Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಎಸ್‌ಸಿಎ ವ್ಯವಸ್ಥಾಪನಾ ಸಮಿತಿ ನಿರ್ಣಯ...

ಕೆಎಸ್‌ಸಿಎ ವ್ಯವಸ್ಥಾಪನಾ ಸಮಿತಿ ನಿರ್ಣಯ ಎತ್ತಿ ಹಿಡಿದ ಹೈಕೋರ್ಟ್‌; ಚುನಾವಣೆಗಿದ್ದ ಅಡ್ಡಿ ನಿವಾರಣೆ

ವಾರ್ತಾಭಾರತಿವಾರ್ತಾಭಾರತಿ18 Nov 2025 8:57 PM IST
share
ಕೆಎಸ್‌ಸಿಎ ವ್ಯವಸ್ಥಾಪನಾ ಸಮಿತಿ ನಿರ್ಣಯ ಎತ್ತಿ ಹಿಡಿದ ಹೈಕೋರ್ಟ್‌; ಚುನಾವಣೆಗಿದ್ದ ಅಡ್ಡಿ ನಿವಾರಣೆ

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಪದಾಧಿಕಾರಿ ಅಥವಾ ವ್ಯವಸ್ಥಾಪನಾ ಸಮಿತಿ (ಮ್ಯಾನೇಜಿಂಗ್‌ ಕಮಿಟಿ) ಸದಸ್ಯತ್ವ ಗರಿಷ್ಠ 9 ವರ್ಷ ಅವಧಿ ಮಾತ್ರ ಇರಲಿದೆ. ಈ ಅವಧಿ ಪೂರೈಸಿದವರು ಸಂಸ್ಥೆಯ ಯಾವುದೇ ಹುದ್ದೆ ಅಥವಾ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಕೆಎಸ್‌ಸಿಎ ನಿರ್ಣಯವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಇದರಿಂದ, ನವೆಂಬರ್‌ 30ರಂದು ನಿಗದಿಯಾಗಿರುವ ಕೆಎಸ್‌ಸಿಎ ಚುನಾವಣೆಗೆ ಎದುರಾಗಿದ್ದ ಅಡ್ಡಿ ನಿವಾರಣೆಯಾದಂತಿದೆ.

ವ್ಯವಸ್ಥಾಪನಾ ಸಮಿತಿಯು ಅಕ್ಟೋಬರ್‌ 14ರಂದು ಕೈಗೊಂಡಿರುವ ನಿರ್ಣಯ ಮತ್ತು ಸದಸ್ಯರಿಗೆ ವ್ಯವಸ್ಥಾಪನಾ ಸಮಿತಿ ರವಾನಿಸಿದ್ದ ಸಂವಹನಕ್ಕೆ ತಡೆ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕೆಎಸ್‌ಸಿಎ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಪ್ರತಿವಾದಿಗೆ ನೋಟಿಸ್‌ ಜಾರಿ ಮಾಡದೇ ಇರುವುದಕ್ಕೆ ಸೂಕ್ತ ಕಾರಣ ನೀಡದ ಆಧಾರದಲ್ಲಿ ವಿಚಾರಣಾ ನ್ಯಾಯಾಲಯದ ಏಕಪಕ್ಷೀಯ ಆದೇಶವನ್ನು ರದ್ದುಪಡಿಸಲಾಗಿದೆ. ಅರ್ಜಿ ಕುರಿತು ಮೆರಿಟ್‌ ಮೇಲೆ ಯಾವುದೇ ಆದೇಶ ಮಾಡಲಾಗಿಲ್ಲ. ಈ ಆದೇಶವನ್ನು ಗಮನದಲ್ಲಿಟ್ಟುಕೊಳ್ಳದೇ ವಿಚಾರಣಾ ನ್ಯಾಯಾಲಯವು ಅರ್ಜಿದಾರರು ಮತ್ತು ಪ್ರತಿವಾದಿಗಳನ್ನು ಆಲಿಸಿ, ಪ್ರಕರಣ ಸಂಬಂಧ ಸೂಕ್ತ ಆದೇಶ ಹೊರಡಿಸಬಹುದು ಎಂದು ಹೈಕೋರ್ಟ್‌ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಕರಣವೇನು?

ಕೆಎಸ್‌ಸಿಎ ನೇಮಿಸಿದ್ದ ಹಿರಿಯ ವಕೀಲರನ್ನು ಒಳಗೊಂಡಿದ್ದ ಕಾನೂನು ಸಲಹಾ ಉಪಸಮಿತಿಯು ವ್ಯವಸ್ಥಾಪನಾ ಸಮಿತಿ ಸದಸ್ಯ ಅಥವಾ ಪದಾಧಿಕಾರಿಯಾಗಿದ್ದರೂ 9 ವರ್ಷಗಳಿಗೆ ಮಾತ್ರ ಅಧಿಕಾರ ಅಥವಾ ಚುನಾವಣೆ ಎದುರಿಸಬಹುದು ಎಂದು ಅಭಿಪ್ರಾಯ ನೀಡಿತ್ತು. ಇದನ್ನು ಬಹುಮತದ ಆಧಾರದಲ್ಲಿ ಕೆಎಸ್‌ಸಿಎ ವ್ಯವಸ್ಥಾಪನಾ ಸಮಿತಿಯು ಅಕ್ಟೋಬರ್‌ 14ರ ಸಭೆಯಲ್ಲಿ ಒಪ್ಪಿಕೊಂಡು, ಈ ಸಂಬಂಧ ಸಂವಹನವನ್ನು ಎಲ್ಲ ಸದಸ್ಯರಿಗೆ ಕಳುಹಿಸಿಕೊಟ್ಟಿತ್ತು. ಈ ನಡುವೆ, ಕೆಎಸ್‌ಸಿಎ ವ್ಯವಸ್ಥಾಪನಾ ಸಮಿತಿ ಸದಸ್ಯ ಎ.ವಿ. ಶಶಿಧರ್‌ ಅವರು ಕೆಎಸ್‌ಸಿಎ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿ, ವಿಚಾರಣಾಧೀನ ನ್ಯಾಯಾಲಯದಲ್ಲಿ ತಡೆ ಪಡೆದಿದ್ದರು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ಲೋಧಾ ಸಮಿತಿ ತೀರ್ಪಿನ ಪ್ರಕಾರ ಯಾವುದೇ ಕ್ರಿಕೆಟ್‌ ಸಂಸ್ಥೆಯಲ್ಲಿ ಯಾರೂ ಸಹ 9 ವರ್ಷಗಳಿಗೆ ಮೀರಿ ಅಧಿಕಾರದಲ್ಲಿರುವಂತಿಲ್ಲ. ಆದರೆ, ಕೆಎಸ್‌ಸಿಎಯಲ್ಲಿ 18 ವರ್ಷದವರೆಗೆ ಅಧಿಕಾರದಲ್ಲಿರುವ ಪ್ರಯತ್ನ ಮಾಡಲಾಗಿದೆ ಎನ್ನಲಾಗಿತ್ತು.

ಚುನಾವಣೆಯಲ್ಲಿ ನಿಯಮ ಪಾಲಿಸಲು ವಿಭಾಗೀಯ ಪೀಠ ನಿರ್ದೇಶನ:

ಮತ್ತೊಂದೆಡೆ, ಕೆಎಸ್‌ಸಿಎ ವ್ಯವಸ್ಥಾಪನಾ ಸಮಿತಿಗೆ ನಡೆಯಲಿರುವ ಚುನಾವಣೆಯಲ್ಲಿ ನಿಯಮ, ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೆಎಸ್‌ಸಿಎ‌ಗೆ ಹೈಕೋರ್ಟ್ ನಿರ್ದೇಶಿಸಿದೆ.

ಕೆಎಸ್‌ಸಿಎ ಖಜಾಂಚಿ ವಿನಯ್‌ ಮೃತ್ಯುಂಜಯ, ಕಾರ್ಯದರ್ಶಿ ಸಂತೋಷ್‌ ಮೆನನ್‌, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಿ.ಎಸ್‌. ಅರುಣ್‌, ಕೋಟಾ ಕೋದಂಡ ಮತ್ತು ತಿಲಕ್‌ ನಾಯ್ಡು ಅವರ ಆಯ್ಕೆ ಪ್ರಶ್ನಿಸಿ ಬಿ.ಎನ್‌.ಮಧುಕರ್‌ ಎಂಬುವರು ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿರುವ ನ್ಯಾಯಮೂರ್ತಿ ಡಿ.ಕೆ.ಸಿಂಗ್‌ ಹಾಗೂ ನ್ಯಾಯಮೂರ್ತಿ ತಾರಾ ವಿತಾಸ್ತಾ ಗಂಜು ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

ಪ್ರತಿವಾದಿಗಳಾದ ವಿನಯ್‌ ಮೃತ್ಯುಂಜಯ, ಸಂತೋಷ್‌ ಮೆನನ್‌, ಡಿ.ಎಸ್‌.ಅರುಣ್‌, ಕೋಟಾ ಕೋದಂಡ ಮತ್ತು ತಿಲಕ್‌ ನಾಯ್ಡು 2019ರಲ್ಲಿ ಆಯ್ಕೆಯಾಗಿದ್ದು, ಅವರ ಅವಧಿಯು 2022ರಲ್ಲೇ ಮುಕ್ತಾಯವಾಗಿದೆ. ಸದ್ಯ ವ್ಯವಸ್ಥಾಪನಾ ಸಮಿತಿಗೆ ಹೊಸದಾಗಿ ಚುನಾವಣೆ ಘೋಷಿಸಲಾಗಿದ್ದು, ನವೆಂಬರ್ 30ರಂದು ಚುನಾವಣಾ ದಿನಾಂಕ‌ ನಿಗದಿಯಾಗಿದೆ. ಆದ್ದರಿಂದ,‌ ಅರ್ಜಿ ಸಂಬಂಧ ಯಾವುದೇ ಆದೇಶದ ಅಗತ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಜತೆಗೆ, ಹಾಲಿ ನಿಯಮ, ನಿಬಂಧನೆ ಮತ್ತು ಬೈಲಾಗಳನ್ನು ಕಡ್ಡಾಯವಾಗಿ ಪಾಲನೆ ಮಾಡಿ ಚುನಾವಣೆ ನಡೆಸಬೇಕು ಎಂದು ಕೆಎಸ್‌ಸಿಎ‌ಗೆ ನಿರ್ದೇಶಿಸಿ, ಅರ್ಜಿ ಇತ್ಯರ್ಥಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X