ಕಾರ್ಡ್‌ ಬಳಕೆ ವಿವರ ಒದಗಿಸಲು ಯುಐಡಿಎಐಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು/ಧಾರವಾಡ: ಕಾಣೆಯಾಗಿರುವ ವ್ಯಕ್ತಿಗೆ ಸಂಬಂಧಿಸಿದ ದೂರಿನ ತನಿಖೆಗಾಗಿ ಆತ ಕೊನೆಯ ಬಾರಿ ಆಧಾರ್‌ ಕಾರ್ಡ್‌ ಬಳಕೆ ಮಾಡಿದ್ದ ಸ್ಥಳದ ವಿವರಗಳನ್ನು ಪೊಲೀಸರಿಗೆ ಒದಗಿಸುವಂತೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರಕ್ಕೆ (ಯುಐಎಡಿಐ) ಹೈಕೋರ್ಟ್ ನಿರ್ದೇಶಿಸಿದೆ.

ಆರು ವರ್ಷಗಳ ಹಿಂದೆ ಕಾಣೆಯಾಗಿರುವ ಮಗನನ್ನು ಪತ್ತೆ ಹಚ್ಚಲು ಆತನ ಆಧಾರ್ ಬಳಕೆಯ ವಿವರ ಒದಗಿಸಲು ಯುಐಎಡಿಐಗೆ ನಿರ್ದೇಶಿಸುವಂತೆ ಕೋರಿ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದ ಕೃಷ್ಣಮೂರ್ತಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರ (ಧಾರವಾಡ ಪೀಠ) ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ತನಿಖೆಯ ವೇಳೆ ಪೊಲೀಸರಾಗಲಿ ಅಥವಾ ಇತರ ಯಾವುದೇ ತನಿಖಾ ಸಂಸ್ಥೆಯಾಗಲೀ ದೃಢೀಕರಣ ಸೇರಿದಂತೆ ಆಧಾರ್‌ ಅನ್ನು ಬಳಕೆ ಮಾಡಬೇಕಾಗಿ ಬಂದರೆ ಅಂತಹ ಸಂದರ್ಭಗಳಲ್ಲಿ ಆಧಾರ್‌ ಕಾಯ್ದೆ 2016ರ ಸೆಕ್ಷನ್‌ 33ರ ಅನ್ವಯ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಬೇಕು. ನ್ಯಾಯಾಲಯವು ಈ ಸಂಬಂಧ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ಆಧಾರ್‌ ಕಾಯ್ದೆಯ ಸೆಕ್ಷನ್‌ 33ರ ಅಡಿ ಯುಐಡಿಎಐಗೆ ಸೂಕ್ತ ಕಾಲಾವಕಾಶ ನೀಡಬೇಕು. ತದನಂತರ, ಆಧಾರ್‌ ಕಾರ್ಡ್‌ ಬಳಕೆಗೆ ಸಂಬಂಧಿಸಿದ ಮಾಹಿತಿ, ಅದನ್ನು ಎಲ್ಲಿ ಬಳಕೆ ಮಾಡಲಾಗಿದೆ ಎಂಬ ಮಾಹಿತಿ ಒದಗಿಸುವ ಕುರಿತು ನ್ಯಾಯಯುತವೂ ಮತ್ತು ಅಗತ್ಯವೂ ಆದ ಮಾಹಿತಿ ಒದಗಿಸಲು ಯುಐಡಿಎಐಗೆ ಆದೇಶ ನೀಡಬಹುದು ಎಂದು ನ್ಯಾಯಪೀಠ ಆದೇಶದಲ್ಲಿ ದಾಖಲಿಸಿದೆ.

ಆಧಾರ್ ಕಾಯ್ದೆಯ ಸೆಕ್ಷನ್ 29ರ ಅಡಿ ಮಾಹಿತಿ ನೀಡಲು ನಿರ್ಬಂಧವಿದೆ. ಆದರೆ, ಆ ನಿರ್ಬಂಧ ಮೂಲ ಬಯೋಮೆಟ್ರಿಕ್ ಮಾಹಿತಿಗಷ್ಟೇ. ಯಾರಾದರೂ ನಿರ್ದಿಷ್ಟವಾಗಿ ಅರ್ಜಿ ಸಲ್ಲಿಸಿದಾಗ ಆಧಾರ್‌ ಸಂಖ್ಯೆ, ಬಯೋಮೆಟ್ರಿಕ್ ಮಾಹಿತಿ ಮತ್ತು ಡೆಮೋಗ್ರಾಫಿಕ್ ಮಾಹಿತಿಯನ್ನು ಒದಗಿಸಬೇಕಾಗುತ್ತದೆ ಮತ್ತು ಕೆಲವೊಂದು ಸಂದರ್ಭಗಳಲ್ಲಿ ತನಿಖೆಯ ಉದ್ದೇಶಕ್ಕೆ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಯುಐಡಿಎಐಗೆ ನ್ಯಾಯಾಲಯಗಳು ಸೂಕ್ತ ನಿರ್ದೇಶನ ನೀಡಬಹುದಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ, ಅರ್ಜಿದಾರರ ಪುತ್ರನ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕಾಣೆಯಾಗಿರುವ ವ್ಯಕ್ತಿಯ ಆಧಾರ್‌ ಬಳಕೆ ಬಗ್ಗೆ ದೂರು ನೀಡಿದ 15 ದಿನಗಳ ಹಿಂದಿನಿಂದ ಹಿಡಿದು ಈವರೆಗಿನ ಎಲ್ಲ ಮಾಹಿತಿಯನ್ನು 15 ದಿನಗಳಲ್ಲಿ ತನಿಖಾಧಿಕಾರಿಗೆ ಒದಗಿಸಬೇಕು. ತನಿಖಾಧಿಕಾರಿಯು ಆ ಮಾಹಿತಿಯನ್ನು ತನಿಖೆಯ ಉದ್ದೇಶಕ್ಕೆ ಹೊರತುಪಡಿಸಿ ಇತರ ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರಕರಣವೇನು?

ಅರ್ಜಿದಾರರ ಮಗ 2019ರ ನಾಪತ್ತೆಯಾಗಿದ್ದು, ಈ ಸಂಬಂಧ 2019ರ ಡಿಸೆಂಬರ್​ 19ರಂದು ಹುಬ್ಬಳ್ಳಿಯ ಗೋಕುಲ್​ ರಸ್ತೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲವು ಪ್ರಯತ್ನ ನಡೆಸಿದರೂ ಅರ್ಜಿದಾರರ ಮಗ ಪತ್ತೆಯಾಗಿರಲಿಲ್ಲ. ಆದರೆ, 2023ರ ಜೂನ್‌ 20ರಂದು ನಾಪತ್ತೆಯಾದ ಪುತ್ರನ ಆಧಾರ್‌ ಬಳಕೆ ದೃಢೀಕರಣವಾಗಿರುವ ಸಂಬಂಧ ಮಾಹಿತಿ ಲಭ್ಯವಾಗಿತ್ತು.

ಇದರಿಂದ, ಅರ್ಜಿದಾರರು ತಕ್ಷಣ ಹುಬ್ಬಳ್ಳಿಯ ಪೊಲೀಸ್​ ಕಮಿಷನರ್​ ಮತ್ತು ಆಧಾರ್​ನ ಪ್ರಾದೇಶಿಕ ಕಚೇರಿಗೆ ಮಾಹಿತಿ ನೀಡಿದ್ದರು. ಮಗನ ಆಧಾರ್‌ ಬಳಕೆ ವಿವರಗಳನ್ನು ಒದಗಿಸುವಂತೆ 2024ರ ಮೇ 10ರಂದು ಅರ್ಜಿದಾರರು ಮನವಿ ಸಲ್ಲಿಸಿದ್ದರು. ಆ ಮನವಿಯನ್ನು ಪ್ರಾಧಿಕಾರ ಪರಿಗಣಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆಯ ಉದ್ದೇಶಕ್ಕಾಗಿ ಆಧಾರ್ ವಿವರಗಳನ್ನು ಒದಗಿಸಲು ಯುಐಎಡಿಐಗೆ ನಿರ್ದೇಶಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್​ ಮೆಟ್ಟಿಲೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X