Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೈಶುಗರ್‌ ಮಾಜಿ ಅಧ್ಯಕ್ಷರ ವಿರುದ್ಧದ ಉಪ...

ಮೈಶುಗರ್‌ ಮಾಜಿ ಅಧ್ಯಕ್ಷರ ವಿರುದ್ಧದ ಉಪ ಲೋಕಾಯುಕ್ತ ತನಿಖೆ; ಸರಕಾರದ ಆದೇಶ ರದ್ದತಿಗೆ ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ18 Nov 2025 12:39 AM IST
share
ಮೈಶುಗರ್‌ ಮಾಜಿ ಅಧ್ಯಕ್ಷರ ವಿರುದ್ಧದ ಉಪ ಲೋಕಾಯುಕ್ತ ತನಿಖೆ; ಸರಕಾರದ ಆದೇಶ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಸರಕಾರಿ ಸಂಸ್ಥೆ ಅಥವಾ ಸಾರ್ವಜನಿಕ ವಲಯದ ಉದ್ಯಮಕ್ಕೆ ರಾಜಕಾರಣಿಯನ್ನು ಅಧ್ಯಕ್ಷರನ್ನಾಗಿ ನೇಮಿಸುವ ನಿರ್ಧಾರವು ಸದಾ ಕಂಪನಿಯ ಕಾರ್ಮಿಕರ ದುಃಖವನ್ನು ಹೆಚ್ಚಿಸುವುದಲ್ಲದೆ ಸಾರ್ವಜನಿಕ ಹಿತಾಸಕ್ತಿಗೆ ಹಾನಿಯನ್ನುಂಟು ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, 2008ರಿಂದ 2012ರವರೆಗೆ ಮೈಶುಗರ್‌ ಕಂಪನಿಯ ಅಧ್ಯಕ್ಷರಾಗಿದ್ದ ನಾಗರಾಜಪ್ಪ ಅವಧಿಯಲ್ಲಿ 127 ಕೋಟಿ ನಷ್ಟದ ಬಗ್ಗೆ ಉಪ ಲೋಕಾಯುಕ್ತ ತನಿಖೆಗೆ ಆದೇಶಿಸಿರುವುದನ್ನು ರದ್ದುಪಡಿಸಲು ನಿರಾಕರಿಸಿದೆ.

ಮೈಸೂರು ಸಕ್ಕರೆ ಕಾರ್ಖಾನೆ ಲಿಮಿಟೆಡ್‌ (ಮೈಶುಗರ್‌ ಕಂಪನಿ) ಅಧ್ಯಕ್ಷರಾಗಿದ್ದಾಗ ನಡೆದ ಆರ್ಥಿಕ ಅಕ್ರಮಗಳನ್ನು ಪರಿಶೀಲಿಸಲು ರಾಜ್ಯ ಸರಕಾರ ತನಿಖೆಯನ್ನು ಉಪ ಲೋಕಾಯುಕ್ತಕ್ಕೆ ವಹಿಸಿದ್ದನ್ನು ಪ್ರಶ್ನಿಸಿ 80 ವರ್ಷದ ಮಂಡ್ಯದ ನಾಗರಾಜಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಡಿ.ಕೆ. ಸಿಂಗ್‌ ಹಾಗೂ ನ್ಯಾಯಮೂರ್ತಿ ಟಿ. ವೆಂಕಟೇಶ್‌ ನಾಯಕ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ.

ಸರಕಾರಿ ಸಂಸ್ಥೆ ಅಥವಾ ಸಾರ್ವಜನಿಕ ವಲಯದ ಉದ್ಯಮದ ಅಧ್ಯಕ್ಷ ಹುದ್ದೆಗೆ ಉತ್ತಮ ಜ್ಞಾನವುಳ್ಳ ಹಾಗೂ ವೃತ್ತಿಪರ ಶ್ರೇಷ್ಠತೆ ಹೊಂದಿರುವ ಅರ್ಹ ವ್ಯಕ್ತಿಗಳನ್ನು ಮಾತ್ರ ಸರಕಾರ ನೇಮಿಸಬೇಕು. ಯಾವುದೇ ವೃತ್ತಿಪರ ಅರ್ಹತೆ ಮತ್ತು ವಿಷಯಜ್ಞಾನವಿಲ್ಲದ ಅರ್ಜಿದಾರರನ್ನು ರಾಜಕೀಯ ಕಾರಣಗಳಿಗಾಗಿ ಏಷ್ಯಾದ ಅತಿದೊಡ್ಡ ಸಕ್ಕರೆ ಕಾರ್ಖಾನೆಗಳಲ್ಲಿ ಒಂದಾದ ಸಂಸ್ಥೆಗೆ ಅಧ್ಯಕ್ಷರನ್ನಾಗಿ ನೇಮಿಸುವ ಕೆಟ್ಟ ನಿರ್ಧಾರವನ್ನು ಸರಕಾರ ಕೈಗೊಂಡಿದ್ದು, ಇದು ಅವರ ಅಧಿಕಾರಾವಧಿಯಲ್ಲಿ 127 ಕೋಟಿ ರೂ. ನಷ್ಟಕ್ಕೆ ಕಾರಣವಾಗಿದೆ ಎಂದಿರುವ ಹೈಕೋರ್ಟ್, ಮೈಶುಗರ್‌ ಅಧ್ಯಕ್ಷ ರಾಗಿ ಅರ್ಜಿದಾರರು ಕೈಗೊಂಡಿರುವ ಕ್ರಮಗಳು, ನಡಾವಳಿಕೆಗಳನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಎಲ್ಲ ಸಂವಿಧಾನದತ್ತ ಅಧಿಕಾರ ಸರಕಾರಕ್ಕೆ ಇದೆ ಎಂದು ಆದೇಶಿಸಿದೆ.

ನಷ್ಟ ವಸೂಲಿ ಸರಕಾರದ ವಿವೇಚನೆಗೆ:

ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಪ ಲೋಕಾಯುಕ್ತರು ನೀಡಿರುವ ವರದಿಯಲ್ಲಿ ಯಾವುದೇ ದೋಷ ನಮಗೆ ಕಂಡುಬಂದಿಲ್ಲ. ಮೈಶುಗರ್‌ ಅಧ್ಯಕ್ಷರಾಗಿ ಅರ್ಜಿದಾರರು ತೆಗೆದುಕೊಂಡ ನಿರ್ಧಾರಗಳಿಂದ ಉಂಟಾದ ನಷ್ಟವನ್ನು ಸರಿದೂಗಿಸಿಕೊಳ್ಳಲು ಅಥವಾ ವಸೂಲಿ ಮಾಡಲು ಸೂಕ್ತ ಕ್ರಮ ಕೈಗೊಳ್ಳುವ ಶಿಫಾರಸುಗಳನ್ನು ಸರಕಾರಕ್ಕೆ ವಿವೇಚನೆಗೆ ಬಿಡಲಾಗಿದೆ ಮತ್ತು ಸರಕಾರವು ವರದಿಯಲ್ಲಿನ ಶಿಫಾರಸುಗಳನ್ನು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಪ್ರಕರಣವೇನು?

ಅರ್ಜಿದಾರ ನಾಗರಾಜಪ್ಪ ಅವರು ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವೀಧರ ಮತ್ತು ಕೃಷಿಕರಾಗಿ ಕೆಲಸ ಮಾಡುತ್ತಿದ್ದೆನೆಂದು ಹೇಳಿಕೊಂಡಿದ್ದಾರೆ. ಅವರು ಎಲ್ಲಿಯೂ ಅಂತಹ ದೊಡ್ಡ ಸಕ್ಕರೆ ಕಂಪನಿಯನ್ನು ನಡೆಸಲು ಯಾವುದೇ ಅಗತ್ಯ ಅನುಭವ ಅಥವಾ ಅರ್ಹತೆಯನ್ನು ಅಥವಾ ಯಾವುದೇ ಕಂಪನಿಯನ್ನು ನಡೆಸಿದ ನಿರ್ವಹಣಾ ಅನುಭವವನ್ನು ಹೊಂದಿಲ್ಲ. ಆದರೂ, ರಾಜ್ಯ ಸರಕಾರವು ಅವರನ್ನು 2008ರ ಅಕ್ಟೋಬರ್ 1 ರಂದು ರಾಜ್ಯ ಸಚಿವರ ಸ್ಥಾನಮಾನದೊಂದಿಗೆ ಮೈಶುಗರ್‌ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆನಂತರ, ಅವರನ್ನು 2012ರ ಡಿಸೆಂಬರ್‌ ನಲ್ಲಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು.

ಆಗ ಶಾಸಕರಾಗಿದ್ದ ಎಂ. ಶ್ರೀನಿವಾಸ್‌ 2012 ರಲ್ಲಿ ನಾಗರಾಜಪ್ಪ ವಿರುದ್ಧ ಅಂದಿನ ಮುಖ್ಯಮಂತ್ರಿಗೆ ದೂರು ಸಲ್ಲಿಸಿ, ನಾಗರಾಜಪ್ಪ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಗಂಭೀರ ಅಕ್ರಮಗಳು, ದುರ್ನಡತೆ ಮತ್ತು ದುಷ್ಕತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಜತೆಗೆ, ಅವರ ಅವಧಿಯಲ್ಲಿ ಮೈಶುಗರ್‌ಗೆ ನೂರಾರು ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದರು. ರಾಜ್ಯ ಸರಕಾರ 2014ರಲ್ಲಿ ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಉಪ ಲೋಕಾಯುಕ್ತರಿಗೆ ಆದೇಶ ನೀಡಿತ್ತು. ಉಪಲೋಕಾಯುಕ್ತರು ನಾಗರಾಜಪ್ಪ ವಿರುದ್ಧದ ಎಲ್ಲ ದಾಖಲೆಗಳು ಹಾಗೂ ವಿವರಗಳನ್ನು ಸಂಗ್ರಹಿಸಿ ತನಿಖೆ ನಡೆಸಿ ಸಮಗ್ರ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದರು. ಅದನ್ನು ಪ್ರಶ್ನಿಸಿ ನಾಗರಾಜಪ್ಪ ಹೈಕೋರ್ಟ್‌ ಮೊರೆ ಹೋಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X