Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತೃತೀಯ ಲಿಂಗಿಗಳ ಸಮೀಕ್ಷೆ; ʼಸ್ಟ್ರಿಪ್...

ತೃತೀಯ ಲಿಂಗಿಗಳ ಸಮೀಕ್ಷೆ; ʼಸ್ಟ್ರಿಪ್ ಆ್ಯಂಡ್ ಸರ್ಚ್ʼ ವಿಧಾನಕ್ಕೆ ಹೈಕೋರ್ಟ್ ತಡೆಯಾಜ್ಞೆ

ವಾರ್ತಾಭಾರತಿವಾರ್ತಾಭಾರತಿ15 Oct 2025 2:54 PM IST
share
ತೃತೀಯ ಲಿಂಗಿಗಳ ಸಮೀಕ್ಷೆ; ʼಸ್ಟ್ರಿಪ್ ಆ್ಯಂಡ್ ಸರ್ಚ್ʼ ವಿಧಾನಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯದಲ್ಲಿ ಸೆಪ್ಟೆಂಬರ್ 15ರಿಂದ ಆರಂಭಿಸಲಾಗಿರುವ ತೃತೀಯ ಲಿಂಗಿಗಳ ಸಮೀಕ್ಷೆಯ ವೇಳೆ ತೃತೀಯ ಲಿಂಗಿಗಳ ಲಿಂಗ ಪತ್ತೆಗೆ ನಡೆಸಲಾಗುವ ʼಸ್ಟ್ರಿಪ್ ಆ್ಯಂಡ್ ಸರ್ಚ್ʼ (ಬಟ್ಟೆ ತೆಗೆಸಿ, ಶೋಧಿಸುವ) ವಿಧಾನಕ್ಕೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.

ತೃತೀಯ ಲಿಂಗಿಗಳ ಲಿಂಗ ಗುರುತು, ವೈದ್ಯಕೀಯ ಮತ್ತು ಸಾಮಾಜಿಕ ಮಾಹಿತಿ ಸಂಗ್ರಹಿಸುತ್ತಿರುವ ಸಮೀಕ್ಷೆಯನ್ನು ಪ್ರಶ್ನಿಸಿ ಅನಿತಾ ಹ್ಯುಮ್ಯಾನಿಟೇರಿಯನ್‌ ಟ್ರಸ್ಟ್‌ನ ಸಂಸ್ಥಾಪಕಿ ಡಾ. ಅನಿತಾ ಪ್ರಸಾದ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.

ತೃತೀಯ ಲಿಂಗಿಗಳಿಗೆ ಸಂಬಂಧಿಸಿದಂತೆ ನಡೆಸುವ ಯಾವುದೇ ಸಮೀಕ್ಷೆಯನ್ನು ಕಡ್ಡಾಯವಾಗಿ ಗೌಪ್ಯವಾಗಿಡಬೇಕು. ಸಂಗ್ರಹಿಸಿದ ಮಾಹಿತಿಯನ್ನು ಹೇಗೆ ಗೌಪ್ಯತೆಯಿಂದ ಸಂರಕ್ಷಿಸಲಾಗುತ್ತದೆ ಎಂಬ ಕುರಿತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು 3 ದಿನಗಳಲ್ಲಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಬೇಕು. ತೃತೀಯ ಲಿಂಗಿಗಳು ಸ್ವಯಂಪ್ರೇರಿತವಾಗಿ ಸಮೀಕ್ಷೆಯಲ್ಲಿ ಭಾಗವಹಿಸುವುದನ್ನು ಸರಕಾರ ಮತ್ತು ಸಂಬಂಧಿತರು ಖಾತ್ರಿಪಡಿಸಬೇಕು. ಯಾರನ್ನೂ ಕರೆದು ಬಟ್ಟೆ ತೆಗೆಸಿ ಶೋಧಿಸಿ, ಗುರುತು ಪತ್ತೆ ಮಾಡಿ ಸಮೀಕ್ಷೆ ಮಾಡುವಂತಿಲ್ಲ ಎಂದು ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ.

ಅರ್ಜಿ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ತೃತೀಯ ಲಿಂಗಿಗಳ ರಾಷ್ಟ್ರೀಯ ಮಂಡಳಿ ಹಾಗೂ ಭಾರತ ಜನಗಣತಿ ಆಯುಕ್ತರಿಗೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿಸೆಂಬರ್‌ 5ಕ್ಕೆ ಮುಂದೂಡಿತು.

ಅರ್ಜಿದಾರರ ವಾದವೇನು?

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ತೃತೀಯ ಲಿಂಗಿಗಳ ಖಾಸಗಿತನವನ್ನು ಉಲ್ಲಂಘಿಸಿ ಸರಕಾರ ಸಮೀಕ್ಷೆ ನಡೆಸುತ್ತಿದೆ. ಬಟ್ಟೆ ತೆಗೆಸಿ ಶೋಧಿಸಿ, ಗುರುತು ಪತ್ತೆ ಮಾಡುತ್ತಿರುವ ಸಮೀಕ್ಷೆಗೆ ತಡೆ ನೀಡಬೇಕು. ಇಲ್ಲಿಯವರೆಗೆ ಸಂಗ್ರಹಿಸಿರುವ ದತ್ತಾಂಶವನ್ನು ಗೌಪ್ಯವಾಗಿ ಇಡಲು ನಿರ್ದೇಶಿಸಬೇಕು ಎಂದು ಕೋರಿದರು.

ರಾಜ್ಯ ಸರಕಾರದ ಪರ ಹಾಜರಿದ್ದ ವಕೀಲೆ ನಿಲೋಫರ್‌ ಅಕ್ಬರ್‌, ಸರಕಾರದ ಪರವಾಗಿ ನೋಟಿಸ್‌ ಪಡೆದು, ಆಕ್ಷೇಪಣೆ ಸಲ್ಲಿಕೆ ಮಾಡಲಾಗುವುದು. ಸೆಪ್ಟೆಂಬರ್‌ 15ರಿಂದ ಸಮೀಕ್ಷೆ ಆರಂಭವಾಗಿದೆ. ಒಂದು ತಿಂಗಳಿಂದ ಸಮೀಕ್ಷೆ ನಡೆಯುತ್ತಿದ್ದು, ಯಾರೂ ಈ ಅಹವಾಲು ಎತ್ತಿಲ್ಲ. ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಪ್ರಕರಣವನ್ನು ನ್ಯಾಯಾಲಯ ಡಿಸೆಂಬರ್‌ 5ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ. ಅಂದೇ ಈ ಅರ್ಜಿಯನ್ನೂ ವಿಚಾರಣೆ ನಡೆಸಬಹುದು ಎಂದರು.

ಆಗ ನ್ಯಾಯಪೀಠ, ತೃತೀಯ ಲಿಂಗಿಗಳ ಗುರುತು ಪತ್ತೆಗೆ ಬಲವಂತ ಮಾಡುವಂತಿಲ್ಲ. ಆಸ್ಪತ್ರೆಗೆ ಹೋಗಿ ಬಟ್ಟೆ ತೆಗೆಸಿ ಗುರುತು ಪತ್ತೆ ಮಾಡು ವಿಧಾನ ಪಾಲಿಸುವಂತೆ ಸೂಚಿಸಲಾಗುತ್ತಿದೆಯೇ? ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸುವುದಕ್ಕೆ ಕಾಯ್ದೆ ಇದೆ. ಆದರೆ, ಈ ಸಮೀಕ್ಷೆ ನಡೆಸಲು ಯಾವುದೇ ಕಾನೂನು ಇಲ್ಲ. ಇದನ್ನು ಸರಕಾರ ಮಾಡಬಾರದಲ್ಲವೇ? ಎಂದು ಸರಕಾರದ ವಕೀಲರನ್ನು ಪ್ರಶ್ನಿಸಿತಲ್ಲದೆ, ಅಂತಿಮವಾಗಿ, ಸ್ಟ್ರಿಪ್ ಆ್ಯಂಡ್ ಸರ್ಚ್ ವಿಧಾನಕ್ಕೆ ತಡೆ ನೀಡಿತು.

ಅರ್ಜಿದಾರರ ಮನವಿ:

ಕಾನೂನುಬದ್ಧ, ಪಾರದರ್ಶಕ ಮತ್ತು ಹಕ್ಕು ಆಧಾರಿತವಾಗಿ ಚೌಕಟ್ಟು ರೂಪಿಸಿ ಸಂಬಂಧಿತರೊಂದಿಗೆ ಸಮಾಲೋಚಿಸುವವರೆಗೆ ತೃತೀಯ ಲಿಂಗಿಗಳ ಸಮೀಕ್ಷೆ ನಡೆಸಬಾರದು. ಸಂವಿಧಾನದ ಪರಿಚ್ಛೇದ 14, 15, 19(1)(a), 21ಕ್ಕೆ ವಿರುದ್ಧವಾಗಿ ಖಾಸಗಿತನ ಉಲ್ಲಂಘಿಸಿ ನಡೆಸುತ್ತಿರುವ ಸಮೀಕ್ಷೆಯನ್ನು ಅಸಾಂವಿಧಾನಿಕ ಮತ್ತು ಸ್ವೇಚ್ಛೆಯ ಕ್ರಮ ಎಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಸಾಮಾಜಿಕ ನ್ಯಾಯ ತಜ್ಞರು, ಸಮುದಾಯದ ಮುಖಂಡರು ಮತ್ತು ಶಾಸನಬದ್ಧ ಸಂಸ್ಥೆಯಾದ ತೃತೀಯ ಲಿಂಗಿಗಳ ರಾಷ್ಟ್ರೀಯ ಮಂಡಳಿ ಜತೆ ಸಮಾಲೋಚಿಸಿ, ತೃತೀಯ ಲಿಂಗಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ ಮತ್ತು ನಿಯಮಕ್ಕೆ ಪೂರಕವಾಗಿ ಹೊಸದಾಗಿ ದತ್ತಾಂಶ ಸಂಗ್ರಹ ಅಥವಾ ನೀತಿ ರೂಪಿಸಲು ಪ್ರತಿವಾದಿಗಳಿಗೆ ನಿರ್ದೇಶಿಸಬೇಕು. ಈಗ ಆಕ್ಷೇಪಾರ್ಹ ಸ್ಟ್ರಿಪ್‌ ಆ್ಯಂಡ್‌ ಸರ್ಚ್‌ ವಿಧಾನದಿಂದ ಸಂಗ್ರಹಿಸಿರುವ ದತ್ತಾಂಶ ನಾಶಪಡಿಸಲು ನಿರ್ದೇಶಿಸಬೇಕು. ಲಿಂಗತ್ವ ಗುರುತು ದತ್ತಾಂಶ, ಖಾಸಗಿತನ ಮತ್ತು ತೃತೀಯ ಲಿಂಗಿಗಳ ಘನತೆಗೆ ಪೂರಕವಾಗಿ ಸಮಗ್ರವಾದ ಮಾರ್ಗಸೂಚಿಗಳನ್ನು ರೂಪಿಸಲು ಪ್ರತಿವಾದಿಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X