Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಸಹಯೋಗ' ಪೋರ್ಟಲ್ ಆರಂಭಿಸಿದ್ದ ಕೇಂದ್ರದ...

ʼಸಹಯೋಗ' ಪೋರ್ಟಲ್ ಆರಂಭಿಸಿದ್ದ ಕೇಂದ್ರದ ಕ್ರಮ ಎತ್ತಿಹಿಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ ಕಾರ್ಪ್‌ನಿಂದ ಮೇಲ್ಮನವಿ

ವಾರ್ತಾಭಾರತಿವಾರ್ತಾಭಾರತಿ15 Nov 2025 8:01 PM IST
share
ʼಸಹಯೋಗ ಪೋರ್ಟಲ್ ಆರಂಭಿಸಿದ್ದ ಕೇಂದ್ರದ ಕ್ರಮ ಎತ್ತಿಹಿಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ ಕಾರ್ಪ್‌ನಿಂದ ಮೇಲ್ಮನವಿ

ಬೆಂಗಳೂರು : ಕಾನೂನುಬಾಹಿರ ಆನ್‌ಲೈನ್ ಮಾಹಿತಿಗಳನ್ನು ನಿರ್ಬಂಧಿಸುವ ಸಂಬಂಧ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಆದೇಶಿಸಲು 'ಸಹಯೋಗ' ಪೋರ್ಟಲ್‌ ಆರಂಭಿಸಿರುವ ಕೇಂದ್ರ ಸರಕಾರದ ಕ್ರಮ ಎತ್ತಿಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಎಕ್ಸ್‌ ಕಾರ್ಪ್‌ (ಟ್ವಿಟರ್) ಸಂಸ್ಥೆ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79(3)(ಬಿ) ವ್ಯಾಪ್ತಿಯನ್ನು ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿ ಸೆಪ್ಟೆಂಬರ್ 24ರಂದು ಏಕಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪು ರದ್ದುಕೋರಿ ಎಕ್ಸ್ ಕಾರ್ಪ್ ಮೇಲ್ಮನವಿ ಸಲ್ಲಿಸಿದೆ. ಅರ್ಜಿಯಲ್ಲಿ ಕಾನೂನು ಮತ್ತು ನ್ಯಾಯ ಸಚಿವಾಲಯ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಹಣಕಾಸು ಸಚಿವಾಲಯ, ರಕ್ಷಣಾ ಸಚಿವಾಲಯ, ರೈಲ್ವೇ ಸಚಿವಾಲಯ, ಭಾರಿ ಕೈಗಾರಿಕಾ ಸಚಿವಾಲಯ, ಗ್ರಾಮೀಣಾಭಿವೃದ್ಧಿ ಸಚಿವಾಲಯಗಳ ಕಾರ್ಯದರ್ಶಿಗಳನ್ನು ಪ್ರತಿವಾದಿಯನ್ನಾಗಿಸಲಾಗಿದ್ದು, ಮೇಲ್ಮನವಿಯು ಇನ್ನಷ್ಟೇ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ.

ಏಕಸದಸ್ಯ ನ್ಯಾಯಪೀಠದ ಆದೇಶವೇನು?

ಸಾಮಾಜಿಕ ಮಾಧ್ಯಮದ ನಿಯಂತ್ರಣ ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಕ್ಸ್ ಕಾರ್ಪ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿತ್ತು. ಭಾರತೀಯ ನಾಗರಿಕನಲ್ಲದ ಅರ್ಜಿದಾರ ಎಕ್ಸ್‌ ಕಾರ್ಪ್‌ ಸಂಸ್ಥೆಯು ಸಂವಿಧಾನದ 19ನೇ ವಿಧಿ ಅಡಿಯಲ್ಲಿ ಆಶ್ರಯ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಅರ್ಜಿದಾರ ಸಂಸ್ಥೆಯು ತನ್ನ ಮೂಲಸ್ಥಾನವಾದ ಅಮೆರಿಕದಲ್ಲಿ ನಿಯಂತ್ರಣ ವ್ಯವಸ್ಥೆಗೆ ಒಳಪಟ್ಟಿದೆ. ಅಲ್ಲಿನ ವ್ಯಾಪ್ತಿಯಲ್ಲಿರುವ ಟ್ವೀಟ್‌ ತೆಗೆಯುವ ಕಾನೂನಿನ ಅಡಿ ಉಲ್ಲಂಘನೆಯನ್ನು ಕ್ರಿಮಿನಲ್‌ ಚಟುವಟಿಕೆ ಎಂದು ನಿರ್ಧರಿಸಲಾಗುತ್ತದೆ ಎಂದು ಅಲ್ಲಿ ಆದೇಶ ಪಾಲಿಸುತ್ತಿದೆ. ಆದರೆ, ಭಾರತದಲ್ಲಿ ಆ ದೇಶವನ್ನು ಪಾಲಿಸಲು ಎಕ್ಸ್‌ ಕಾರ್ಪ್‌ ನಿರಾಕರಿಸುತ್ತಿದೆ. ಇದು ಮುಖಗೇಡಿತನ (Sans Countenance) ಎಂದು ಅಭಿಪ್ರಾಯಪಟ್ಟಿತ್ತು.

ನಮ್ಮ ರಾಷ್ಟ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಬಯಸುವ ಪ್ರತಿಯೊಂದು ವೇದಿಕೆಯೂ ಸ್ವಾತಂತ್ರ್ಯವನ್ನು ಜವಾಬ್ದಾರಿಯೊಂದಿಗೆ ತೆಗೆದುಕೊಳ್ಳಬೇಕು ಮತ್ತು ಪ್ರವೇಶದ ಸವಲತ್ತು ಅದರೊಂದಿಗೆ ಹೊಣೆಗಾರಿಕೆಯ ಗಂಭೀರ ಕರ್ತವ್ಯವನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳಬೇಕು. ಆಧುನಿಕ ವಿಚಾರಗಳ ದುಂಡುಕಲೆಮನೆಯಾಗಿರುವ (Amphitheatre) ಸಾಮಾಜಿಕ ಮಾಧ್ಯಮವನ್ನು ಅರಾಜಕ ಸ್ವಾತಂತ್ರ್ಯದ ಸ್ಥಿತಿಯಲ್ಲಿ ಬಿಡಲಾಗುವುದಿಲ್ಲ. ವಿಷಯದ ನಿಯಂತ್ರಣವು ಘನತೆಯನ್ನು ರಕ್ಷಿಸಲು ಮತ್ತು ಮಹಿಳೆಯರ ವಿರುದ್ಧದ ಅಪರಾಧ ನಿರ್ಬಂಧಿಸಲು ಅಗತ್ಯವಾಗಿದೆ. ಅನಾದಿ ಕಾಲದಿಂದಲೂ ಮಾಹಿತಿ ಮತ್ತು ಸಂಹವನವು ನಿಯಂತ್ರಣಕ್ಕೆ ಒಳಪಟ್ಟಿದ್ದು, ಮಾಹಿತಿದಾರರಿಂದ ಅಂಚೆ ಕಾಲದವರಿಗೆ, ಈಗ ವಾಟ್ಸಾಪ್‌, ಇನ್‌ಸ್ಟಾಗ್ರಾಂ ಮತ್ತು ಸ್ನ್ಯಾಪ್‌ಚಾಟ್‌ ಎಲ್ಲವೂ ಸ್ಥಳೀಯ ಮತ್ತು ಜಾಗತಿಕವಾಗಿ ನಿಯಂತ್ರಣಕ್ಕೆ ಒಳಪಟ್ಟಿವೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿತ್ತು.

ಎಕ್ಸ್ ಕಾರ್ಪ್ ಆಕ್ಷೇಪವೇನು?

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69ಎ ಮೀರಿ ಸೆಕ್ಷನ್‌ 79(3)(ಬಿ) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಆರೋಪಿಸಿದ್ದ ಎಕ್ಸ್‌ ಕಾರ್ಪ್, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ನೀಡಿದೆ. ಇದು ಸುಪ್ರೀಂಕೋರ್ಟ್‌ ಆದೇಶ ಉಲ್ಲಂಘನೆಯಾಗಿದೆ. ಸೆಕ್ಷನ್‌ 79(3)(ಬಿ) ಅಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಂಸ್ಥೆಗಳು ನಿರ್ಬಂಧ ಆದೇಶ ಮಾಡಲು ಅನುಮತಿಸುವ ಕೇಂದ್ರ ಗೃಹ ಇಲಾಖೆ ರೂಪಿಸಿರುವ ಸಹಯೋಗ್‌ ಪೋರ್ಟಲ್‌ ಅನ್ನೂ ಎಕ್ಸ್‌ ಪ್ರಶ್ನಿಸಿತ್ತು. ಸೆಕ್ಷನ್‌ 69ಎಗೆ ಪರ್ಯಾಯವಾಗಿ ಸಹಯೋಗ್‌ ಪೋರ್ಟಲ್‌ ವ್ಯವಸ್ಥೆ ರೂಪಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ರಿಟ್ ಅರ್ಜಿಯಲ್ಲಿ ಆಕ್ಷೇಪಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X