Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಿಲ್ಲಾ ಕಾರಾಗೃಹದಲ್ಲಿನ ಜಾಮರ್‌ಗಳಿಂದ...

ಜಿಲ್ಲಾ ಕಾರಾಗೃಹದಲ್ಲಿನ ಜಾಮರ್‌ಗಳಿಂದ ಕೋರ್ಟ್ ಕಲಾಪಗಳಿಗೆ ಸಮಸ್ಯೆ; ತಾಂತ್ರಿಕ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ6 Nov 2025 12:12 AM IST
share
ಜಿಲ್ಲಾ ಕಾರಾಗೃಹದಲ್ಲಿನ ಜಾಮರ್‌ಗಳಿಂದ ಕೋರ್ಟ್ ಕಲಾಪಗಳಿಗೆ ಸಮಸ್ಯೆ; ತಾಂತ್ರಿಕ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಹೊಸದಾಗಿ ಅಳವಡಿಸಲಾಗಿರುವ 5 ಜಾಮರ್‌ಗಳಿಂದ ಕೊಡಿಯಾಲಬೈಲ್‌ನಲ್ಲಿರುವ ಜಿಲ್ಲಾ ಕೋರ್ಟ್ ಸಂಕೀರ್ಣದ ಕಲಾಪಗಳಿಗೆ ಅಡ್ಡಿಯಾಗುತ್ತಿದೆ ಎಂಬ ಆಕ್ಷೇಪ ಹಿನ್ನೆಲೆಯಲ್ಲಿ, ಕಾರಾಗೃಹ ಹಾಗೂ ನ್ಯಾಯಾಲಯದ ಆವರಣದಲ್ಲಿನ ಮೊಬೈಲ್ ಸಿಗ್ನಲ್ ಸಾಮರ್ಥ್ಯ ಕುರಿತ ತಾಂತ್ರಿಕ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ಗಳನ್ನು ತಕ್ಷಣವೇ ತೆರವುಗೊಳಿಸಲು ಗೃಹ ಇಲಾಖೆ, ಜೈಲು ಅಧೀಕ್ಷಕರು ಸೇರಿ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಮಂಗಳೂರು ವಕೀಲರ ಸಂಘ ಮತ್ತದರ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀಧರ ಹೊಸಮನೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿ, ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಇತ್ತೀಚೆಗೆ ಮೊಬೈಲ್ ಜಾಮರ್‌ಗಳನ್ನು ಅಳವಡಿಸಲಾಗಿದ್ದು, ಇದರಿಂದ, ಸುತ್ತ ಒಂದೂವರೆಯಿಂದ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿದೆ. ಕಾರಾಗೃಹದ ಒಂದು ಕಿ.ಮೀ. ಪರಿಧಿಯೊಳಗೆ ನ್ಯಾಯಾಲಯ ಸಂಕೀರ್ಣ ಹಾಗೂ ಮಂಗಳೂರು ವಕೀಲರ ಸಂಘದ ಕಚೇರಿ ಇದೆ. ಜಾಮರ್‌ಗಳ ಅಳವಡಿಕೆಯಿಂದ ಕೋರ್ಟ್ ಹಾಗೂ ಸಂಘದ ಕಾರ್ಯಚಟುವಟಿಕೆಗೆ ಸಮಸ್ಯೆ ಉಂಟಾಗುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಜಾಮರ್‌ಗಳು ಕಾರಾಗೃಹದ ಆವರಣದೊಳಗಷ್ಟೇ ಕಾರ್ಯನಿರ್ವಹಿಸಿದರೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸುತ್ತಮುತ್ತಲ ಪ್ರದೇಶದಲ್ಲೂ ಸಮಸ್ಯೆ ಎದುರಾಗಿದೆ. ಜಾಮರ್‌ಗಳಿಂದಾಗಿ ವಕೀಲರು, ನ್ಯಾಯಾಧೀಶರು ಹಾಗೂ ಕಕ್ಷಿದಾರರು ಕಷ್ಟ ಅನುಭವಿಸುತ್ತಿದ್ದಾರೆ. ಮೊಬೈಲ್ ನೆಟ್ವರ್ಕ್ ಹಾಗೂ ಸರ್ವರ್ ಸಮಸ್ಯೆಯಿಂದ ಸಂಪರ್ಕಗಳು ಕಡಿತಗೊಂಡು ಪರದಾಡುವಂತಾಗಿದೆ. ಜಾಮರ್‌ಗಳಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಒಂದು ವಾರ ಕಾಲಾವಕಾಶ ನೀಡಿತಲ್ಲದೆ, ಕಾರಾಗೃಹದ ಆವರಣದೊಳಗಿನ ವಿವಿಧ ಸ್ಥಳಗಳಲ್ಲಿ ಹಾಗೂ ಕಾರಾಗೃಹದಿಂದ ಕೋರ್ಟ್‌ವರೆಗೆ ಮತ್ತು ನ್ಯಾಯಾಲಯದ ವಿವಿಧ ಸ್ಥಳಗಳಲ್ಲಿ ಮೊಬೈಲ್ ಸಿಗ್ನಲ್ ಸಾಮರ್ಥ್ಯ ಎಷ್ಟಿದೆ ಎಂಬುದನ್ನು ಖಚಿತಪಡಿಸುವ ತಾಂತ್ರಿಕ ವರದಿ ಸಲ್ಲಿಸಬೇಕು. ಜಾಮರ್‌ಗಳಿಂದ ಬರುವ ಜಾಮಿಂಗ್ ಸಿಗ್ನಲ್‌ಗಳು ನ್ಯಾಯಾಲಯದಲ್ಲಿ ಮೊಬೈಲ್ ಸಿಗ್ನಲ್‌ಗಳ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುತ್ತವೆಯೇ ಎಂಬ ಬಗ್ಗೆಯೂ ವರದಿಯಲ್ಲಿ ವಿವರಿಸಿರಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ನವೆಂಬರ್ 18ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X