Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆ-ಸೆಟ್ ಫಲಿತಾಂಶದ ಕಾರ್ಯವಿಧಾನ,...

ಕೆ-ಸೆಟ್ ಫಲಿತಾಂಶದ ಕಾರ್ಯವಿಧಾನ, ಮಾನದಂಡಗಳ ಮರುಪರಿಶೀಲನೆಗೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ18 Nov 2025 7:32 PM IST
share
ಕೆ-ಸೆಟ್ ಫಲಿತಾಂಶದ ಕಾರ್ಯವಿಧಾನ, ಮಾನದಂಡಗಳ ಮರುಪರಿಶೀಲನೆಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕೆ-ಸೆಟ್‌ (ಕೆಎಸ್‌ಇಟಿ) ಫಲಿತಾಂಶಗಳ ಘೋಷಣೆ ಕಾರ್ಯವಿಧಾನ ಮತ್ತು ಮಾನದಂಡಗಳನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್‌ಇಟಿ) ಕೇಂದ್ರ, ಮೈಸೂರು ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಹೈಕೋರ್ಟ್ ನಿರ್ದೇಶಿಸಿದೆ.

ಜತೆಗೆ, ಫಲಿತಾಂಶಗಳನ್ನು ಘೋಷಿಸುವಾಗ ಮತ್ತು ಅಭ್ಯರ್ಥಿಗಳನ್ನು ವಿಷಯವಾರು ಮತ್ತು ವರ್ಗವಾರು ಅರ್ಹರು ಎಂದು ಪ್ರಮಾಣೀಕರಿಸುವಾಗ 1990ರ ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ (ಮೀಸಲು ಮತ್ತು ನೇಮಕ ಇತ್ಯಾದಿ) ಕಾಯ್ದೆಯಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ಮೀಸಲಾತಿ ನಿಯಮವನ್ನು ಅನುಸರಿಸಲಾಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರಿನ ಎ. ಗೋಪಾಲ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, 2021ರಲ್ಲಿ (ಕೆಎಸ್‌ಇಟಿ)ಗೆ ಹಾಜರಾಗಿದ್ದ ಅರ್ಜಿದಾರರನ್ನು ಯಶಸ್ವಿ ಎಂದು ಘೋಷಿಸುವಂತೆ ಹಾಗೂ ಅವರಿಗೆ ಎಸ್‌ಇಟಿ ಪ್ರಮಾಣಪತ್ರ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕಾರಿಗಳಿಗೆ ನಿರ್ದೇಶಿಸಿದೆ.

ಹೈಕೋರ್ಟ್ ಆದೇಶವೇನು?

ಕೆಎಸ್‌ಇಟಿ ಫಲಿತಾಂಶಗಳ ಘೋಷಣೆಗೆ ಕಾರ್ಯವಿಧಾನ ಮತ್ತು ಮಾನದಂಡಗಳಲ್ಲಿಸೂಚಿಸಲಾದ ಮೊದಲ 2 ಹಂತಗಳು ಸ್ಲಾಟ್‌ಗಳ ಗುರುತಿಸುವಿಕೆ ಮತ್ತು ಮೀಸಲಾತಿಯನ್ನು ಒದಗಿಸುವ ಅಗತ್ಯವನ್ನು ಅನುಸರಿಸುತ್ತವೆ ಎಂಬುದನ್ನು ಗಮನಿಸಿರುವ ನ್ಯಾಯಾಲಯ, ಆದರೂ 3ನೇ ಹಂತದಲ್ಲಿ1990ರ ಮೀಸಲು ಕಾಯ್ದೆಯಲ್ಲಿ ಸೂಚಿಸಿದಂತೆ ಮೀಸಲಾತಿ ವಿಷಯದಲ್ಲಿ ಕಾನೂನಿನ ಅವಶ್ಯಕತೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಅಯ್ಕೆ ಮಾಡಬೇಕಾಗುತ್ತದೆ ಎಂದು ಹೇಳಿದೆ.

ಮೂರನೇ ಹಂತದಲ್ಲಿ ರಾಜ್ಯ ಸರಕಾರ ನಿಗದಿಪಡಿಸಿದ ರೋಸ್ಟರ್‌ ಅಂಶವನ್ನು ಅನುಸರಿಸುವ ಮೂಲಕ ಬದಲಾಯಿಸಬೇಕು. ಅಭ್ಯರ್ಥಿಗಳನ್ನು ಪ್ರಮಾಣೀಕರಿಸುವ ವಿಷಯದಲ್ಲಿ, ವಿಷಯವಾರು ಮೀಸಲಾತಿಯನ್ನು ಒದಗಿಸಲು ರೋಸ್ಟರ್‌ ಅನ್ನು ಅನುಸರಿಸುವುದು ಸರಳ ಪರಿಹಾರವಾಗಿದೆ. ಎಸ್‌ಇಟಿಗಾಗಿ ಯುಜಿಸಿ ಸೂಚಿಸಿರುವ ಸೂತ್ರವು ಕಾಯ್ದೆಯಡಿ ಸಕ್ರಿಯವಾಗಿ ಒದಗಿಸಿರುವ ಮೀಸಲಾತಿಯ ಶಾಸನಬದ್ಧ ಅವಶ್ಯಕತೆಯನ್ನು ನೋಡಿಕೊಳ್ಳುವುದಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಅರ್ಜಿದಾರರ ಆಕ್ಷೇಪವೇನು?

ವಿಷಯವಾರು ಹಾಗೂ ವರ್ಗವಾರು ಹಂಚಿಕೆ ಮಾಡುವ ನಿಯಮಗಳಲ್ಲಿ 1990ರ ಪರಿಶಿಷ್ಟರ ಮೀಸಲು ಕಾಯ್ದೆಯಲ್ಲಿ ಎಸ್‌ಸಿಗೆ ನಿಗದಿಪಡಿಸಿರುವ ಶೇ.15, ಎಸ್‌ಟಿಗೆ ಶೇ.3 ಮೀಸಲು ನೀತಿಯನ್ನು ಪಾಲನೆ ಮಾಡಲಾಗುತ್ತಿಲ್ಲ. ಇದರಿಂದ, ಅನ್ಯಾಯವಾಗುತ್ತಿದೆ ಎಂದು ಆಕ್ಷೇಪಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X