Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುನಾವಣಾ ಅಕ್ರಮ ಪ್ರಕರಣಗಳಲ್ಲಿ...

ಚುನಾವಣಾ ಅಕ್ರಮ ಪ್ರಕರಣಗಳಲ್ಲಿ ಉದ್ದೇಶಪೂರ್ವಕ ಲೋಪ; ಅಧಿಕಾರಿಗಳ ಕಾರ್ಯವೈಖರಿಗೆ ಹೈಕೋರ್ಟ್ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ18 Oct 2025 12:07 AM IST
share
ಚುನಾವಣಾ ಅಕ್ರಮ ಪ್ರಕರಣಗಳಲ್ಲಿ ಉದ್ದೇಶಪೂರ್ವಕ ಲೋಪ; ಅಧಿಕಾರಿಗಳ ಕಾರ್ಯವೈಖರಿಗೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಚುನಾವಣಾ ಅಕ್ರಮ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ದೋಷಪೂರಿತ ಆರೋಪ ಪಟ್ಟಿ ಸಲ್ಲಿಸುತ್ತಾರೆ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧಿಕಾರಿಗಳ ಕಾರ್ಯವೈಖರಿಯನ್ನು ಟೀಕಿಸಿತು.

ಅಧಿಕಾರಿಗಳಿಗೆ ತಮಗೆ ಏನಾದರೂ ಆದರೆ ಎಂಬ ಭಯ ಇರುತ್ತದೆ. ತಮ್ಮ ಸುರಕ್ಷತೆ ದೃಷ್ಟಿಯಿಂದ ಹೀಗೆ ನಡೆದುಕೊಳ್ಳುತ್ತಾರೆ. ಪ್ರಕರಣ ದಾಖಲಿಸಬೇಕು, ಅದು ವಿಫಲವಾಗಲಿ ಎಂಬುದು ಅಧಿಕಾರಿಗಳ ಧೋರಣೆ. ಇದೆಲ್ಲವೂ ಗೊತ್ತಿದ್ದೇ ಅಧಿಕಾರಿಗಳು ಹಾಗೆ ಮಾಡುತ್ತಾರೆ, ಇದು ತಪ್ಪು ಎಂದು ನ್ಯಾಯಾಲಯ ತೀಕ್ಷ್ಣವಾಗಿ ನುಡಿಯಿತು.

ಪ್ರಕರಣ ರದ್ದು:

ಅರ್ಜಿದಾರರ ವಿರುದ್ಧದ ಆರೋಪ ಪಟ್ಟಿಯಲ್ಲಿನ ಅಂಶಗಳು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 171 ಎಚ್ ಅಡಿಯ (ಚುನಾವಣೆಗೆ ಸಂಬಂಧಿಸಿದಂತೆ ಅಕ್ರಮ ಹಣ ಪಾವತಿ) ಅಪರಾಧಕ್ಕೆ ಅನ್ವಯಿಸುವುದಿಲ್ಲ. ಬದಲಿಗೆ, ಐಪಿಸಿ ಸೆಕ್ಷನ್ 188 ಅಡಿ (ಸರ್ಕಾರಿ ಅಧಿಕಾರಿಯ ಆದೇಶಕ್ಕೆ ಅವಿಧೇಯತೆ ತೋರುವುದು) ಅಪರಾಧಕ್ಕೆ ಅನ್ವಯಿಸುತ್ತವೆ. ಆದ್ದರಿಂದ, ಅರ್ಜಿದಾರರ ವಿರುದ್ಧದ ಪ್ರಕ್ರಿಯೆ ಮುಂದುವರಿಸುವುದರಲ್ಲಿ ಅರ್ಥವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿತು.

ಅಧಿಕಾರಿಗಳ ನಡೆಗೆ ಕೋರ್ಟ್ ಕಿಡಿ:

ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಗಂಭೀರವಾಗಿ ನಡೆಸುವುದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದು ಅಗತ್ಯವಾಗಿದೆ. ಚುನಾವಣಾ ಅಪರಾಧಕ್ಕೆ ಪ್ರತ್ಯೇಕವಾಗಿ ಐಪಿಸಿಯಲ್ಲಿ ಅಧ್ಯಾಯವಿದೆ. ಹಾಲಿ ಪ್ರಕರಣದಲ್ಲಿ ಸಬ್ ಇನ್‌ಸ್ಪೆಕ್ಟರ್ ಶ್ರೇಣಿಯ ಅಧಿಕಾರಿ ಆರೋಪ ಪಟ್ಟಿ ಸಲ್ಲಿಸಿದ್ದು, ಐಪಿಸಿ ಸೆಕ್ಷನ್ 171 ಎಚ್ ಮತ್ತು ಸೆಕ್ಷನ್ 188 ನಡುವಿನ ಮೂಲಭೂತ ವ್ಯತ್ಯಾಸವನ್ನು ಗುರುತಿಸಿಲ್ಲ. ಪ್ರಮುಖರಿಗೆ ಸಂಬಂಧಿಸಿದ ಕೆಲ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೆಲವೊಮ್ಮೆ ದೋಷಪೂರಿತ ಆರೋಪ ಪಟ್ಟಿ ಸಲ್ಲಿಸುವ ಮೂಲಕ, ನ್ಯಾಯಾಲಯವೇ ವಾಸ್ತವಿಕ ನೆಲೆಯಲ್ಲಿ ಪ್ರಕರಣ ರದ್ದುಪಡಿಸಿದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಾರೆ. ಅಧಿಕಾರಿಗಳ ಇಂಥ ನಡೆಯ ಬಗ್ಗೆ ಎಚ್ಚರವಹಿಸಬೇಕಿದೆ ಎಂದು ಹೈಕೋರ್ಟ್ ಹೇಳಿದೆ.

ಇದಕ್ಕೂ ಮುನ್ನ ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಅನುಮತಿ ಪಡೆಯದೇ ಬೈಕ್ ರ್ಯಾಲಿ ಮೂಲಕ ಚುನಾವಣೆ ಪ್ರಚಾರ ನಡೆಸಿದ ಆರೋಪ ಅರ್ಜಿದಾರರ ಮೇಲಿದೆ. ಈ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯು ಐಪಿಸಿ ಸೆಕ್ಷನ್ 188 ಅಡಿ ಅಪರಾಧವಾಗುತ್ತದೆ. ಆದರೆ, ದುರದೃಷ್ಟಕರವೆಂದರೆ ನಮ್ಮ ಅಧಿಕಾರಿಗಳು ಐಪಿಸಿ ಸೆಕ್ಷನ್ 171 ಎಚ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ನ್ಯಾಯಾಲಯ ಆದೇಶದಲ್ಲಿ ಕಟುವಾದ ಅಭಿಪ್ರಾಯ ವ್ಯಕ್ತಪಡಿಸಬೇಕು. ತನಿಖೆ ನಡೆಸುವ ಅಧಿಕಾರಿಗಳಿಗೆ ಸಂದೇಶ ರವಾನೆಯಾಗಬೇಕು ಎಂದು ಕೋರಿದರು.

ಪ್ರಕರಣವೇನು?

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ರಂಗಸಮುದ್ರದ ಸಮೀಪ ಪ್ರತಾಪ್ ಸಿಂಹ ಮತ್ತಿತರರ ನಾಯಕರು ತಮ್ಮ ಪಕ್ಷದ ಕಾರ್ಯಕರ್ತರ ಜತೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಪ್ರತಾಪ್ ಮತ್ತು ಇತರರು ಕಾರಿನಲ್ಲಿದ್ದರು. ಇದಕ್ಕೆ ಯಾವುದೇ ಅನುಮತಿ ಪಡೆದಿರಲಿಲ್ಲ. ಇದಕ್ಕೆ ಸೂಕ್ತ ಪ್ರತಿಕ್ರಿಯೆ ಬಾರದಿದ್ದಾಗ ಐಪಿಸಿ ಸೆಕ್ಷನ್ 177 ಎಚ್ ಅಡಿ ಪ್ರತಾಪ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದರಿಂದ, ಪ್ರಕರಣ ರದ್ದು ಕೋರಿ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X