Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಡಿಪಾರು ಆದೇಶ ಪ್ರಶ್ನಿಸಿ ಮೊದಲು...

ಗಡಿಪಾರು ಆದೇಶ ಪ್ರಶ್ನಿಸಿ ಮೊದಲು ಸರಕಾರಕ್ಕೆ ಮೇಲ್ಮನವಿ ಸಲ್ಲಿಸಬೇಕು : ಅಡ್ವೊಕೇಟ್ ಜನರಲ್

ವಾರ್ತಾಭಾರತಿವಾರ್ತಾಭಾರತಿ8 Oct 2025 7:38 PM IST
share
ಗಡಿಪಾರು ಆದೇಶ ಪ್ರಶ್ನಿಸಿ ಮೊದಲು ಸರಕಾರಕ್ಕೆ ಮೇಲ್ಮನವಿ ಸಲ್ಲಿಸಬೇಕು : ಅಡ್ವೊಕೇಟ್ ಜನರಲ್
ಹೈಕೋರ್ಟ್‌ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ

ಬೆಂಗಳೂರು : ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಹೊರಡಿಸಲಾಗಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೂ, ಮಹೇಶ್ ಶೆಟ್ಟಿ ತಿಮರೋಡಿ ನೇರವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದ್ದರಿಂದ, ಅರ್ಜಿಯು ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ಸರಕಾರ ಹೈಕೋರ್ಟ್ ಮುಂದೆ ಪ್ರತಿಪಾದಿಸಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಸರಕಾರದ ಪರವಾಗಿ ಹಾಜರಿದ್ದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 59ರ ಪ್ರಕಾರ ಗಡಿಪಾರು ಆದೇಶ ಹೊರಡಿಸಿದ 30 ದಿನಗಳ ಒಳಗೆ ಬಾದಿತ ವ್ಯಕ್ತಿಗೆ ಆ ಆದೇಶ ಪ್ರಶ್ನಿಸಿ‌ ಸರಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ, ಅರ್ಜಿದಾರರು ನೇರವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯು ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ತಿಮರೋಡಿ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ನಿರೀಕ್ಷಣಾ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಗುರುವಾರ ಅಲ್ಲಿ ವಿಚಾರಣೆ ನಡೆಯಲಿದೆ. ಆದ್ದರಿಂದ, ಈ ಅರ್ಜಿಯ ವಿಚಾರಣೆ ಮುಂದೂಡಬೇಕೆಂದು ನ್ಯಾಯಪೀಠವನ್ನು ಕೋರಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ನಿರೀಕ್ಷಣಾ ಜಾಮೀನು ಅರ್ಜಿ ಕುರಿತಂತೆ ವಿಚಾರಣಾ ನ್ಯಾಯಾಲಯದಲ್ಲಿ ಏನಾಗಲಿದೆ ಕಾದು ನೋಡೋಣ. ನೀವೂ ಸಹ (ಅರ್ಜಿದಾರರು) ಸೆಕ್ಷನ್ 59ರ ಪ್ರಕಾರ ಮೊದಲು ಸರಕಾರಕ್ಕೆ ಮೇಲ್ಮನವಿ ಸಲ್ಲಿಸಿ, ನಂತರ ಇಲ್ಲಿಗೆ ಬನ್ನಿ. ಯಾವುದೇ ಶಾರ್ಟ್‌ಕಟ್ ಬಳಸಬೇಡಿ ಎಂದು ಮೌಖಿಕವಾಗಿ ಸೂಚಿಸಿತಲ್ಲದೆ, ವಿಚಾರಣೆಯನ್ನು ಸೋಮವಾರಕ್ಕೆ (ಅಕ್ಟೋಬರ್ 13) ಮುಂದೂಡಿತು.

ಮಧ್ಯಂತರ ಆದೇಶ ವಿಸ್ತರಣೆ:

ಈ ವೇಳೆ ತಿಮರೋಡಿ ಪರ ವಕೀಲರು, ಅರ್ಜಿಯ ಮುಂದಿನ ವಿಚಾರಣೆವರೆಗೆ ಮಧ್ಯಂತರ ಆದೇಶ ವಿಸ್ತರಿಸುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಶಿಕಿರಣ್ ಶೆಟ್ಟಿ ಅವರು, ಅರ್ಜಿದಾರರ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ. ಅರ್ಜಿದಾರರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದ್ದು, ಈಗಾಗಲೇ ಅವರು ತಲೆ ಮರೆಸಿಕೊಂಡಿದ್ದಾರೆ. ಹೀಗಿರುವಾಗ, ಮಧ್ಯಂತರ ಆದೇಶ ವಿಸ್ತರಿಸುವ ಪ್ರಶ್ನೆಯೇ ಎದುರಾಗುವುದಿಲ್ಲ ಎಂದರು.

ಆಗ ನ್ಯಾಯಪೀಠ, ಅರ್ಜಿದಾರರು ತಲೆಮರೆಸಿಕೊಂಡಿದ್ದಾರೆ ಎಂದಾದರೆ, ಅಲ್ಲಿಗೆ ಅವರ ಗಡಿಪಾರು ಆದೇಶದ ಉದ್ದೇಶ ಈಡೇರಿದಂತಾಯಿತಲ್ಲವೇ ಎಂದು ಲಘುಧಾಟಿಯಲ್ಲಿ ನುಡಿಯಿತು. ಅಂತಿಮವಾಗಿ, ಗಡಿಪಾರು ಆದೇಶ ಸಂಬಂಧ ಆತುರದ ಕ್ರಮಕ್ಕೆ ಮುಂದಾಗದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿದ ನ್ಯಾಯಪೀಠ, ಸೋಮವಾರ ಮಧ್ಯಾಹ್ನ 2.30ಕ್ಕೆ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X