Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಸಾಪ ಅಕ್ರಮ ಆರೋಪದ ತನಿಖೆಗಿಲ್ಲ ಅಡ್ಡಿ;...

ಕಸಾಪ ಅಕ್ರಮ ಆರೋಪದ ತನಿಖೆಗಿಲ್ಲ ಅಡ್ಡಿ; ಸಾಮಾನ್ಯ ಸಭೆ ನಿರ್ಣಯವೂ ನ್ಯಾಯಾಲಯದ ಪರಿಶೀಲನೆಗೊಳಪಡಲಿದೆ : ಹೈಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ29 Sept 2025 7:32 PM IST
share
ಕಸಾಪ ಅಕ್ರಮ ಆರೋಪದ ತನಿಖೆಗಿಲ್ಲ ಅಡ್ಡಿ; ಸಾಮಾನ್ಯ ಸಭೆ ನಿರ್ಣಯವೂ ನ್ಯಾಯಾಲಯದ ಪರಿಶೀಲನೆಗೊಳಪಡಲಿದೆ : ಹೈಕೋರ್ಟ್‌

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) 2025ರ ಅಕ್ಟೋಬರ್ 5ರಂದು ವಾರ್ಷಿಕ ಸಾಮಾನ್ಯ ಸಭೆ ನಡೆಸುವುದಾದರೆ ಪರಿಷತ್ತಿನ ಅವ್ಯವಹಾರಗಳ ಸಂಬಂಧಿತ ಬಾಕಿ ಇರುವ ತನಿಖೆಯೂ ಮುಂದುವರಿಯಬಹುದು ಎಂದು ಹೇಳಿರುವ ಹೈಕೋರ್ಟ್‌, ಉಭಯ ಪ್ರಕ್ರಿಯೆಗಳ ನಿರ್ಧಾರಗಳನ್ನು ಜಾರಿಗೊಳಿಸುವುದಕ್ಕೂ ಮುನ್ನ ನ್ಯಾಯಾಲಯದ ಮುಂದೆ ಇಡಬೇಕು ಎಂದು ನಿರ್ದೇಶಿಸಿದೆ.

ಕರ್ನಾಟಕ ಸೊಸೈಟಿಗಳ ನೋಂದಣಿ ಕಾಯ್ದೆ 1960ರ ಸೆಕ್ಷನ್‌ 27ಎ ಅಡಿ ತನಿಖೆಯಲ್ಲಿ ಭಾಗವಹಿಸುವಂತೆ ಸಹಕಾರ ಇಲಾಖೆಯು 2025ರ ಸೆಪ್ಟೆಂಬರ್ 15ರಂದು ಜಾರಿ ಮಾಡಿರುವ ನೋಟಿಸ್‌ಗೆ ತಡೆ ಕೋರಿ ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ಹಾಗೂ ಇತರ ನಾಲ್ವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ ಪ್ರಸಾದ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿ, ವಿಚಾರಣೆಯನ್ನು ಅಕ್ಟೋಬರ್‌ 15ಕ್ಕೆ ಮುಂದೂಡಿದೆ.

ಅಲ್ಲದೆ, ಕಾಯ್ದೆಯ ಸೆಕ್ಷನ್‌ 25ರ ಅಡಿಯ ತನಿಖೆಯ ಫಲಿತಾಂಶ ಮತ್ತು ಕಾಯ್ದೆ ಸೆಕ್ಷನ್‌ 27ಎ ತನಿಖೆಗೆ ಕಾರಣವಾಗಿರುವುದು ಮತ್ತು ವಾರ್ಷಿಕ ಸಾಮಾನ್ಯ ಸಭೆ ನಡೆದು ಅಲ್ಲಿ ಯಾವುದೇ ನಿರ್ಣಯವಾದರೂ ಅದು ಈ ನ್ಯಾಯಾಲಯದ ಪರಿಶೀಲನೆಗೆ ಒಳಪಡಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇದಕ್ಕೂ ಮುನ್ನ ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್‌ ಪಾಟೀಲ್‌ ವಾದ ಮಂಡಿಸಿ, 2025ರ ಸೆಪ್ಟೆಂಬರ್ 22ರಂದು ಕಸಾಪ ಅಕ್ರಮಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಭಾಗವಹಿಸಲು ಅಧ್ಯಕ್ಷ ಜೋಶಿ ಅವರಿಗೆ ನೋಟಿಸ್‌ ನೀಡಲಾಗಿತ್ತು. ಆದರೆ, ಅಂದು ಯಾವುದೇ ಪ್ರಕ್ರಿಯೆ ನಡೆದಿಲ್ಲ. ಮುಂದಿನ ದಿನಾಂಕವನ್ನೂ ನಿಗದಿಪಡಿಸಿಲ್ಲ. ಸಮನ್ವಯ ಪೀಠವು ಈ ಹಿಂದೆ ಬೈಲಾ ಪ್ರಕಾರ ವಾರ್ಷಿಕ ಸಾಮಾನ್ಯ ಸಭೆ ನಡೆಸಲು ಕಸಾಪಗೆ ಅನುಮತಿಸಿದ್ದು, ಕಾಯ್ದೆಯ ಸೆಕ್ಷನ್‌ 25ರ ಅನ್ವಯ ಕಸಾಪದಲ್ಲಿ ಅಕ್ರಮಗಳ ತನಿಖೆಗೂ ಅನುಮತಿಸಿತ್ತು. ಏಕಸದಸ್ಯ ನ್ಯಾಯಪೀಠದ ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದ್ದು, ಅದನ್ನು ವಿಭಾಗೀಯ ಪೀಠ ವಜಾಗೊಳಿಸಿತ್ತು ಎಂದರು.

ಮುಂದುವರಿದು, ವಿಭಾಗೀಯ ನ್ಯಾಯಪೀಠ ಮಧ್ಯಂತರ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದರಿಂದ ಕಸಾಪ ಲೆಕ್ಕಪತ್ರ ಸಲ್ಲಿಸಿದ್ದು, ಸಹಕಾರ ಸೊಸೈಟಿಗಳ ಉಪ ನಿಬಂಧಕರು ಮಧ್ಯಂತರ ವರದಿಯನ್ನು ಸಹಕಾರ ಸೊಸೈಟಿಗಳ ರಿಜಿಸ್ಟ್ರಾರ್‌ಗೆ ಸಲ್ಲಿಸಿದ್ದರು. ಇದು ಕಾಯ್ದೆಯ ಸೆಕ್ಷನ್‌ 27ಎ ಅಡಿ ತನಿಖೆಗೆ ಅವಕಾಶ ಕಲ್ಪಿಸಿದ್ದು, ಇದರಿಂದ ಸೊಸೈಟಿಯ ಕಾರ್ಯಚಟುವಟಿಕೆಯನ್ನು ನಿಭಾಯಿಸಲು ಆಡಳಿತಾಧಿಕಾರಿಯನ್ನು ನೇಮಿಸುವ ಸಾಧ್ಯತೆ ಇದೆ. ಆದ್ದರಿಂದ, ನೋಟಿಸ್‌ಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು.

ಇದಕ್ಕೆ ಆಕ್ಷೇಪಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿ.ಜಿ. ಭಾನು ಪ್ರಕಾಶ್‌ ಅವರು, 2025ರ ಅಕ್ಟೋಬರ್ 5ರಂದು ನಡೆಸಲು ಉದ್ದೇಶಿಸಿರುವ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕಸಾಪ ನಿರ್ಣಯ ಕೈಗೊಂಡರೆ ತನಿಖೆಯು ಅನೂರ್ಜಿತವಾಗಲಿದೆ. ಆದ್ದರಿಂದ, ಕಾಯ್ದೆಯ ಸೆಕ್ಷನ್‌ 27ಎ ಅಡಿ ತನಿಖೆಗೆ ನ್ಯಾಯಾಲಯ ಅನುಮತಿಸಬೇಕು ಎಂದು ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X